ಕುಂದಾಪುರ: ಸಮುದಾಯ ಸಾಂಸ್ಕೃತಿಕ ಸಂಘಟನೆ ಮತ್ತು ಬಸ್ರೂರಿನ ಶ್ರೀ ಶಾರದಾ ಕಾಲೇಜಿನ ಸಹಯೋಗದೊಂದಿಗೆ ಪದವಿ ವಿದ್ಯಾರ್ಥಿಗಳಿಗಾಗಿ ಚಲನಚಿತ್ರ ರಸಗ್ರಹಣ ತರಗತಿಯನ್ನು ಹಮ್ಮಿಕೊಂಡಿತ್ತು. ಪಿ. ಶೇಷಾದ್ರಿ ನಿರ್ದೇಶಿಸಿರುವ ‘ಡಿಸೆಂಬರ್ 1’ ಚಲನಚಿತ್ರವನ್ನು ಪ್ರದರ್ಶಿಸಲಾಯಿತು. ಪ್ರದರ್ಶನದ ನಂತರ ಪ್ರದೀಪಕುಮಾರ ಶೆಟ್ಟಿ ಕೆಂಚನೂರು ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದರು. ಸಿನೇಮಾ ಪ್ರದರ್ಶನದ ಮೊದಲು ನಡೆದ ಮಾತುಕತೆಯಲ್ಲಿ ಕಾಲೇಜಿನ ಪ್ರಾಂಶುಪಾಲ ರಾಧಾಕೃಷ್ಣ ಶೆಟ್ಟಿ, ಡಾ. ದಿನೇಶ ಹೆಗ್ಡೆ, ಸಮುದಾಯ ಕುಂದಾಪುರದ ಅಧ್ಯಕ್ಷ ಉದಯ ಗಾಂವಕಾರ, ಜಿ.ವಿ.ಕಾರಂತ, ಸದಾನಂದ ಬೈಂದೂರು, ರಾಘವೇಂದ್ರ ಕಾಲ್ತೋಡು, ಪ್ರದೀಪ ಶೆಟ್ಟಿ ಮೊದಲಾದವರು ಭಾಗವಹಿಸಿದ್ದರು.
ಸುನಿಲ್ ಹೆಚ್. ಜಿ. ಬೈಂದೂರು
ಸುನಿಲ್ ಬೈಂದೂರು ಅವರು 'ಕುಂದಾಪ್ರ ಡಾಟ್ ಕಾಂ' ಅಂತರ್ಜಾಲ ಸುದ್ದಿತಾಣದ ಮುಖ್ಯ ಸಂಪಾದಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಎಂ.ಕಾಂ ಸ್ನಾತಕೋತ್ತರ ಪದವಿ ಪೂರೈಸಿದ್ದಾರೆ. 2009ರಲ್ಲಿ ಪದವಿ ವಿದ್ಯಾರ್ಥಿಯಾಗಿದ್ದಾಗ ಸಾಹಿತ್ಯ ಕೃಷಿ ಗುರುತಿಸಿ '14ನೇ ಕರಾವಳಿ ವಿದ್ಯಾರ್ಥಿ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಆಯ್ಕೆ', 2014ರಲ್ಲಿ 'ಆದಿ ಗ್ರಾಮೋತ್ಸವ ಯುವ ಗೌರವ', ಪತ್ರಿಕೋದ್ಯಮ ಕ್ಷೇತ್ರದ ಸಾಧನೆಗಾಗಿ 2016ರಲ್ಲಿ 'ಕರ್ನಾಟಕ ಜ್ಯೋತಿ ರಾಜ್ಯ ಪ್ರಶಸ್ತಿ' ಪ್ರಶಸ್ತಿ'ಗೆ ಭಾಜನರಾಗಿದ್ದಾರೆ. 2012ರಿಂದ ಕುಂದಾಪ್ರ ಡಾಟ್ ಕಾಂ ಸುದ್ದಿತಾಣವನ್ನು ಮುನ್ನಡೆಸುತ್ತಿದ್ದಾರೆ.









