ಕೋವಿಡ್ ಸುರಕ್ಷಾ ನಿಯಮ ಉಲ್ಲಂಘನೆ ದಂಡ ಪ್ರಕರಣ ಹೆಚ್ಚು ಮಾಡಿ: ಜಿಲ್ಲಾಧಿಕಾರಿ

Click Here

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಉಡುಪಿ: ಜಿಲ್ಲೆಯಲ್ಲಿ ಕೋವಿಡ್ ಎರಡನೇ ಅಲೆಯು ಪ್ರಾರಂಭವಾಗುತ್ತಿದ್ದು, ಸುರಕ್ಷತಾ ಕ್ರಮಗಳನ್ನು ಪಾಲಿಸುವಂತೆ ಜಿಲ್ಲಾಡಳಿತ ಸೂಚನೆ ನೀಡಿದ್ದರೂ ಸಹ ಸಾರ್ವಜನಿಕರು ಕೋವಿಡ್ ಸುರಕ್ಷತಾ ಕ್ರಮಗಳಾದ ಮಾಸ್ಕ್ ಧರಿಸದಿರುವುದು, ಸಾಮಾಜಿಕ ಅಂತರಪಾಲನೆ ಮಾಡದೇ ಇರುವುದು ಕಂಡು ಬರುತ್ತಿದ್ದು, ನಿಯಮ ಉಲ್ಲಂಘಿಸುವವರ ವಿರುದ್ಧ ದಂಡ ಪ್ರಕರಣಗಳನ್ನು ಹೆಚ್ಚು ಮಾಡುವಂತೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಜಿ .ಜಗದೀಶ್ ಸೂಚನೆ ನೀಡಿದ್ದಾರೆ.

Call us

Click Here

ಅವರು ಜಿಲ್ಲೆಯ ಎಲ್ಲಾ ತಹಸೀಲ್ದಾರ್ಗಳು, ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಗಳು, ಉಡುಪಿ ನಗರಸಭೆಯ ಪೌರಾಯುಕ್ತರು, ಎಲ್ಲಾ ನಗರ ಸ್ಥಳೀಯ ಸಂಸ್ಥೆಗಳ ಮುಖ್ಯಸ್ಥರುಗಳಿಗೆ ಝೂಮ್ ಮೀಟಿಂಗ್ ಮೂಲಕ ಸಭೆ ನಡೆಸಿ, ತಮ್ಮ ವ್ಯಾಪ್ತಿಯಲ್ಲಿ ಸುರಕ್ಷಾ ನಿಯಮಗಳನ್ನು ಉಲ್ಲಂಘಿಸುವವರ ವಿರುದ್ಧ ದಂಡ ವಿಧಿಸುವ ಪ್ರಕರಣಗಳನ್ನು ಹೆಚ್ಚು ಮಾಡುವಂತೆ ಸೂಚನೆ ನೀಡಿದರು.

ಸರ್ಕಾರದ ಸುತ್ತೋಲೆಯಲ್ಲಿ ತಿಳಿಸಿರುವಂತೆ, ಸಾಮಾಜಿಕ ಪಾಲನೆ ಕುರಿತಂತೆ ವಿವಿಧ ಮಾಲ್ಗಳು, ಹಾಲ್ಗಳು ಸೇರಿದಂತೆ ವಿವಿಧ ಸ್ಥಳಗಳಲ್ಲಿ ನಡೆಯುವ ಸಮಾರಂಭಗಳಲ್ಲಿ ನಿಗಧಿಪಡಿಸಿರುವ ಸಂಖ್ಯೆಗಿಂತ ಹೆಚ್ಚಿನ ಸಾರ್ವಜನಿಕರು ಸೇರಿದ್ದರೆ ಸಂಬಂಧಪಟ್ಟವರ ವಿರುದ್ಧ ಸುತ್ತೋಲೆಯಂತೆ ಸೂಕ್ತ ಕ್ರಮ ಕೈಗೊಳ್ಳಿ. ಸುರಕ್ಷಾ ನಿಯಮಗಳನ್ನು ಉಲ್ಲಂಘಿಸುವವರ ವಿರುದ್ದ ದಂಢ ವಿಧಿಸುವ ಅಧಿಕಾರವನ್ನು ವಿವಿಧ ಅಧಿಕಾರಿಗಳಿಗೆ ಈಗಾಗಲೇ ಪ್ರತ್ಯಾಯೋಜಿಸಿದ್ದು, ಅದರಂತೆ ಕ್ರಮ ಕೈಗೊಳ್ಳಿ, ಇಲ್ಲವಾದಲ್ಲಿ ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಜಿ.ಜಗದೀಶ್ ಎಚ್ಚರಿಸಿದರು.

ಕೋವಿಡ್ ಎರಡನೇ ಅಲೆಯ ನಿಯಂತ್ರಣಕ್ಕೆ ಕೋವಿಡ್ ಸುರಕ್ಷಾ ನಿಯಮಗಳ ಕಟ್ಟುನಿಟ್ಟಿನ ಪಾಲನೆ ಅತ್ಯಗತ್ಯವಾಗಿದ್ದು, ನಿಯಮಗಳನ್ನು ಉಲ್ಲಂಘಿಸುವವರ ವಿರುದ್ಧ ದಂಡ ವಿಧಿಸುವ ಪ್ರಕರಣಗಳನ್ನು ದಾಖಲಿಸಲು ಈಗಾಗಲೇ ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದ್ದು, ಸಾರ್ವಜನಿಕರು ಎಲ್ಲಾ ಸುರಕ್ಷಾ ನಿಯಮಗಳನ್ನು ತಪ್ಪದೇ ಪಾಲಿಸುವುದರ ಮೂಲಕ ಜಿಲ್ಲೆಯನ್ನು ಕೋವಿಡ್ 2 ನೇ ಅಲೆಯಿಂದ ರಕ್ಷಿಸಲು ಸಹಕರಿಸುವಂತೆ ಜಿಲ್ಲಾಧಿಕಾರಿ ಜಿ. ಜಗದೀಶ್ ತಿಳಿಸಿದ್ದಾರೆ.

ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು, ನಗರಾಭಿವೃಧ್ದಿ ಕೋಶದ ಯೋಜನಾ ನಿರ್ದೇಶಕ ಅರುಣಪ್ರಭ ಮತ್ತಿತರರು ಸಭೆಯಲ್ಲಿ ಉಪಸ್ಥಿತರಿದ್ದರು.

Click here

Click here

Click here

Click Here

Call us

Call us

Leave a Reply