ಕುಂದಾಪ್ರ ಡಾಟ್ ಕಾಂ ಸುದ್ದಿ.
ಮೂಡುಬಿದಿರೆ: ವಿಶ್ವೇಶ್ವರಯ್ಯತಾಂತ್ರಿಕ ವಿಶ್ವವಿದ್ಯಾನಿಲಯದ ನಡೆಸಿದ ಅಂತಿಮ ಪರೀಕ್ಷೆಗಳಲ್ಲಿ ಆಳ್ವಾಸ್ ಇಂಜಿನಿಯರಿಂಗ್ ಕಾಲೇಜಿನ ಎಂಬಿಎ ವಿದ್ಯಾರ್ಥಿನಿ ಜೊವಿಟಾ ನೊರೋನ್ಹಾ 5ನೇ ರ‍್ಯಾಂಕ್ ಗಳಿಸಿದ್ದಾರೆ. ಸಿಜಿಪಿ 8.62 ಅಂಕ ಗಳಿಸುವ ಮೂಲಕ ಜೊವಿಟಾ ಈ ಸಾಧನೆ ಮಾಡಿದ್ದಾರೆ. ಕ್ಯಾಂಪಸ್ ಸೆಲೆಕ್ಷನ್ ಮೂಲಕ ಬೆಂಗಳೂರಿನ ಗ್ರಾಂಟ್‌ಥಾರ್ನ್‌ಟನ್ ಕಂಪನಿಗೆ ಆಯ್ಕೆಯಾಗಿರುವ ಅವರು ಪ್ರಸ್ತುತ ಟ್ಯಾಕ್ಸ್ ಅನಾಲಿಸ್ಟ್ ಆಗಿ ಕಾರ‍್ಯನಿರ್ವಹಿಸುತ್ತಿದ್ದಾರೆ.
2019-20ರ ಈ ಶೈಕ್ಷಣಿಕ ಬ್ಯಾಚ್‌ನಲ್ಲಿ ಆಳ್ವಾಸ್ ಎಂಬಿಎ ವಿಭಾಗದ ೭೮ ವಿದ್ಯಾರ್ಥಿಗಳು ಡಿಸ್ಟಿಂಕ್ಷನ್ ಹಾಗೂ 8 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ್ದಾರೆ.
ವಿದ್ಯಾರ್ಥಿಗಳ ಸಾಧನೆಯನ್ನು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ. ಮೋಹನ್ ಆಳ್ವ, ಮ್ಯಾನೇಜ್‌ಮೆಂಟ್ ಟ್ರಸ್ಟಿ ವಿವೇಕ್ ಆಳ್ವ ಹಾಗೂ ಉಪನ್ಯಾಸಕ ವೃಂದದವರು ಅಭಿನಂದಿಸಿದ್ದಾರೆ.