ಹೃದಯ ಅರಳಲು ರಂಗ ಚಟುವಟಿಕೆಗಳ ಬೇಕು: ಸುಜಯೀಂದ್ರ ಹಂದೆ

Click Here

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ
ಬೈಂದೂರು: ಶಿಕ್ಷಣ ಸಂಸ್ಥೆಗಳು ಬುದ್ಧಿವಂತರನ್ನು ತಯಾರು ಮಾಡಬಹುದು. ಪ್ರಪಂಚದಲ್ಲಿ ಬುದ್ದಿವಂತರು ಅನೇಕರಿರಬಹುದು. ಆದರೆ ನಮಗೆ ಹೃದಯವಂತರು ಬೇಕು. ರಂಗ ಚಟುವಟಿಕೆಯಿಂದ ಹೃದಯ ಅರಳುತ್ತದೆ ಎಂದು ಕನ್ನಡ ಪ್ರಾಧ್ಯಾಪಕ ಸುಜಯೀಂದ್ರ ಹಂದೆ ಹೇಳಿದರು.

Call us

Click Here

ಅವರು ಸೋಮವಾರ ಇಲ್ಲಿನ ಶಾರದಾ ವೇದಿಕೆಯಲ್ಲಿ ಸುರಭಿ ರಿ. ಬೈಂದೂರು ಆಶ್ರಯದಲ್ಲಿ ಆಯೋಜಿಸಲಾದ ರಂಗಸುರಭಿ 2021 ಮೂರು ದಿನಗಳ ನಾಟಕೋತ್ಸವದ ಸಮಾರೋಪ ಸಮಾರಂಭದಲ್ಲಿ ಮಾತನಾದರು.

ಚಿತ್ರಕಲಾವಿದ ಎಂ. ಎಲ್. ಸೋಮವಾರದ ಅವರನ್ನು ಸನ್ಮಾನಿಸಲಾಯಿತು. ಜಿಲ್ಲಾ ಪಂಚಾಯತ್ ಸದಸ್ಯರಾದ ಕೆ. ಬಾಬು ಶೆಟ್ಟಿ, ಸುರೇಶ್ ಬಟವಾಡಿ, ನಿವೃತ್ತ ಬ್ಯಾಂಕ್ ಅಧಿಕಾರಿ ಶ್ರೀಧರ್ ಭಟ್, ಶ್ರೀ ಸಿದ್ದೇಶ್ವರ ಮರಾಠಿ ಕ್ರೆಡಿಟ್ ಕೋ-ಆಪರೇಟಿವ್ ಅಧ್ಯಕ್ಷ ಮಹಾಲಿಂಗ ನಾಯ್ಕ್, ವಲಯ ಅರಣ್ಯಾಧಿಕಾರಿ ಶ್ರೀಧರ್ ಪಿ., ಬೈಂದೂರು ಜೆಸಿಐ ಅಧ್ಯಕ್ಷ ಶ್ರೀಧರ ಆಚಾರ್, ಬೈಂದೂರು ಡಾ| ಬಿ. ಆರ್. ಅಂಬೇಡ್ಕರ್ ಸಂಘದ ಅಧ್ಯಕ್ಷ ಲಕ್ಷ್ಮಣ ಯಡ್ತರೆ, ಸುರಭಿ ಕಾರ್ಯದರ್ಶಿ ಭಾಸ್ಕರ ಬಾಡ ಉಪಸ್ಥಿತರಿದ್ದರು.

ಸುರಭಿ ರಿ. ಬೈಂದೂರು ಅಧ್ಯಕ್ಷ ನಾಗರಾಜ ಪಿ. ಯಡ್ತರೆ ಸ್ವಾಗತಿಸಿ, ಸದಸ್ಯ ಆನಂದ ಮದ್ದೋಡಿ ವಂದಿಸಿದರು. ಸದಸ್ಯ ರಾಮಕೃಷ್ಣ ದೇವಾಡಿಗ ಉಪ್ಪುಂದ ಕಾರ್ಯಕ್ರಮ ನಿರೂಪಿಸಿದರು. ಕಲಾವಿದರಾದ ಪೂರ್ಣಿಮಾ ಹಾಗೂ ಪೂರ್ಣಿಮಾ ಪ್ರಾರ್ಥಿಸಿದರು.

Click here

Click here

Click here

Click Here

Call us

Call us

 

Leave a Reply