Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಉಡುಪಿ: ಕೋವಿಡ್ ಎರಡನೇ ಅಲೆ ನಿಯಂತ್ರಣಕ್ಕೆ ಜಿಲ್ಲಾ ತಜ್ಞರ ಸಮಿತಿ ಸಭೆ
    ಉಡುಪಿ ಜಿಲ್ಲೆ

    ಉಡುಪಿ: ಕೋವಿಡ್ ಎರಡನೇ ಅಲೆ ನಿಯಂತ್ರಣಕ್ಕೆ ಜಿಲ್ಲಾ ತಜ್ಞರ ಸಮಿತಿ ಸಭೆ

    Updated:16/04/2021No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಉಡುಪಿ: ಉಡುಪಿ ಜಿಲ್ಲೆಯಲ್ಲಿ ಕೋವಿಡ್ 2 ಅಲೆ ಯನ್ನು ನಿಯಂತ್ರಿಸಲು ತೆಗೆದುಕೊಳ್ಳಬೇಕಾದ ಕ್ರಮಗಳ ಕುರಿತಂತೆ ಜಿಲ್ಲಾ ತಜ್ಞರ ಸಮಿತಿ ಸಭೆಯು ಜಿಲ್ಲಾಧಿಕಾರಿ ಜಿ.ಜಗದೀಶ್ ಅಧ್ಯಕ್ಷತೆಯಲ್ಲಿ ಜಿಲ್ಲಾದಿಕಾರಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ನಡೆಯಿತು.

    Click Here

    Call us

    Click Here

    ರಾಜ್ಯದೆಲ್ಲಡೆ ಕೋವಿಡ್ 2 ಅಲೆ ವ್ಯಾಪಕವಾಗಿದ್ದು, ಜಿಲ್ಲೆಯಲ್ಲಿಯೂ ಸಹ ಹರಡುತ್ತಿದೆ, ಇದನ್ನು ನಿಯಂತ್ರಿಸುವ ಕುರಿತಂತೆ ಜಿಲ್ಲೆಯಲ್ಲಿ , ಹೆಚ್ಚಿನ ಸಂಖ್ಯೆಯಲ್ಲಿ ತಪಾಸಣೆ, ಪತ್ತೆ ಹಚ್ಚುವಿಕೆ , ಚಿಕಿತ್ಸೆ ನೀಡುವುದನ್ನು ಶೀಘ್ರವಾಗಿ ಕೈಗೊಳ್ಳಬೇಕು, ಹೈದಯ ಸಂಬAದಿ ರೋಗಿಗಳು, ಕಿಡ್ನಿ ಸಮಸ್ಯೆಯಿರುವವರು, ಕ್ಯಾನ್ಸರ್ ರೋಗಿಗಳು ಕೋವಿಡ್ ನಿಂದ ಮರಣ ಹೊಂದುವುದು ಅಧಿಕವಾಗಿದ್ದು, ಇಂತಹ ರೋಗಿಗಳನ್ನು 15 ದಿನಗಳಿಗೊಮ್ಮೆ ನಿಯಮಿತವಾಗಿ ತಪಾಸಣೆ ಮಾಡುವುದರ ಮೂಲಕ ಬೇಗ ರೋಗ ಪತ್ತೆ ಹಚ್ಚಿ ಚಕಿತ್ಸೆ ನೀಡುವುದರಿಂದ ಸಾವು ಸಂಭವಿಸುವುದನ್ನು ತಪ್ಪಿಸಬಹುದಾಗಿದೆ, ಆರೋಗ್ಯ ಕ್ಷೇತ್ರದಲ್ಲಿ ಕಾರ್ಯ ನಿರ್ವಹಿಸುತ್ತಿರುವವರು ಕೋವಿಡ್ ಸೊಂಕಿಗೆ ಒಳಗಾಗದಂತೆ ಆಸ್ಪತ್ರೆಗಳಲ್ಲಿ ಇನ್ಫೆಕ್ಷನ್ ಕಂಟ್ರೋಲ್ ಮಾಡುವ ಕುರಿತು ತರಬೇತಿ ನೀಡಬೇಕು ಎಂದು ತಜ್ಞರ ಸಮಿತಿ ತಿಳಿಸಿತು.

    ಇದನ್ನೂ ಓದಿ:
    ► ಕೊರೋನಾ ಏರಿಕೆ ಹಿನ್ನೆಲೆ: ಧಾರ್ಮಿಕ ಆಚರಣೆ, ಮದುವೆ, ಇತರೆ ಸಮಾರಂಭಗಳಿಗೆ ಲಗಾಮ – https://kundapraa.com/?p=47340 .

    ಜಿಲ್ಲೆಯಲ್ಲಿ ಕೋವಿಡ್ ಪ್ರಕರಣಗಳನ್ನು ಸಮರ್ಥವಾಗಿ ನಿರ್ವಹಿಸಲು ಅಗತ್ಯವಿರುವ ರೆಮಿಡಿಸಿವರ್ ಚುಚ್ಚುಮದ್ದಿನ ಬಳಕೆಯನ್ನು ಎಚ್ಚರಿಕೆಯಿಂದ ಬಳಸಬೇಕು,ಕೋವಿಡ್ ಲಸಿಕೆ, ಮಾಸ್ಕ್ ಗಳು, ಪಿಪಿಇ ಕಿಟ್, ಆಕ್ಸಿಜಿನ್ ಕೊರತೆಯದಂತೆ ಅಗತ್ಯ ಪ್ರಮಾಣದಲ್ಲಿ ದಾಸ್ತಾನು ಹೊಂದಿರಬೇಕು ಎಂದು ಸಮಿತಿಯಲ್ಲಿ ಅಭಿಪ್ರಾಯ ವ್ಯಕ್ತವಾಯಿತು.

    ಸಭೆಯಲ್ಲಿ ಜಿಲ್ಲಾಧಿಕಾರಿ ಜಿ.ಜಗದೀಶ್ ಮಾತನಾಡಿ, ಎಂಐಟಿ ಯಲ್ಲಿ ಕಂಟೈನ್ಮೆAಟ್ ಝೋನ್ ರಚಿಸಿ ಕೋವಿಡ್ ನಿಯಂತ್ರಣಕ್ಕೆ ತಂದ ಕ್ರಮದ ಕುರಿತು ಪ್ರಧಾನ ಮಂತ್ರ್ರಿಗಳು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ , ಕೋವಿಡ್ ಪ್ರಕರಣಗಳು ಇದೇ ರೀತಿಯ ನಿಯಂತಣ ಕ್ರಮಗಳನ್ನು ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಜಿಲ್ಲೆಯ ಎಲ್ಲಾ ಖಾಸಗಿ ಆಸ್ಪತ್ರೆಗಳು ಸರ್ಕಾರದ ಸೂಚನೆಯಂತೆ ಅಗತ್ಯ ಪ್ರಮಾಣದ ಬೆಡ್ ಗಳನ್ನು ಕೋವಿಡ್ ರೋಗಿಗಳಿಗೆ ಮೀಸಲಿಡಬೇಕು, ತಮ್ಮಲ್ಲಿ ಗೆ ಬರುವ ಐಎಲ್ಐ ಮತ್ತು ಸಾರಿ ಪ್ರಕರಣಗಳ ಕುರಿತು ಮಾಹಿತಿ ನೀಡಬೇಕು , ಎಲ್ಲಾ ಖಾಸಗಿ ಸಂಸ್ಥೆಗಳು , ಮಾಲ್ ಗಳು , ಶಿಕ್ಷಣ ಸಂಸ್ಥೆಗಳು , ಹೋಟೆಲ್ ಗಳು, ಸೇರಿದಂತೆ ಎಲ್ಲಡೆ ಕೋವಿಡ್ ಪರೀಕ್ಷೆ ನಡೆಸಲು ಅಗತ್ಯ ಸಹಕಾರ ನೀಡಬೇಕು ಇಲ್ಲವಾದಲ್ಲಿ ಅಂತಹವರ ವಿರುದ್ದ ಎಮಿಡಮಿಕ್ ಕಾಯಿದೆ ಪ್ರಕಾರ ಕ್ರಿಮಿನಲ್ ಮೊಕದ್ದಮೆ ದಾಖಲಿಸಲಾಗುವುದು ಎಂದು ಎಚ್ಚರಿಸಿದರು.

    Click here

    Click here

    Click here

    Call us

    Call us

    ಜಿಲ್ಲೆಯಲ್ಲಿ ಬೆಡ್ ಗಳ ಕೊರೆತೆ ಕಂಡುಬರದAತೆ ಬೆಡ್ ಮೆನೇಜ್ಮೆಂಟ್ ವ್ಯವಸ್ಥೆ ಯನ್ನು ಆಯೋಜಿಸಲಾಗಿದೆ ಎಲ್ಲಾ ಖಾಸಗಿ ಆಸ್ಪತ್ರೆಗಳು ತಮ್ಮಲ್ಲಿರುವ ಬೆಡ್ ಗಳ ವಿವರಗಳನ್ನು ಪ್ರತೀದಿನ ಮಾಹಿತಿ ನೀಡಬೇಕು , ಆಂಬುಲೆನ್ಸ್ ಗಳ ಕೊರತೆಯಾಗದಂತೆ ಆಂಬುಲೆನ್ಸ್ ಮೆನೇಜ್ಮೆಂಟ್ ವ್ಯವಸ್ಥೆ ಮಾಡಲಾಗಿದ್ದು, ತಕ್ಷಣದಲ್ಲಿ ಅಂಬುಲೆನ್ಸ್ ಗಳ ಸೇವೆ ದೊರೆಯುವಂತೆ ಮಾಡಲಾಗಿದೆ ಎಂದರು.

    ಸಭೆಯಲ್ಲಿ ಜಿಲ್ಲಾ ಪಂಚಾಯತ್ ಸಿಇಓ ಡಾ. ನವೀನ್ ಭಟ್, ಅಪರ ಜಿಲ್ಲಾದಿಕಾರಿ ಸದಾಶಿವ ಪ್ರಭು, ಉಪ ವಿಬಾಗಾಧಿಕಾರಿ ರಾಜು, ಡಿಹೆಚ್ ಓ ಡಾ. ಸುದೀರ್ ಚಂಧ್ರ ಸೂಢಾ, ಜಿಲ್ಲಾ ಕೋವಿಡ್ ನೋಢೆಲ್ ಅಧಿಕಾರಿ ಡ. ಪ್ರಶಾಂತ ಭಟ್, ಜಿಲ್ಲಾ ತಜ್ಞರ ಸಮಿತಿಯಲ್ಲಿನ ವೈದ್ಯರುಗಳು , ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

    ಕೋವಿಡ್ ನಿಯಂತ್ರಣಕ್ಕೆ ಅಧಿಕಾರಿಗಳು ಜವಾಬ್ದಾರಿ ಅರಿತು ಕೆಲಸ ನಿರ್ವಹಿಸಿ : ಜಿಲ್ಲಾಧಿಕಾರಿ ಜಿ.ಜಗದೀಶ್
    ಉಡುಪಿ ಜಿಲ್ಲೆಯಲ್ಲಿ ಕೋವಿಡ್ 2 ಅಲೆ ಯನ್ನು ನಿಯಂತ್ರಿಸಲು ನಿಯೋಜಿಸಿರುವ ಎಲ್ಲಾ ಅಧಿಕಾರಿಗಳು ತಮ್ಮ ಜವಾಬ್ದಾರಿಯನ್ನು ಅರಿತು, ಕರ್ತವ್ಯದಲ್ಲಿ ಯಾವುದೇ ಲೋಪಗಳಾಗದಂತೆ ಕಾರ್ಯ ನಿರ್ವಹಿಸುವಂತೆ ಜಿಲ್ಲಾದಿಕಾರಿ ಜಿ.ಜಗದೀಶ್ ಹೇಳಿದ್ದಾರೆ.

    ಅವರು ಶುಕ್ರವಾರ ಜಿಲ್ಲಾದಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ , ಜಿಲ್ಲೆಯಲ್ಲಿ ಕೋವಿಡ್ ನಿಯಂತ್ರಣ ಕುರಿತ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

    ಜಿಲ್ಲೆಯಲ್ಲಿ ಕೋವಿಡ್ ನಿಯಂತ್ರಣಕ್ಕಾಗಿ ಈ ಹಿಂದೆ ರಚಿಸಲಾಗಿದ್ದ ಎಲ್ಲಾ ಸಮಿತಿಗಳನ್ನು ತಕ್ಷಣದಿಂದ ಬರುವಂತೆ ಪುರ್ನ ರಚಿಸಲಾಗಿದ್ದು, ಎಲ್ಲಾ ಅಧಿಕಾರಿಗಳು ತಮಗೆ ವಹಿಸಲಾಗಿರುವ ಕಾರ್ಯಗಳನ್ನು ಜವಾಬ್ದಾರಿಯಿಂದ ನಿರ್ವಹಿಸುವಂತೆ ಡಿಸಿ ಸೂಚಿಸಿದರು.

    ಜಿಲ್ಲೆಯಲ್ಲಿ ಸೋಂಕಿತರ ಪತ್ತೆ ಹಚ್ಚುವ ಕಾರ್ಯ ಉತ್ತಮವಾಗಿ ನಡೆಯುತ್ತಿದೆ. ಕೋವಿಡ್ ಪರೀಕ್ಷೆಗಾಗಿ ರಚಿಸಿರುವ ತಂಡದ ಅಧಿಕಾರಿಗಳು ನಿಗಧಿತ ಸಂಖ್ಯೆಯಲ್ಲಿ ಪರೀಕ್ಷೆಗಳನ್ನು ನಡೆಸಬೇಕು, ಕೋವಿಡ್ ಪರೀಕ್ಷೆ ನಡೆಸಲು ವಿರೋದಿಸುವವರ ವಿರುದ್ದ ಕ್ರಮಿನಲ್ ಮೊಕದ್ದಮೆ ದಾಖಲಿಸುವಂತೆ ಸೂಚಿಸಿದ ಅವರು, ಎಲ್ಲಾ ತಹಸೀಲ್ದಾರ್ ಗಳು, ತಾ.ಪಂ. ಕಾರ್ಯ ನಿರ್ವಹಣಾಧಿಕಾರಿಗಳು, ತಾಲೂಕು ಆರೋಗ್ಯ ಅಧಿಕಾರಿಗಳು ತಂಡ ರಚಿಸಿಕೊಂಡು, ಕೋವಿಡ್ ಪರೀಕ್ಷೆ ನಡೆಸುವ ಸಿಬ್ಬಂದಿಗೆ ಅಗತ್ಯ ಸಹಕರ ನೀಡುವಂತೆ ಸೂಚಿಸಿದರು. ಸಾಮಾಜಿಕ ಅಂತರ ಪಾಲನೆ, ಮಾಸ್ಕ್ ಧರಿಸದವರ ವಿರುದ್ದ ದಂಡ ವಿಧಿಸುವ ಅಧಿಕಾರವನ್ನು ನೀಡಿದ್ದರೂ ಹಲವು ಅಧಿಕಾರಿಗಳು ದಂಡ ವಿಧಿಸದಿರುವದನ್ನು ಕುರಿತು ತೀವ್ರ ಅಸಮದಾನ ವ್ಯಕ್ತಪಡಿಸಿ, ಕಾರ್ಯಚರಣೆಯನ್ನು ತೀವ್ರಗೊಳಿಸುವಂತೆ ಸೂಚನೆ ನೀಡಿದರು. ಕೋವಿಡ್ ಸಮಸ್ಯೆಗಳ ಕುರಿತು 24*7 ಕಂಟ್ರೋಲ್ ರೂಂ ಕಾರ್ಯನಿರ್ವಹಿಸುವಂತೆ ಸೂಚನೆ ನೀಡಿದರು. ಕ್ವಾರಂಟೈನ್ ವಾಚ್ 100% ಸಾದನೆ ಅಗಬೇಕು, ಹೋಂ ಐಸೋಲೇಶನ್ ನಲ್ಲಿ ಇರುವವರನ್ನು ನಿಯಮಿತವಾಗಿ ತಪಾಸಣೆ ಮಾಡಬೇಕು ಎಂದರು.

    ಐಎಲ್ಐ ಹಾಗೂ ಸಾರಿ ಪ್ರಕರಣಗಳ ಕುರಿತು ಮಾಹಿತಿ ನೀಡದ ಖಾಸಗಿ ಆಸ್ಪತ್ರೆಗಳ ಲೈಸೆನ್ಸ್ ರದ್ದುಗೊಳಿಸಲು ಕ್ರಮ ಕೈಗೊಳ್ಳಿ , ಮೃತದೇಹಗಳ ವಿಲೇವಾರಿ ಸಂದರ್ಭದಲ್ಲಿ ಯಾವುದೇ ಗೊಂದಲಗಳು ಆಗದಂತೆ ಎಚ್ಚರವಹಿಸಬೇಕು, ಈ ಬಗ್ಗೆ ನಿಗಾವಹಿಸಲು ನೋಡೆಲ್ ಅಧಿಕಾರಿಗಳನ್ನು ನೇಮಿಸಲಾಗುವುದು, ಜಿಲ್ಲೆಗೆ ಅಗತ್ಯವಿರುವ ಲಸಿಕೆ, ಆಕ್ಸಿಜಿನ್, ಪಿಪಿಇ ಕಿಟ್, ಮಾಸ್ಕ್ ಗಳು ಅಗತ್ಯ ಸಂಗ್ರಹವಿರುವAತೆ ನೋಡಿಕೊಳ್ಳಿ, ಸಾಕಷ್ಟು ಮುಂಚಿತವಾಗಿ ಇವುಗಳ ದಾಸ್ತಾನು ಪಡೆಯಿರಿ ಎಂದು ಅಧಿಕಾರಿಗಳಿಗೆ ಜಿ.ಜಗದೀಶ್ ಸೂಚಿಸಿದರು.

    ವಿವಿಧ ಅಧಿಕಾರಿಗಳ ನೇತೃತ್ವದಲ್ಲಿ ಕಾರ್ಯತಂಡUಳÀನ್ನು ರಚಿಸಿದ ಜಿಲ್ಲಾಧಿಕಾರಿಗಳು ಎಲ್ಲರಿಗೂ ಜವಾಬ್ದಾರಿ ವಹಿಸಿದರು. ಎಲ್ಲಾ ತಂಡಗಳಿಗೆ ಅಗತ್ಯ ವಿರುವ ಸಿಬ್ಬಂದಿಗಳನ್ನು ಒದಗಿಸಲಾಗುವುದು, ಎಲ್ಲಾ ತಂಡಗಳು ಸಂಘಟಿತವಾಗಿ , ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಬೆಕು ಹಾಗೂ ಪ್ರತಿ ದಿನದ ಕಾರ್ಯ ಪ್ರಗತಿಯ ವಿವರಗಳನ್ನು ನೀಡಬೆಕು ಎಂದು ಡಿಸಿ ಸೂಚನೆ ನೀಡಿದರು.

    ಸಭೆಯಲ್ಲಿ ಜಿಲ್ಲಾ ಪಂಚಾಯತ್ ಸಿಇಓ ಡಾ. ನವೀನ್ ಭಟ್, ಅಪರ ಜಿಲ್ಲಾದಿಕಾರಿ ಸದಾಶಿವ ಪ್ರಭು, ಉಪ ವಿಬಾಗಾಧಿಕಾರಿ ರಾಜು, ಜಿ.ಪಂ. ಉಪ ಕಾರ್ಯದರ್ಶಿ ಕಿರಣ್ ಪೆಡ್ನೇಕರ್, ಡಿಹೆಚ್ ಓ ಡಾ. ಸುದೀರ್ ಚಂಧ್ರ ಸೂಢಾ, ಜಿಲ್ಲಾ ಕೋವಿಡ್ ನೋಢೆಲ್ ಅಧಿಕಾರಿ ಡಾ. ಪ್ರಶಾಂತ ಭಟ್, ಜಿಲ್ಲಾ ಸರ್ಜನ್ ಡಾ. ಮಧುಸೂದನ್ ನಾಯಕ್ ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ದೇವಸ್ಥಾನಗಳ ವ್ಯವಸ್ಥಾಪನಾ ಸಮಿತಿ ರಚನೆ: ಅರ್ಜಿ ಆಹ್ವಾನ

    17/12/2025

    ಜಿಲ್ಲೆಯಲ್ಲಿ 0-5 ವರ್ಷದೊಳಗಿನ ಮಕ್ಕಳು ಪಲ್ಸ್ ಪೊಲಿಯೋ ಲಸಿಕೆಯಿಂದ ವಂಚಿತರಾಗದಂತೆ ನೋಡಿಕೊಳ್ಳಿ: ಜಿಲ್ಲಾಧಿಕಾರಿ

    17/12/2025

    ಉಡುಪಿ: ಜಿಲ್ಲಾ ಮಟ್ಟದ ಸಿರಿಧಾನ್ಯ ಮತ್ತು ಮರೆತು ಹೋದ ಖಾದ್ಯಗಳ ಪಾಕ ಸ್ಪರ್ಧೆ

    17/12/2025
    Leave A Reply Cancel Reply

    Call us

    Click Here

    Call us

    Call us

    Call us
    Highest Viewed Recently
    • ಗಂಗೊಳ್ಳಿ: ಕ್ಯಾನ್ಸರ್ ಜಾಗೃತಿ ಕಾರ್ಯಕ್ರಮ
    • ಹಟ್ಟಿಅಂಗಡಿ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಗೆ ಇಟಿ ಟೆಕ್ ಎಕ್ಸ್ ಸ್ಕೂಲ್ ಎಕ್ಸಿಲೆನ್ಸ್ ಪ್ರಶಸ್ತಿ ಗೌರವ
    • ಮನೆಯಲ್ಲಿ ಪುಸ್ತಕಗಳನ್ನು ಓದುವ ಹವ್ಯಾಸವನ್ನು ರೂಢಿಸಿಕೊಳ್ಳಿ: ಶಿವಾನಂದ ಗಾಣಿಗ
    • ರಾಜ್ಯಮಟ್ಟದ ಸ್ಪರ್ಧಾತ್ಮಕ ಲಿಖಿತ ಪರೀಕ್ಷೆ: ನೇಹ ಸತ್ಯನಾರಾಯಣ ರಾಜ್ಯಮಟ್ಟದಲ್ಲಿ ಐದನೇ ರ‍್ಯಾಂಕ್‌
    • ದೇವಸ್ಥಾನಗಳ ವ್ಯವಸ್ಥಾಪನಾ ಸಮಿತಿ ರಚನೆ: ಅರ್ಜಿ ಆಹ್ವಾನ

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.