ಕುಂದಾಪ್ರ ಡಾಟ್ ಕಾಂ ಸುದ್ದಿ.
ಕೊಲ್ಲೂರು: ಶ್ರೀ ಮೂಕಾಂಬಿಕಾ ದೇವಿಯ ಉತ್ಸವ ಮೂರ್ತಿಯೊಂದಿಗೆ ಜಾತ್ರಾ ಸಮಯದಲ್ಲಿ ರಥ ಬೀದಿಯಲ್ಲಿ ಸಾಗುವ ಬ್ರಹ್ಮರಥವು ಸರಿಸುಮಾರು 600 ವರ್ಷದ ಹಿಂದೆ ವಿಜಯ ನಗರ ಸಂಸ್ಥಾನದ ಕೊಡುಗೆ ಆಗಿದ್ದು ಸದ್ಯದ ಪರಿಸ್ಥಿತಿಯಲ್ಲಿ ಶ್ರೀ ದೇವಿಯ ಜಾತ್ರೆಗೆ ಬಳಸಲು ಯೋಗ್ಯವಲ್ಲದ ಪರಿಸ್ಥಿತಿಯಲ್ಲಿರುವುದು ಮೇಲ್ನೋಟಕ್ಕೆ ಕಂಡುಬಂದಿದೆ. ಶಿಥೀಲಗೊಂಡ ಬ್ರಹ್ಮರಥದ ಬದಲಾಗಿ ನೂತನ ಬ್ರಹ್ಮರಥದ ನಿರ್ಮಾಣ ಕಾರ್ಯದಲ್ಲಿ ತೊಡಗಬೇಕಾಗಿ ಮಾನ್ಯ ಶಾಸಕರಿಗೆ ಹಾಗೂ ದೇವಾಲಯದ ಆಡಳಿತ ವರ್ಗ, ಕಾರ್ಯನಿರ್ವಹಣಾಧಿಕಾರಿಗಳಿಗೆ ವಿಶ್ವ ಹಿಂದೂ ಪರಿಷತ್ -ಬಜರಂಗದಳ, ಭಕ್ತಾಭಿಮಾನಿಗಳು ಹಾಗೂ ಊರಿನ ಸಮಸ್ತರ ಪರವಾಗಿ ಮನವಿ ಸಲ್ಲಿಸಲಾಯಿತು.