ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಕೋವಿಡ್ ಮಾರ್ಗಸೂಚಿಗಳನ್ನು ಪಾಲಿಸಬೇಕಾದದ್ದು ಎಲ್ಲರ ಕರ್ತವ್ಯ ಆದರೆ ಕೋವಿಡ್ ಮಾರ್ಗಸೂಚಿ ಹೆಸರಿನಲ್ಲಿ ಜನಸಾಮಾನ್ಯರಿಗೆ, ವ್ಯಾಪಾರಸ್ಥರಿಗೆ, ಸಾರಿಗೆ ಉದ್ಯಮದಾರರಿಗೆ ಅಧಿಕಾರಿಗಳು ದಂಡದ ಹೆಸರಿನಲ್ಲಿ ಅನಗತ್ಯ ಕಿರುಕುಳ ನೀಡುತ್ತಿರುವುದು ಖಂಡನೀಯ ಎಂದು ಕುಂದಾಪುರ ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ. ವಿಕಾಸ್ ಹೆಗ್ಡೆ ತಿಳಿಸಿದ್ದಾರೆ.
ಕೋವಿಡ್ ನಿಯಂತ್ರಣಕ್ಕೆ ಸಾವಿರಾರು ರೂಪಾಯಿಯ ದಂಡವೊಂದೇ ಪರಿಹಾರವಲ್ಲ. ದಂಡ ಹಾಕುವ ಮೊದಲು ಜಾಗೃತಿ ಮೂಡಿಸುವ ಕೆಲಸವಾಗಲಿ. ಈಗಾಗಲೇ ಲಾಕ್’ಡೌನ್, ಸೀಲ್ಡೌನ್ ಮುಂತಾದವುಗಳಿಂದ ಎಲ್ಲಾ ಉದ್ದಿಮೆಗಳು ತೀವ್ರ ಆರ್ಥಿಕ ಸಂಕಷ್ಟಕ್ಕೆ ಒಳಗಾಗಿದಿ. ಸ್ವಲ್ಪ ಪ್ರಮಾಣದ ಚೇತರಿಕೆ ಕಾಣುವಾಗ ಸರ್ಕಾರ ಅವರ ಪರಿಸ್ಥಿತಿಯನ್ನು ಗಮನದಲ್ಲಿ ಇಟ್ಟುಕೊಂಡು ಮಾರ್ಗಸೂಚಿಗನ್ನು ರಚಿಸಬೇಕು ಎಂದು ಆಗ್ರಹಿಸಿದ್ದಾರೆ.