ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು: ಇಲ್ಲಿನ ಶುಭದಾ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಸಂವಿಧಾನ ಶಿಲ್ಪಿ ಡಾ. ಬಿ. ಆರ್ ಅಂಬೇಡ್ಕರ್‌ರವರ 130ನೇ ಜನ್ಮದಿನಾಚರಣೆಯನ್ನು ಆಚರಿಸಲಾಯಿತು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಶುಭದಾ ಎಜುಕೇಶನಲ್ ಟ್ರಸ್ಟ್ ರಿ. ನಾವುಂದ ಇದರ ಸದಸ್ಯರಾದ ಆರ್. ಕೆ ಬಿಲ್ಲವ, ನಾವೆಲ್ಲರೂ ಅಂಬೇಡ್ಕರ್‌ರವರ ಆದರ್ಶವನ್ನು ಪಾಲಿಸಿ ಸಂವಿಧಾನಕ್ಕೆ ಗೌರವ ನೀಡಬೇಕು ಎಂದರು.
ಮುಖ್ಯ ಶಿಕ್ಷಕ ರವಿದಾಸ್ ಶೆಟ್ಟಿ ಪ್ರಾಸ್ತಾವಿಕ ಮಾತುಗಳನ್ನಾಡಿದರು .ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ಅಂಬೇಡ್ಕರ್ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮೂಲಕ ಗೌರವ ಸಲ್ಲಿಸಿದರು. ಶಿಕ್ಷಕ ರಾಘವೇಂದ್ರ ಬಿಲ್ಲವ ಎಲ್ಲರನ್ನೂ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು.