ಕುಂದಾಪ್ರ ಡಾಟ್ ಕಾಂ ಸುದ್ದಿ.
ಉಡುಪಿ: ಕರಾವಳಿ ಜಿಲ್ಲೆಗಳ ಜಾನಪದ ಕ್ರೀಡೆ ಕಂಬಳವನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಒಟ್ಟು ಒಂದು ಕೋಟಿ ರೂ. ಸಹಾಯಧನ ನೀಡಲು ಕರ್ನಾಟಕ ರಾಜ್ಯ ಸರಕಾರದ ಆದೇಶಿಸಿದೆ.
ಕಂಬಳ ಕ್ರೀಡೆಗೆ ಪ್ರೋತ್ಸಾಹ ಹಾಗೂ ಪ್ರವಾಸೋದ್ಯಮ ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ ಪ್ರತಿ ಕಂಬಳಕ್ಕೆ 5 ಲಕ್ಷ ರೂ. ಸಹಾಯಧನ ನೀಡಲು ಸರ್ಕಾರ ಆದೇಶ ಹೊರಡಿಸಿದೆ. ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಮಗದ ಮೂಲಕ ಅನುದಾನ ಬಿಡುಗಡೆಗೊಳ್ಳಲಿದ್ದು, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 10 ಕಂಬಳಗಳನ್ನು ನಡೆಸಲು ಪ್ರತಿ ಕಂಬಳಕ್ಕೆ 5 ಲಕ್ಷದಂತೆ ಒಟ್ಟು 50 ಲಕ್ಷ ರೂ. ಮತ್ತು ಉಡುಪಿ ಜಿಲ್ಲೆಯಲ್ಲಿ 10 ಕಂಬಳಗಳನ್ನು ನಡೆಸಲು ಪ್ರತಿ ಕಂಬಳಕ್ಕೆ 5 ಲಕ್ಷ ರೂ.ಗಳಂತೆ ಒಟ್ಟು 50 ಲಕ್ಷ ರೂ.ಗಳನ್ನು ನೀಡಲಾಗುತ್ತದೆ.
ಪ್ರವಾಸೋದ್ಯಮ, ಪರಿಸರ ಹಾಗೂ ಜೀವಿಶಾಸ್ತ್ರ ಸಚಿವರಾದ ಸಿ.ಪಿ.ಯೋಗೇಶ್ವರ ಅವರು ಕೆಲವು ದಿನಗಳ ಹಿಂದೆ ಪ್ರವಾಸೋದ್ಯಮ ಇಲಾಖೆಯ ಪ್ರಗತಿ ಪರಿಶೀಲನೆಗಾಗಿ ದಕ್ಷಿಣ ಕನ್ನಡ ಜಿಲ್ಲೆಗೆ ಭೇಟಿ ನೀಡಿದ್ದ ವೇಳೆ ಎರಡು ದಿನಗಳ ಭೇಟಿ ನೀಡಿದ್ದರು. ಈ ಸಂದರ್ಭದಲ್ಲಿ ಕಂಬಳ ವೀಕ್ಷಿಸಿ ಸ್ಥಳದಲ್ಲಿಯೇ ಪ್ರತಿ ಕಂಬಳಕ್ಕೆ 5 ಲಕ್ಷ ರೂ. ಸಹಾಯಧನ ಘೋಷಣೆ ಮಾಡಿದ್ದರು. ಈ ಘೋಷಣೆಯ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಸಹಾಯಧನ ಬಿಡುಗಡೆ ಆದೇಶವನ್ನು ಹೊರಡಿಸಿದೆ.
ಸಹಾಯಧನಕ್ಕೇನು ಷರತ್ತು?
- ಕಂಬಳಕ್ಕಾಗಿಯೇ ಬಿಡುಗಡೆ ಮಾಡಿದ ಅನುದಾನವನ್ನು ಬಳಸಿಕೊಳ್ಳಬೇಕು.
- ಮಂಜೂರು ಮಾಡಿ ಅನುದಾನವನ್ನು ಸಮರ್ಪಕವಾಗಿ ಹಾಗೂ ಸಂಪೂರ್ಣವಾಗಿ ವಿನಿಯೋಗಿಸಿದಕ್ಕೆ ಹಣ ಬಳಕೆ ಪ್ರಮಾಣ ಪತ್ರವನ್ನು ಮತ್ತು ಲೆಕ್ಕ ಪರಿಶೋಧಕರಿಂದ ಲೆಕ್ಕಪಟ್ಟಿಯನ್ನು ಪಡೆಯಬೆಕು.
- ಸಂಬಂಧಪಟ್ಟ ಜಿಲ್ಲಾಧಿಕಾರಿಗಳು ಕಂಬಳವನ್ನು ಆಯ್ಕೆ ಮಾಡಬೇಕು.
- ಆಯೋಜಿಸಲಾಗುವ ಕಂಬಳವು ಅತ್ಯಧಿಕ ಸಂಖ್ಯೆಯಲ್ಲಿ ಪ್ರವಾಸಿಗರನ್ನು ಆಕರ್ಷಿಸುವಂತಿರಬೇಕು.
- ಕಂಬಳವನ್ನು ಒಂದು ತಂಡದಿಂದ ಅಯೋಜಿಸಬೇಕು. ಸದರಿ ತಂಡವು ಒಂದೇ ಕುಟುಂಬಕ್ಕೆ ಸೇರಿರಬಾರದು.