ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ರಾತ್ರಿ 10ರಿಂದ ಬೆಳಗ್ಗೆ 5ರವರೆಗೆ ನೈಟ್ ಕರ್ಫೂ ಜಾರಿಗೊಳಿಸಲಾಗುತ್ತದೆ ಎಂದು ಸಿಎಂ ಯಡಿಯೂರಪ್ಪ ತಿಳಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರ ಜೊತೆ ಸಭೆ ಬಳಿಕ ಸಿಎಂ ಬಿ.ಎಸ್.ಯಡಿಯೂರಪ್ಪ, ರಾಜ್ಯದಲ್ಲಿ ಕೊರೊನಾ ಕರ್ಫ್ಯೂ ಘೋಷಣೆ ಮಾಡಿದ್ದಾರೆ. ಏಪ್ರಿಲ್ 10 ರಿಂದ 20ರವರೆಗೆ ಕೊರೊನಾ ಕರ್ಫ್ಯೂ ಜಾರಿಗೆ ಬರಲಿದೆ.
ರಾಜ್ಯದ ಉಡುಪಿ, ಮಂಗಳೂರು, ಬೆಂಗಳೂರು, ಮೈಸೂರು, ಬಳ್ಳಾರಿ, ಕಲಬುರಗಿ, ತುಮಕೂರು, ಬೀದರ್ ನಗರಗಳಲ್ಲಿ ಪ್ರಾಯೋಗಿಕವಾಗಿ ಕೊರೊನಾ ಕರ್ಫ್ಯೂ ಬರಲಿದೆ. ಅಗತ್ಯ ಸೇವೆಗಳನ್ನ ಹೊರತುಪಡಿಸಿ ಎಲ್ಲ ಕಮರ್ಷಿಯಲ್ ಚಟುವಟಿಕೆಗಳ ಮೇಲೆ ನಿರ್ಬಂಧ ಹಾಕಲಾಗ್ತಿದೆ. ಲಾಕ್ಡೌನ್ ಬೇಡ ಅಂದ್ರೆ ಜನರು ಕೊರೊನಾ ನಿಯಮಗಳನ್ನ ಪಾಲಿಸಬೇಕು. ನಾಳೆಯಿಂದ ಮಾಸ್ಕ್ ಧರಿಸದಿದ್ದರೆ ದಂಡಾಸ್ತ್ರ ಪ್ರಯೋಗಿಸಲು ಸೂಚನೆ ನೀಡಲಾಗಿದೆ ಎಂದು ಸಿಎಂ ಎಚ್ಚರಿಸಿದ್ದಾರೆ.
ನಗರಗಳಲ್ಲಿ10 ದಿನ ಪ್ರಾಯೋಗಿಕವಾಗಿ ಕೊರೊನಾ ಕರ್ಫ್ಯೂವನ್ನ ಸರ್ಕಾರ ಘೋಷಣೆ ಮಾಡಿದೆ. ಕರ್ಫ್ಯೂ ಅವಧಿ ವೇಳೆ ಹೊಟೇಲ್, ಬಾರ್, ಪಬ್, ನೈಟ್ ಪಾರ್ಟಿ, ರೆಸ್ಟೋರೆಂಟ್, ಸಿನಿಮಾಗಳು ಬಂದ್ ಆಗಲಿವೆ ಎನ್ನಲಾಗಿದೆ.