ಕ್ರೀಡಾಪಟುಗಳಿಗೆ ಅಗತ್ಯ ಸೌಲಭ್ಯಗಳನ್ನು ಒದಗಿಸಿ: ಮಟ್ಟಾರು ರತ್ನಾಕರ ಹೆಗ್ಡೆ

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಉಡುಪಿ: ಕ್ರೀಡಾಪಟುಗಳು ಕ್ರೀಡೆಯಲ್ಲಿ ಉನ್ನತ ಸಾಧನೆ ಮಾಡಲು, ಅವರಿಗೆ ಅಗತ್ಯವಿರುವ ಸೌಲಭ್ಯಗಳನ್ನು ಒದಗಿಸುವ ಮೂಲಕ ಅವರ ಸಾಧನೆಗೆ ಪ್ರೇರೆಪಣೆ ನೀಡಬೇಕು ಎಂದು ಕರಾವಳಿ ಅಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ ಹೇಳಿದರು.

Call us

Click Here

ಅವರು ಅಜ್ಜರಕಾಡು ಜಿಲ್ಲಾ ಕ್ರೀಡಾಂಗಣದಲ್ಲಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ 22.316 ಕೋಟಿ ರೂ ವೆಚ್ಚದಲ್ಲಿ ನಿರ್ಮಿಸಲಾಗುತ್ತಿರುವ ಛಾವಣಿ ನಿರ್ಮಾಣ ಕಾಮಗಾರಿಯ ಗುದ್ದಲಿಪೂಜೆ ನೆರವೇರಿಸಿ ಮಾತನಾಡಿದರು.

ಕ್ರೀಡಾಂಗಣದಲ್ಲಿ ಕ್ರೀಡಾಪಟುಗಳಿಗೆ ಕ್ರೀಡಾ ಚಟುವಟಿಕೆಗಳನ್ನು ನಡೆಸಲು ಅಗತ್ಯ ಸೌಲಭ್ಯಗಳನ್ನು ಒದಗಿಸಿ, ಅವರನ್ನು ಉತ್ತಮ ಕ್ರೀಡಾಪಟುಗಳನ್ನಾಗಿ ರೂಪಿಸಬೇಕು ಎಂದು ಮಟ್ಟಾರು ರತ್ನಾಕರ ಹೆಗ್ಡೆ ಹೇಳಿದರು.

ಜಿಲ್ಲಾ ಪಂಚಾಯತ್ ಅಧ್ಯಕ್ಷ ದಿನಕರ ಬಾಬು ಮಾತನಾಡಿ, ಈ ಕ್ರೀಡಾಂಗಣದಲ್ಲಿನ ಸೌಲಭ್ಯಗಳನ್ನು ಬಳಸಿಕೊಂಡು, ಜಿಲ್ಲೆಯಲ್ಲಿ ಇನ್ನಷ್ಟು ಮಂದಿ ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಮಟ್ಟದ ಕ್ರೀಡಾಪಟುಗಳು ಮೂಡಿ ಬರಲಿ ಎಂದು ಹಾರೈಸಿದರು.

ಉಡುಪಿ ನಿರ್ಮಿತಿ ಕೇಂದ್ರದ ಯೋಜನಾ ನಿರ್ದೇಶಕ ಅರುಣ್ ಕುಮಾರ್ ಉಪಸ್ಥಿತರಿದ್ದರು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಡಾ. ರೋಶನ್ ಕುಮಾರ್ ಶೆಟ್ಟಿ ಸ್ವಾಗತಿಸಿ, ವಂದಿಸಿದರು.

Click here

Click here

Click here

Click Here

Call us

Call us

Leave a Reply