ಬಾಲ್ ಬ್ಯಾಡ್ಮಿಂಟನ್ ಮತ್ತು ಟೆನ್ನಿಕಾಯ್ಟ್ ಪಂದ್ಯಾಟ: ಎಸ್.ವಿ ಕಾಲೇಜು ಪ್ರಥಮ

Click Here

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಪದವಿ ಪೂರ್ವ ಶಿಕ್ಷಣ ಇಲಾಖೆ ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜು ಮತ್ತು ಶ್ರೀ ಗುರು ಜ್ಯೋತಿ ಸ್ಪೋರ್ಟ್ಸ್ ಕ್ಲಬ್ ಗಂಗೊಳ್ಳಿ ಇವರ ಸಂಯುಕ್ತಾಶ್ರಯದಲ್ಲಿ ಇತ್ತೀಚೆಗೆ ಗಂಗೊಳ್ಳಿಯ ಸರಸ್ವತಿ ವಿದ್ಯಾಲಯದಲ್ಲಿ ಜರಗಿದ ಪದವಿಪೂರ್ವ ಕಾಲೇಜು ವಿದ್ಯಾರ್ಥಿಗಳ ಬಾಲ್ ಬ್ಯಾಡ್ಮಿಂಟನ್ ಮತ್ತು ಟೆನ್ನಿಕಾಯ್ಟ್ ಪಂದ್ಯಾಟದಲ್ಲಿ ಗಂಗೊಳ್ಳಿಯ ಸರಸ್ವತಿ ವಿದ್ಯಾಲಯದ ಬಾಲಕರ ತಂಡ ಟೆನ್ನಿಕಾಯ್ಟ್ ಮತ್ತು ಬಾಲ್ ಬ್ಯಾಡ್ಮಿಂಟನ್ ಎರಡರಲ್ಲೂ ಪ್ರಥಮ ಸ್ಥಾನ ಗಳಿಸಿ ಬಾಲಕಿಯರು ಟೆನ್ನಿಕಾಯ್ಟ್ ನಲ್ಲಿ ಪ್ರಥಮ ಸ್ಥಾನ ಗಳಿಸುವ ಮುಖೇನ ಸರಸ್ವತಿ ವಿದ್ಯಾಲಯ ಅಗ್ರ ಸ್ಥಾನವನ್ನು ಪಡೆದಿದೆ.

Call us

Click Here

ಬಾಲಕರ ಮತ್ತು ಬಾಲಕಿಯರ ಟೆನಿಕಾಯ್ಟ್ ನಲ್ಲಿ ಕೊಲ್ಲೂರಿನ ಶ್ರೀ ಮೂಕಾಂಬಿಕಾ ದೇವಳದ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ದ್ವಿತೀಯ ಸ್ಥಾನ ಗಳಿಸಿದರು. ಬಾಲಕರ ಬಾಲ್ ಬ್ಯಾಡ್ಮಿಂಟನಲ್ಲಿ ಕಾರ್ಕಳದ ಶ್ರೀ ಭುವನೇಂದ್ರ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ದ್ವಿತೀಯ ಸ್ಥಾನಗಳಿಸಿದರು. ಬಾಲಕಿಯರ ವಿಭಾಗದ ಬಾಲ್ ಬ್ಯಾಡ್ಮಿಂಟನ್ ನಲ್ಲಿ ಕಾರ್ಕಳದ ಭುವನೇಂದ್ರ ಕಾಲೇಜಿನ ವಿದ್ಯಾರ್ಥಿನಿಯರು ಪ್ರಥಮ ಸ್ಥಾನ ಗಳಿಸಿದರೆ ಕೊಲ್ಲೂರಿನ ಶ್ರೀ ಮೂಕಾಂಬಿಕಾ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿಯರು ದ್ವಿತೀಯ ಸ್ಥಾನ ಗಳಿಸಿದರು.

2020 21ನೇ ಸಾಲಿನ ಪದವಿಪೂರ್ವ ಕಾಲೇಜು ವಿದ್ಯಾರ್ಥಿಗಳ ರಾಜ್ಯಮಟ್ಟದ ಪಂದ್ಯಾಟಕ್ಕೆ ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳಾದ ಧೀರಜ್, ಆನಂದಕೃಷ್ಣ ಖಾರ್ವಿ, ರಿತೇಶ್, ಶಶಾಂಕ್, ಎಮ್ ಪ್ರಭಾಕರ್ ಪೈ ಬಾಲ್ ಬ್ಯಾಡ್ಮಿಂಟನ್ ವಿಭಾಗದಲ್ಲಿ ಆಯ್ಕೆಯಾದರೆ, ಟೆನಿಕಾಯ್ಟ್ ನಲ್ಲಿ ಆನಂದ ಕೃಷ್ಣ ಖಾರ್ವಿ, ನಿಖಿಲ್ ಖಾರ್ವಿ, ಧೀರಜ್ ಮತ್ತು ಬಾಲಕಿಯರ ವಿಭಾಗದಲ್ಲಿ ಗೌತಮಿ ಆರ್ ಖಾರ್ವಿ, ಆಶ್ರಿತಾ ಕೋಟೆಗಾರ್, ರಂಜಿತಾ ಬಿಲ್ಲವ ಆಯ್ಕೆಯಾಗಿದ್ದಾರೆ

Leave a Reply