ಚಿತ್ತೂರು: ಹಗ್ಗ ಜಗ್ಗಾಟ ಮತ್ತು ಕಬಡ್ಡಿ ಪಂದ್ಯಾಟ ಉದ್ಘಾಟನೆ

Click Here

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಬ್ರಹ್ಮಲಿಂಗೇಶ್ವರ ಸ್ಪೋರ್ಟ್ಸ್ ಕ್ಲಬ್ ಮಾರಣಕಟ್ಟೆ ಚಿತ್ತೂರು ಹಾಗೂ ಉಡುಪಿ ಜಿಲ್ಲಾ ಅಮೆಚೂರ್ ಕಬಡ್ಡಿ ಅಸೋಸಿಯೇಷನ್ ಇವರ ಜಂಟಿ ಆಶ್ರಯದಲ್ಲಿ ಪ್ರಥಮ ಬಾರಿಗೆ ಮುಕ್ತ ಹಗ್ಗ ಜಗ್ಗಾಟ ಮತ್ತು ಕಬಡ್ಡಿ ಪಂದ್ಯಾಟ ಚಿತ್ತೂರು ಶಾಲಾ ಮೈದಾನದಲ್ಲಿ ನಡೆಯಿತು.

Call us

Click Here

ಪಂದ್ಯಾಟವನ್ನು ಬೈಂದೂರು ವಿಧಾನಸಭಾ ಕ್ಷೇತ್ರದ ಶಾಸಕರಾದ ಬಿ.ಎಂ.ಸುಕುಮಾರ ಶೆಟ್ಟಿ ಉದ್ಘಾಟಿಸಿ ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಸದಸ್ಯರಾದ ಬಾಬು ಶೆಟ್ಟಿ, ತಾಲ್ಲೂಕು ಪಂಚಾಯತ್ ಸದಸ್ಯರಾದ ಉದಯ. ಜಿ.ಪೂಜಾರಿ, ಚಿತ್ತೂರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಜಯಂತಿ ಪೂಜಾರಿ, ಉಪಾಧ್ಯಕ್ಷರಾದ ದಿವಾಕರ ಆಚಾರ್ಯ, ಸದಸ್ಯರಾದ ರವೀಂದ್ರ ಶೆಟ್ಟಿ, ವರಸಿದ್ದಿ ವಿನಾಯಕ ಸಮೂಹ ಶಿಕ್ಷಣ ಸಂಸ್ಥೆಯ ಅಧ್ಯಕ್ಷರಾದ ಚಂದ್ರಶೇಖರ ಶೆಟ್ಟಿ ಕೆರಾಡಿ, ಕೊಲ್ಲೂರು ದೇವಳದ ವ್ಯವಸ್ಥಾಪನ ಸಮಿತಿಯ ಸದಸ್ಯರಾದ ಡಾ. ಅತುಲ್ ಕುಮಾರ್ ಶೆಟ್ಟಿ, ಕೊಲ್ಲೂರು ದೇವಳದ ಮಾಜಿ ವ್ಯವಸ್ಥಾಪನ ಸಮಿತಿಯ ಸದಸ್ಯರಾದ ವಂಡಬಳ್ಳಿ ಜಯರಾಮ ಶೆಟ್ಟಿ, ಅಮೆಚೂರ್ ಕಬಡ್ಡಿ ಕುಂದಾಪುರ ತಾಲೂಕು ಗೌರವಾಧ್ಯಕ್ಷರಾದ ರವಿಕಿರಣ್ ಮುರುಡೇಶ್ವರ, ಎಂ.ಎಸ್ ಮಂಜ ಚಾರಿಟೇಬಲ್ ನ ಕಾರ್ಯದರ್ಶಿ ನಾಗರಾಜ ಮಂಜ ಮಾರಣಕಟ್ಟೆ, ಶ್ರೀ ಬ್ರಹ್ಮಲಿಂಗೇಶ್ವರ ಮತ್ತು ಮಹಾಲಿಂಗೇಶ್ವರ ಕಲ್ಯಾಣ ಮಂಟಪದ ಮಾಲಕರಾದ ರಾಮಚಂದ್ರ ಮಂಜ ಮಾರಣಕಟ್ಟೆ, ಚಿತ್ತೂರು ಶಾಲಾ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಪ್ರದೀಪ್ ಶೆಟ್ಟಿ, ರಿಕ್ಷಾ ಚಾಲಕ ಮಾಲಕ ಸಂಘದ ಅಧ್ಯಕ್ಷರಾದ ಕುಸುಮಾಕರ ಪೂಜಾರಿ ಉಪಸ್ಥಿತರಿದ್ದರು.

ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ ಆನಂದ ಶೆಟ್ಟಿ ಮುಖ್ಯ ಗುರುಗಳು, ಸುರೇಶ್ ಪಡಿಪಂಡ, ನವೀನ್ ಕಾಂಚನ ಹಿಜಾಣ, ರೋಹಿತ್ ಕುಮಾರ್ ಶೆಟ್ಟಿ ಇವರನ್ನು ಗೌರವಿಸಲಾಯಿತು.

ಶಿಕ್ಷಕ ಗುರುಪ್ರಸಾದ್ ಸ್ವಾಗತಿಸಿ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಕುಮಾರ್ ಅನುಷ್ ಪ್ರಾರ್ಥಿಸಿದರು. ಶಿಕ್ಷಕ ವೀರೇಂದ್ರ ಜೋಗಿ ಹಾಗೂ ಗುರುಪ್ರಸಾದ್ ಕಾರ್ಯಕ್ರಮ ನಿರೂಪಿಸಿದರು. ಸುಮಾರು 40 ತಂಡಗಳು ಪಂದ್ಯಾಟದಲ್ಲಿ ಭಾಗವಹಿಸಿದ್ದವು.

Click here

Click here

Click here

Click Here

Call us

Call us

Leave a Reply