ವಾರಾಂತ್ಯದ ಕರ್ಪ್ಯೂ: ಕುಂದಾಪುರ, ಬೈಂದೂರು ತಾಲೂಕುಗಳಲ್ಲಿ ಮುಚ್ಚಿದ ಅಂಗಡಿ ಮುಂಗಟ್ಟು, ವಿರಳ ಜನಸಂಚಾರ

Click Here

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ
ಕುಂದಾಪುರ: ಕೊರೊನಾ ಪ್ರಕರಣಗಳು ಹೆಚ್ಚುತ್ತಿರುವ  ಹಿನ್ನೆಲೆಯಲ್ಲಿ,ರಾಜ್ಯ ಸರ್ಕಾರ ಕಟ್ಟುನಿಟ್ಟಿನ ವಾರಾಂತ್ಯದ ಕರ್ಫ್ಯೂ ವಿಧಿಸಿದ ನಂತರ, ಸಾಮಾನ್ಯ ಜೀವನ ಸ್ಥಗಿತಗೊಂಡಿದೆ. ಅಗತ್ಯ ವಸ್ತುಗಳ ಖರೀದಿ ಸಮಯ ಮುಗಿಯುತ್ತಿದ್ದಂತೆ ಜನರು ತಮ್ಮ ಅನಗತ್ಯವಾಗಿ ಹೊರಗೆ ಬರದಂತೆ ತಡೆಯಲು ಪೊಲೀಸ್ ಪಡೆಯನ್ನು ನಿಯೋಜಿಸಲಾಗಿದ್ದರೇ, ಜನರೂ ಕೂಡ ಅನಗತ್ಯವಾಗಿ ಹೊರಬರದೇ ಸ್ಪಂದಿಸುತ್ತಿರುವುದು ಕಂಡುಬಂದಿದೆ.

Call us

Click Here

ವಾರಾಂತ್ಯದ ಕರ್ಪ್ಯೂ ಹಿನ್ನೆಲೆಯಲ್ಲಿ ಕುಂದಾಪುರ ಹಾಗೂ ಬೈಂದೂರು ತಾಲೂಕುಗಳ ಪೇಟೆ ಭಾಗದಲ್ಲಿ ವಾಹನ ಸಂಚಾರ ವಿರಳವಾಗಿತ್ತು. ಅಂಗಡಿ ಮುಂಗಟ್ಟುಗಳು ಬಾಗಿಲು ಹಾಕಿದ್ದವು. 10 ಗಂಟೆಯ ಬಳಿಕ ದಿನಸಿ ಹಾಗೂ ಅಗತ್ಯ ವಸ್ತುಗಳ ಅಂಗಡಿಗಳ ವರ್ತಕರು ಬಾಗಿಲು ಹಾಕಿದ್ದರಿಂದ ಜನಸಂಚಾರ ವಿರಳವಾಗಿತ್ತು. ಖಾಸಗಿ ಬಸ್ ಸಂಚಾರ ಸ್ಥಗಿತಗೊಂಡಿದ್ದರೆ, ಸರ್ಕಾರಿ ಬಸ್ ಸಂಚಾರ ವಿರಳವಾಗಿತ್ತು. ಕುಂದಾಪುರ ನಗರದಲ್ಲಿ ವಾರದ ಸಂತೆಗೆ ನಿಷೇಧವಿದ್ದುದರಿಂದ ಅಲ್ಲಿಗೆ ಬಂದಿದ್ದ ಹಣ್ಣಿನ ವ್ಯಾಪಾರಿಗಳನ್ನು ವಾಪಾಸ್ ಕಳುಹಿಸಲಾಯಿತು.  ಬೆಳಿಗ್ಗೆ 10 ಗಂಟೆಯ ನಂತರ ನಗರದೊಳಕ್ಕೆ ತೆರಳುವ ವಾಹನಗಳನ್ನು ತಪಾಸಣೆ ಮಾಡಿ ಬಿಡಲಾಗುತ್ತಿತ್ತು.

ಕುಂದಾಪುರ ನಗರದಲ್ಲಿ ಉಪವಿಭಾಗಾಧಿಕಾರಿ ರಾಜು ಕೆ. ಅವರು ನಗರದಲ್ಲಿ ಬಂದೂವಸ್ತ್ ಕಾರ್ಯ ವೀಕ್ಷಿಸಿದರು. ಕುಂದಾಪುರ ಡಿವೈಎಸ್ಪಿ ಶ್ರೀಕಾಂತ್, ಕುಂದಾಪುರ ವೃತ್ತ ನಿರೀಕ್ಷಕ ಗೋಪಿಕೃಷ್ಣ, ಬೈಂದೂರು ವೃತ್ತ ನಿರೀಕ್ಷಕ ಸಂತೋಷ್ ಕಾಯ್ಕಿಣಿ ಅವರುಗಳ ಮಾರ್ಗದರ್ಶನದಲ್ಲಿ ಎಲ್ಲಾ ಠಾಣಾ ವ್ಯಾಪ್ತಿಯಲ್ಲಿಯೂ ಬಂದೋವಸ್ತ್ ವ್ಯವಸ್ಥೆ ಮಾಡಲಾಗಿತ್ತು.

Click here

Click here

Click here

Click Here

Call us

Call us

Leave a Reply