ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಕೋಡಿ ಬ್ಯಾರೀಸ್ ಶಿಕ್ಷಣ ಮಹಾವಿದ್ಯಾಲಯದ ವಿದ್ಯಾರ್ಥಿಗಳು ಬಿ.ಎಡ್ ಪರೀಕ್ಷೆಯಲ್ಲಿ ಶೇಕಡಾ100 ಫಲಿತಾಂಶ ಪಡೆಯುವದರೊಂದಿಗೆ, ವಿಶೇಷ ಸಾಧನೆ ಮಾಡಿದ್ದಾರೆ.
ಒಟ್ಟು ಪರೀಕ್ಷೆಗೆ ಹಾಜರಾದ 76 ವಿದ್ಯಾರ್ಥಿಗಳಲ್ಲಿ, 72 ವಿದ್ಯಾರ್ಥಿಗಳು ಉನ್ನತ ಶ್ರೇಣಿಯಲ್ಲಿ ಮತ್ತು 4 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ.
ವಿದ್ಯಾರ್ಥಿಗಳ ಈ ಸಾಧನೆಗೆ ಬ್ಯಾರೀಸ್ ಸಮೂಹದ ಛೇರ್ಮನ್‌ರಾದ ಸಯ್ಯದ್ ಮಹಮದ್ ಬ್ಯಾರಿ, ಬ್ಯಾರೀಸ್ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷರಾದ ಹಾಜಿ ಕೆ ಎಂ ಅಬ್ದುಲ್, ವಿಶ್ವಸ್ತರು, ನಿರ್ದೇಶಕರು, ಪ್ರಾಂಶುಪಾಲರು ಹಾಗೂ ಪ್ರಾಧ್ಯಾಪಕರು ಅಭಿನಂದನೆ ಸಲ್ಲಿಸಿದ್ದಾರೆ.