ಕುಂದಾಪ್ರ ಡಾಟ್ ಕಾಂ ಸುದ್ದಿ.
ಮೂಡುಬಿದಿರೆ: ಇನ್ಸ್‌ಟಿಟ್ಯೂಟ್ ಆಫ್ ಚಾರ್ಟರ್ಡ್ ಅಕೌಂಟೆಂಟ್ಸ್ ಆಫ್ ಇಂಡಿಯಾ ಆಯೋಜಿಸಿದ್ದ ಸಿಎ ಇಂಟರ್‌ಮಿಡಿಯೇಟ್ ಪರೀಕ್ಷೆಯಲ್ಲಿ ಆಳ್ವಾಸ್ ಕಾಲೇಜಿನ ಬಿ.ಕಾಂ. ವಿದ್ಯಾರ್ಥಿನಿ(2017-18 ಸ್ಫೂರ್ತಿ ಡಿ.ಸಿ. ಅಖಿಲ ಭಾರತ ಮಟ್ಟದಲ್ಲಿ 24ನೇ ರ‍್ಯಾಂಕ್ ಗಳಿಸಿದ್ದಾರೆ.
ಇಂಟರ್‌ಮೀಡಿಯೆಟ್ ಪರೀಕ್ಷೆಯ ಗ್ರೂಪ್1 ಮತ್ತು ಗ್ರೂಪ್1 ಎರಡೂ ವಿಭಾಗಗಳಲ್ಲಿ ಒಟ್ಟು575 ಅಂಕಗಳನ್ನು ಗಳಿಸುವ ಮೂಲಕ ಒಂದೇ ಪ್ರಯತ್ನದಲ್ಲಿ ಈ ಸಾಧನೆ ಮಾಡಿದ್ದಾರೆ.
ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಶೈಕ್ಷಣಿಕ ದತ್ತು ಶಿಕ್ಷಣ ಯೋಜನೆಯಡಿ ಸ್ಪೂರ್ತಿ ತಮ್ಮ ಪದವಿ ಶಿಕ್ಷಣವನ್ನು ಪೂರೈಸಿದ್ದಾರೆ.
ವಿದ್ಯಾರ್ಥಿನಿಯ ಈ ಸಾಧನೆಗೆ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ.ಮೋಹನ್ ಆಳ್ವ, ಮ್ಯಾನೇಜ್‌ಮೆಂಟ್ ಟ್ರಸ್ಟಿ ವಿವೇಕ್ ಆಳ್ವ, ಆಳ್ವಾಸ್ ಪದವಿ ಕಾಲೇಜಿನ ಪ್ರಾಂಶುಪಾಲ ಡಾ.ಕುರಿಯನ್ ಹಾಗೂ ಉಪನ್ಯಾಸಕರು ಹರ್ಷ ವ್ಯಕ್ತಪಡಿಸಿದ್ದಾರೆ.