ಗಂಗೊಳ್ಳಿ: ಬಿಜೆಪಿ ಸಂಸ್ಥಾಪನಾ ದಿನಾಚರಣೆ

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಗಂಗೊಳ್ಳಿ: ಭಾರತೀಯ ಜನತಾ ಪಕ್ಷದ ಸಂಸ್ಥಾಪನಾ ದಿನಾಚರಣೆ ಅಂಗವಾಗಿ ಗಂಗೊಳ್ಳಿ ಗ್ರಾಮ ಪಂಚಾಯತ್ ವ್ಯಾಪ್ತಿಯ ವಿವಿಧ ಮತಗಟ್ಟೆಗಳಲ್ಲಿ ಸಂಸ್ಥಾಪನಾ ದಿನಾಚರಣೆ ಕಾರ್ಯಕ್ರಮ ಜರಗಿತು.

Call us

Click Here

ಗಂಗೊಳ್ಳಿ ಗ್ರಾಮ ಪಂಚಾಯತ್ ವ್ಯಾಪ್ತಿಯ ವಿವಿಧ ಮತಗಟ್ಟೆಗಳಲ್ಲಿ ಬೂತ್ ಅಧ್ಯಕ್ಷರ ಮತ್ತು ಶಕ್ತಿ ಕೇಂದ್ರದ ಅಧ್ಯಕ್ಷರ ಮನೆ ಮೇಲೆ ಬಿಜೆಪಿ ಧ್ವಜ ಹಾರಿಸಲಾಯಿತು. ಬಿಜೆಪಿ ಬೆಳೆದು ಬಂದ ಹಾದಿ ಮತ್ತು ಕೇಂದ್ರದ ಬಿಜೆಪಿ ನೇತೃತ್ವದ ಎನ್‌ಡಿಎ ಸರಕಾರದ ಮತ್ತು ರಾಜ್ಯದ ಬಿಜೆಪಿ ಸರಕಾರದ ಸಾಧನೆಗಳ ಬಗ್ಗೆ ಮಾಹಿತಿ ನೀಡಲಾಯಿತು.

ಗಂಗೊಳ್ಳಿ ಗ್ರಾಪಂ ಅಧ್ಯಕ್ಷ ಶ್ರೀನಿವಾಸ ಖಾರ್ವಿ, ಉಪಾಧ್ಯಕ್ಷೆ ಪ್ರೇಮಾ ಸಿ.ಪೂಜಾರಿ, ತ್ರಾಸಿ ಮಹಾಶಕ್ತಿ ಕೇಂದ್ರದ ಅಧ್ಯಕ್ಷ ರವಿ ಶೆಟ್ಟಿಗಾರ್, ಪ್ರಧಾನ ಕಾರ್ಯದರ್ಶಿ ಅಶೋಕ ಎನ್.ಡಿ., ಮಿಥನ್ ದೇವಾಡಿಗ, ರವೀಂದ್ರ ಖಾರ್ವಿ ಕಂಚುಗೋಡು, ಗಂಗೊಳ್ಳಿ ಪ್ರಾಥಮಿಕ ಮೀನುಗಾರರ ಸಹಕಾರಿ ಸಂಘದ ಅಧ್ಯಕ್ಷ ಸದಾಶಿವ ಖಾರ್ವಿ, ಗಂಗೊಳ್ಳಿ ಗ್ರಾಪಂ ಸದಸ್ಯರು, ಬೂತ್ ಕಾರ್ಯದರ್ಶಿಗಳು, ಸದಸ್ಯರು, ಶಕ್ತಿ ಕೇಂದ್ರದ ಪ್ರಮುಖರು, ಪಕ್ಷದ ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದರು.

Leave a Reply