ಬಿಎಸ್‌ಎಫ್‌ಗೆ ಆಯ್ಕೆಯಾದ ವಿದ್ಯಾ: ಬ್ಯಾರೀಸ್ ಕಾಲೇಜಿನಿಂದ ಅಭಿನಂದನೆ

Click Here

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಬ್ಯಾರೀಸ್ ಶಿಕ್ಷಣ ಮಹಾವಿದ್ಯಾಲಯದ ವಿದ್ಯಾರ್ಥಿನಿಯಾದ ಕು. ವಿದ್ಯಾ ಹೆಚ್. ಭಾರತೀಯ ಗಡಿ ಭದ್ರತಾ ಪಡೆ (ಬಿಎಸ್‌ಎಫ್)ಗೆ ಆಯ್ಕೆಯಾಗಿದ್ದಾರೆ. ಬಿ.ಎಡ್ ವಿದ್ಯಾರ್ಥಿನಿಯಾಗಿ ವಿಶ್ವವಿದ್ಯಾಲಯ ಮಟ್ಟದಲ್ಲಿ ಹಲವಾರು ಆಟೋಟ ಸ್ಪರ್ಧೆಗಳಲ್ಲಿ ಪ್ರಶಸ್ತಿಯನ್ನು ಗಳಿಸಿದ ಅವರು, ಸಮವಸ್ತ್ರ ಧರಿಸುವ ವೃತ್ತಿಯನ್ನು ಮಾಡಬೇಕು ಮತ್ತು ಮಹಿಳೆ ಪುರುಷರಷ್ಟೇ ಸಮರ್ಥಳು ಎಂಬುದನ್ನು ನಿರೂಪಿಸಬೇಕು ಎಂಬ ಮಹಾದಾಸೆಯನ್ನು ವಿದ್ಯಾರ್ಥಿ ದೆಸೆಯೆಂದಲೇ ಹೊಂದಿದವರಾಗಿದ್ದಾರೆ.

Call us

Click Here

ಅವರ ಈ ಸಾಧನೆಗೆ ನಮ್ಮ ವಿದ್ಯಾರ್ಥಿಗಳು ಸೇನೆಗೆ ಸೇರ್ಪಡೆಯಾಗಬೇಕುಂಬುದು ನನ್ನ ಅಭಿಲಾಷೆ ಎಂದು ಪ್ರತಿಕ್ರಿಯಿಸಿದ, ಬ್ಯಾರೀಸ್ ಸಮೂಹದ ಅಧ್ಯಕ್ಷರಾದ ಸಯ್ಯದ್ ಮಹಮದ್ ಬ್ಯಾರಿ ಅವರು, ನಿರ್ದೇಶಕರು, ಪ್ರಾಂಶುಪಾಲರು ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಅವರ ಈ ಸಾಧನೆಗೆ ಅಭಿನಂದನೆ ಸಲ್ಲಿಸಿದ್ದಾರೆ.

Leave a Reply