ಕುಂದಾಪ್ರ ಡಾಟ್ ಕಾಂ ಸುದ್ದಿ.
ಉಡುಪಿ: ಜಿಲ್ಲೆಯಲ್ಲಿ ಭಾನುವಾರ 319 ಕೋವಿಡ್ ಪಾಸಿಟಿವ್ ಪ್ರಕರಣ ವರದಿಯಾಗಿದೆ. ಈ ಪೈಕಿ ಉಡುಪಿ, ಬ್ರಹ್ಮಾವರ, ಕಾಪು ತಾಲೂಕಿನ 156, ಕುಂದಾಪುರ, ಬೈಂದೂರು ತಾಲೂಕಿನ 103, ಕಾರ್ಕಳ, ಹೆಬ್ರಿ ತಾಲೂಕಿನ 59 ಮಂದಿಗೆ ಹಾಗೂ ಹೊರ ಜಿಲ್ಲೆಯಿಂದ ಬಂದ ಓರ್ವರಿಗೆ ಕೋವಿಡ್ ಪಾಸಿಟಿವ್ ಕಾಣಿಸಿಕೊಂಡಿದೆ.
ಒಟ್ಟು 319 ಪ್ರಕರಣಗಳಲ್ಲಿ 127 ಸಿಂಟಮಿಕ್ ಹಾಗೂ 192 ಅಸಿಂಟಮಿಕ್ ಪ್ರಕರಣಗಳಾಗಿವೆ. ಈ ಪೈಕಿ 35 ಮಂದಿ ಕೋವಿಡ್ ಕೇರ್ ಸೆಂಟರ್, ಕೋವಿಡ್ ಆಸ್ಪತ್ರೆ ಹಾಗೂ ಕೋವಿಡ್ ಹೆಲ್ತ್ ಆಸ್ಪತ್ರೆಗೆ ದಾಖಲಾಗಿದ್ದರೆ 284 ಮಂದಿ ಹೋಮ್ ಐಸೊಲೇಷನ್ ಆಗಿದ್ದಾರೆ. ಜಿಲ್ಲೆಯಲ್ಲಿ ಇಂದು ಒಟ್ಟು 3820 ಮಂದಿಯನ್ನು ಪರೀಕ್ಷಿಸಲಾಗಿದೆ. ಒಟ್ಟು 1565 ಸಕ್ರಿಯ ಪ್ರಕರಣಗಳಿದ್ದು, 245 ಮಂದಿಯನ್ನು ಡಿಸ್ಚಾರ್ಜ್ ಮಾಡಲಾಗಿದೆ.