ಜಿಲ್ಲೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಕೋವಿಡ್ ಟೆಸ್ಟಿಂಗ್ ನಡೆಸಿ: ಡಾ. ಎಂ.ಟಿ. ರೇಜು

Click Here

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಉಡುಪಿ: ಜಿಲ್ಲೆಯಲ್ಲಿಕೊರೋನಾಎರಡನೇಅಲೆಯನ್ನು ನಿಯಂತ್ರಿಸಲು ಸರ್ಕಾರದ ಸೂಚನೆಯಂತೆ ಹೆಚ್ಚಿನ ಸಂಖ್ಯೆಯಲ್ಲಿ ಟೆಸ್ಟಿಂಗ್ಗಳನ್ನು ನಡೆಸಿ, ಸೋಂಕಿತರ ಪ್ರಾಥಮಿಕ ಮತ್ತು ದ್ವಿತೀಯ ಸಂಪರ್ಕಿತರನ್ನುಕೂಡಲೇ ಪತ್ತೆ ಹಚ್ಚಿ ಪರೀಕ್ಷೆ ನಡೆಸಿ, ಪಾಸಿಟಿವಿಟಿ ಪ್ರಮಾಣವನ್ನುಕಡಿಮೆ ಮಾಡುವಂತೆಜಿಲ್ಲಾಉಸ್ತುವಾರಿ ಕಾರ್ಯದರ್ಶಿ ಡಾ. ಎಂ.ಟಿರೇಜು ಹೇಳಿದರು.

Call us

Click Here

ಅವರು ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ, ಜಿಲ್ಲೆಯಲ್ಲಿ ಕೋವಿಡ್ ನಿಯಂತ್ರಣ ಕುರಿತು ಕೈಗೊಳ್ಳಬೇಕಾದ ಕ್ರಮಗಳ ಕುರಿತ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಜಿಲ್ಲೆಯಲ್ಲಿಕೋವಿಡ್ಎರಡನೇ ಅಲೆಯಲ್ಲಿ ಯುವಜನತೆ ಮತ್ತು ಶಾಲಾ ಹಾಗೂ ಕಾಲೇಜು ವಿದ್ಯಾರ್ಥಿಗಳಲ್ಲಿ ಹೆಚ್ಚಿನ ಪಾಸಿಟಿವ್ ಪ್ರಕರಣಗಳು ಕಂಡು ಬರುತ್ತಿದ್ದು, ಇವರಿಂದ ಕುಟುಂಬದ ಹಿರಿಯ ನಾಗರೀಕರೂ ಸೇರಿದಂತೆ ಪ್ರತಿಯೊಬ್ಬರರಿಗೂ ಸೋಂಕು ಹರಡುವ ಸಾಧ್ಯತೆಗಳಿದ್ದು, ಸರ್ಕಾರ ನಿಗದಿಪಡಿಸಿದಂತೆ ಪ್ರತಿದಿನ 4000 ಟೆಸ್ಟಿಂಗ್ಗಳನ್ನು ನಡೆಸಿ, ಶೀಘ್ರದಲ್ಲಿ ಸೋಂಕಿತರನ್ನು ಪತ್ತೆಹಚ್ಚಿ, ಸೋಂಕು ಹರಡುವುದನ್ನು ತಪ್ಪಿಸಲು ಕ್ರಮ ಕೈಗೊಳ್ಳಿ ಎಂದು ಡಾ. ರೇಜು ತಿಳಿಸಿದರು.

ಪ್ರಸ್ತುತ ಪಾಸಿಟಿವ್ ಪ್ರಕರಣ ಕಂಡು ಬರುತ್ತಿರುವ ಹೆಚ್ಚಿನ ಪ್ರಕರಣಗಳಲ್ಲಿರೋಗ ಲಕ್ಷಣಗಳು ಇಲ್ಲವಾಗಿದ್ದು, ಇಂತಹವರನ್ನು ಹೋಂ ಐಸೋಲೇಷನ್ಗೆ ಒಳಪಡಿಸಿ, ಆಸ್ಪತ್ರೆಗಳಲ್ಲಿ ಬೆಡ್ಗಳ ಕೊರತೆಯಾಗದಂತೆ ಹಾಗೂ ಲಸಿಕೆಯ ಕೊರತೆಯಾಗದಂತೆ ಎಚ್ಚರವಹಿಸಿ, 60 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಮತ್ತು 45 ವರ್ಷ ಮೇಲ್ಪಟ್ಟವರಿಗೆ ಹೆಚ್ಚಿನ ಸಂಖ್ಯೆಯಲ್ಲಿ ಲಸಿಕೆ ನೀಡಿ, ಪ್ರಾಥಮಿಕ ಆರೋಗ್ಯ ಕೇಂದ್ರಗಳ ವ್ಯಾಪ್ತಿಯಲ್ಲೂ ಸಹ ಪಾಸಿಟಿವ್ ಪ್ರಕರಣಗಳು ಕಂಡು ಬರುತ್ತಿದ್ದು, ಗ್ರಾಮಾಂತರ ಪ್ರದೇಶದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಲಸಿಕೆ ನೀಡುವಂತೆ ಹೇಳಿದರು.

ಜಿಲ್ಲೆಯಾದ್ಯಂತ ಕೋವಿಡ್ ನಿಯಂತ್ರಣ ಕ್ರಮಗಳ ಪಾಲನೆಯಾಗುತ್ತಿರುವ ಕುರಿತು ಪರಿಶೀಲಿಸಿ, ಸರ್ಕಾರದ ಸೂಚನೆಯಂತೆ ಮಾಸ್ಕ್ಧರಿಸದಿರುವ ಮತ್ತು ಸಾಮಾಜಿಕ ಅಂತರ ಪಾಲನೆ ಮಾಡದವರ ವಿರುದ್ಧ ದಂಡ ವಿಧಿಸುವುದರ ಜೊತೆಗೆ ಸೂಕ್ತ ಕ್ರಮಗಳನ್ನು ಕೈಗೊಳ್ಳಿ ಎಂದರು.

Click here

Click here

Click here

Click Here

Call us

Call us

ಸಭೆಯಲ್ಲಿ ಜಿಲ್ಲಾಧಿಕಾರಿ ಜಿ.ಜಗದೀಶ್, ಜಿಲ್ಲಾ ಪಂಚಾಯತ್ ಸಿಇಓ ಡಾ.ನವೀನ್ಭಟ್, ಎಎಸ್ಪಿ ಕುಮಾರಚಂದ್ರ, ಡಿಹೆಚ್ಓ ಡಾ.ಸುದೀರ್ಚಂದ್ರ ಸೂಡಾ, ಜಿಲ್ಲಾ ಸರ್ಜನ್ ಡಾ.ಮಧುಸೂದನ್ ನಾಯಕ್, ಕೋವಿಡ್ ವಿಶೇಷಾಧಿಕಾರಿ ಡಾ.ಪ್ರೇಮಾನಂದ ಹಾಗೂ ಆರೋಗ್ಯಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

Leave a Reply