ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು: ಜೆಸಿಐ ಬೈಂದೂರು ಸಿಟಿ ಮತ್ತು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಬೈಂದೂರು ಇವರ ಸಹಭಾಗಿತ್ವದಲ್ಲಿ ಎಸ್ಸೆಸ್ಸೆಲ್ಸಿಯಲ್ಲಿ ಕಲಿಯಲು ಹಿಂದುಳಿದ ವಿದ್ಯಾರ್ಥಿಗಳಿಗೆ ವಿಶೇಷ ಬೋಧನಾ ತರಬೇತಿ ಕಾರ್ಯಕ್ರಮ ಇಲ್ಲಿನ ಜೂನಿಯರ್ ಕಾಲೇಜಿನಲ್ಲಿ ನಡೆಯಿತು.
ಸಂಪನ್ಮೂಲ ವ್ಯಕ್ತಿಯಾಗಿ ಆನಂದ ಮದ್ದೋಡಿ ಇವರಿಂದ ವಿದ್ಯಾರ್ಥಿಗಳಿಗೆ ವಿಶೇಷ ತರಬೇತಿಯನ್ನು ನೀಡಲಾಯಿತು,
ಈ ಸಂದರ್ಭದಲ್ಲಿ ಜೆಸಿಐ ಬೈಂದೂರು ಸಿಟಿ ಅಧ್ಯಕ್ಷರಾದ ಶ್ರೀಧರ ಆಚಾರ್ಯ, ಪೂರ್ವಧ್ಯಕ್ಷರಾದ ಮಣಿಕಂಠ ಎಸ್, ದೇವಾಡಿಗ, ಹಾಗೂ ಸ್ಥಾಪಕ ಕಾರ್ಯದರ್ಶಿ ಸುಶಾಂತ್ ಆಚಾರ್ಯ, ಉಪಾಧ್ಯಕ್ಷೆ ದೀಪಿಕಾ ಆಚಾರ್ಯ ಉಪಸ್ಥಿತರಿದ್ದರು.
ಶಿಕ್ಷಕ ಚಂದ್ರ ದೇವಾಡಿಗ ಕಾರ್ಯಕ್ರಮವನ್ನು ನಿರೂಪಿಸಿದರು, ಹಾಗೂ ಜೆಸಿಐ ಬೈಂದೂರು ಸಿಟಿ ವತಿಯಿಂದ ವಿದ್ಯಾರ್ಥಿಗಳಿಗೆ ತಂಪು ಪಾನೀಯ ವ್ಯವಸ್ಥೆ ಮಾಡಲಾಯಿತು.