ಮಾ.27ರಂದು ಮಯ್ಯಾಡಿಯಲ್ಲಿ ವಿಶ್ವ ರಂಗಭೂಮಿ ದಿನಾಚರಣೆ

Click Here

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು: ಕರ್ನಾಟಕ ನಾಟಕ ಅಕಾಡೆಮಿ ಬೆಂಗಳೂರು ಹಾಗೂ ಲಾವಣ್ಯ ರಿ. ಬೈಂದೂರು ಸಹಯೋಗದಲ್ಲಿ ವಿಶ್ವರಂಗಭೂಮಿ ದಿನಾಚರಣೆ 2021 ಮಾ.27ರ ಶನಿವಾರ ಸಂಜೆ5.30ಕ್ಕೆ ಮಯ್ಯಾಡಿಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರಾರ್ಥಮಿಕ ಶಾಲೆಯ ವಠಾರದಲ್ಲಿ ನಡೆಯಲಿದೆ ಎಂದು ಸಂಸ್ಥೆಯ ಅಧ್ಯಕ್ಷ ಉದಯ್ ಆಚಾರ್ ತಿಳಿಸಿದರು.

Call us

Click Here

ಬೈಂದೂರು ಪ್ರೆಸ್ ಕ್ಲಬ್‌ನಲ್ಲಿ ಜರುಗಿದ ಮಾಧ್ಯಮಗೋಷ್ಠಿಯನ್ನುದ್ದೇಶಿಸಿ ಅವರು ಮಾತನಾಡಿ ಬೈಂದೂರು ಶಾಸಕ ಬಿ. ಎಂ. ಸುಕುಮಾರ ಶೆಟ್ಟಿ ಉದ್ಘಾಟಿಸಲಿದ್ದು, ರಂಗಭೂಮಿ ದಿನಾಚರಣೆ ಕುರಿತು ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ಪ್ರೋ. ರಘು ನಾಯ್ಕ್ ಉಪನ್ಯಾಸಗೈಯಲಿದ್ದಾರೆ. ಮುಖ್ಯ ಅಥಿತಿಗಳಾಗಿ ಬೈಂದೂರು ತಾಲೂಕು ಪಂಚಾಯತ್ ಉಪಾಧ್ಯಕ್ಷೆ ಮಾಲಿನಿ ಕೆ., ಜಿಲ್ಲಾ ಪಂಚಯತ್ ಸದಸ್ಯರಾದ ಶಂಕರ್ ಪೂಜಾರಿ, ಕರ್ನಾಟಕ ನಾಟಕ ಅಕಾಡೆಮಿಯ ಸದಸ್ಯರಾದ ಎಂ. ಕೆ. ಮಠ ಉಪ್ಪಿನಂಗಡಿ, ಹಾಗೂ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಾಲೆಯ ಮುಖ್ಯೋಪಾಧ್ಯರಾದ ರಾಜು ಎಸ್. ಇವರು ಉಪಸ್ಥಿತರಿರಲಿದ್ದಾರೆ

ಕಾರ್ಯಕ್ರಮದಲ್ಲಿ ಹಿರಿಯ ರಂಗಕರ್ಮಿ ರಂಗ ನಿರ್ದೇಶಕರಾದ ಕೋ. ಶಿವಾನಂದ ಕಾರಂತ್ ಹಾಗೂ ಸತ್ಯನಾ ಕೋಡೆರಿ ಇವರನ್ನು ಸನ್ಮಾನಿಸಲಾಗುವುದು ಎಂದರು. ಸಾಂಸ್ಕ್ರತಿಕ ಕಾರ್ಯಕ್ರಮವಾಗಿ ಲಾವಣ್ಯ ಕಲಾವಿದರಿಂದ ಹಾಸ್ಯಮಯ ನಾಟಕ ’ಕುಷ್ಣ ಸಂಧಾನ’ ಪ್ರದರ್ಶನಗೊಳ್ಳಲಿದೆ ಎಂದವರು ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಲಾವಣ್ಯ ಕಾರ್ಯದರ್ಶಿ ಮೂರ್ತಿ ಡಿ. ಬೈಂದೂರು, ವ್ಯವಸ್ಥಾಪಕರಾದ ರಾಮ ಟೈಲರ್, ಗಣಪತಿ ಎಸ್. ಉಪಸ್ಥಿತರಿದ್ದರು.

Leave a Reply