ಕುಂದಾಪುರ, ಕಾರ್ಕಳ ಕೋವಿಡ್ ಆಸ್ಪತ್ರೆಗೆ ಗುತ್ತಿಗೆ ಆಧಾರದಲ್ಲಿ ನೇಮಕ: ನೇರ ಸಂದರ್ಶನ

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಉಡುಪಿ: ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ಕುಂದಾಪುರ ಹಾಗೂ ಕಾರ್ಕಳ ಸಾರ್ವಜನಿಕ ಕೋವಿಡ್ ಆಸ್ಪತ್ರೆಯಲ್ಲಿ ಪ್ರಸ್ತುತ ಸಾಲಿನ ಸೆಪ್ಟಂಬರ್ರಗೆ ಕೋವಿಡ್ 19 ರ ಕರ್ತವ್ಯ ನಿರ್ವಹಿಸಲು ಶುಶ್ರೂಷಕಿಯರ – 16 ಹುದ್ದೆ ಹಾಗೂ ಗ್ರೂಪ್ ಡಿ-21 ಹುದ್ದೆಯ ನೇಮಕಾತಿಗೆ ನೇರ ಸಂದರ್ಶನವು ಏಪ್ರಿಲ್ 21ರಂದು ಬೆಳಗ್ಗೆ 10 ಗಂಟೆಗೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಯವರ ಕಚೇರಿಯಲ್ಲಿ ನಡೆಯಲಿದೆ.

Call us

Click Here

ಶುಶ್ರೂಷಕಿ ಹುದ್ದೆಗೆ ಅರ್ಜಿ ಸಲ್ಲಿಸುವವರು ಕರ್ನಾಟಕ ನರ್ಸಿಂಗ್ ಕೌನ್ಸಿಲ್ನಲ್ಲಿ ಕಡ್ಡಾಯವಾಗಿ ನೊಂದಾವಣೆ ಆಗಿರಬೇಕು. ಗ್ರೂಪ್ ಡಿ ಹುದ್ದೆಗೆ ಅರ್ಜಿ ಸಲ್ಲಿಸುವವರು ಎಸ್.ಎಸ್.ಎಲ್.ಸಿ ಉತ್ತೀರ್ಣರಾಗಿರಬೇಕು.

ನೇಮಕಾತಿ ಸಂದರ್ಶನಕ್ಕೆ ವಿದ್ಯಾರ್ಹತೆಯ ಮೂಲ ಹಾಗೂ ದೃಢೀಕೃತ ದಾಖಲೆಗಳೊಂದಿಗೆ ಹಾಜರಾಗುವಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply