ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ತ್ರಾಸಿ ಗ್ರಾಮ ಪಂಚಾಯತ್ ಆಶ್ರಯದಲ್ಲಿ ಪ.ಜಾತಿ, ಪ.ಪಂಗಡ, ವಿಕಲಚೇತನರ ಕಲ್ಯಾಣ ಕಾರ್ಯಕ್ರಮ ಹಾಗೂ ಶೇ.2ರ ನಿಧಿಯಡಿ ಕ್ರೀಡಾ ಮತ್ತು ಸಾಂಸ್ಕೃತಿಕ ಕಾರ್ಯಕ್ರಮದಡಿ ಸವಲತ್ತು ವಿತರಣೆ ಮತ್ತು ಜಲಜೀವನ್ ಮಿಷನ್ (ಮನೆ ಮನೆಗೆ ಗಂಗೆ) ಅಭಿಯಾನದಡಿ ಅರಿವು ಕಾರ್ಯಕ್ರಮ ತ್ರಾಸಿಯ ಅಂಬೇಡ್ಕರ್ ಸಭಾಭವನದಲ್ಲಿ ನಡೆಯಿತು.
ತ್ರಾಸಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಗೀತಾ ದೇವಾಡಿಗ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ಪಂಚಾಯತ್ ಸದಸ್ಯೆ ಶೋಭಾ ಜಿ.ಪುತ್ರನ್, ತಾಪಂ ಸದಸ್ಯ ನಾರಾಯಣ ಕೆ.ಗುಜ್ಜಾಡಿ, ಗ್ರಾಪಂ ಉಪಾಧ್ಯಕ್ಷೆ ಹೇಮಾ, ಗ್ರಾಪಂ ಸದಸ್ಯರಾದ ವಿಜಯ ಪೂಜಾರಿ, ರೆನ್ಸಮ್ ಪಿರೇರಾ ಉಪಸ್ಥಿತರಿದ್ದರು.
ಜಲ ಜೀವನ್ ಮಿಷನ್ ಕಾರ್ಯಕ್ರಮದ ಬಗ್ಗೆ ಟಿ.ವಿ.ಗಿರೀಶ್ ಮಾಹಿತಿ ನೀಡಿದರು. ತ್ರಾಸಿ ಗ್ರಾಮ ಪಂಚಾಯತ್‌ನ ೨೦೨೦-೨೧ನೇ ಸಾಲಿನ ವಿವಿಧ ಯೋಜನೆಯಡಿ ಪ.ಜಾತಿ, ಪ.ಪಂಗಡ ಹಾಗೂ ವಿಕಲಚೇತನರಿಗೆ ಮತ್ತು ಶಾಲೆ ಹಾಗೂ ಅಂಗನವಾಡಿಗಳಿಗೆ ಸುಮಾರು ೩ ಲಕ್ಷ ರೂ. ಮೌಲ್ಯದ ವಿವಿಧ ಸವಲತ್ತುಗಳನ್ನು ವಿತರಿಸಲಾಯಿತು.
ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಶೋಭಾ ಎಸ್. ಸ್ವಾಗತಿಸಿ ಕಾರ್ಯಕ್ರಮ ನಿರ್ವಹಿಸಿದರು. ಲೆಕ್ಕಸಹಾಯಕ ಶಿವಾನಂದ ವಂದಿಸಿದರು.