ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಕರ್ನಾಟಕ ಸೆಕೆಂಡರಿ ಎಜುಕೇಷನ್ ಬೋರ್ಡ್ ನಡೆಸಿದ ಭರತನಾಟ್ಯ ವಿದ್ವತ್ ಪರೀಕ್ಷೆ ಯಲ್ಲಿ ರೋಶನ್ ಪೂಜಾರಿ ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆ ಹೊಂದಿ ‘ವಿದ್ವಾನ ಪದವಿ’ಯನ್ನು ಪಡೆದುಕೊಂಡಿದ್ದಾರೆ.
ಇವರು ತಮ್ಮ 10ನೇ ವಯಸ್ಸಿನಿಂದ ಕುಂದಾಪುರ ನೃತ್ಯ ವಸಂತ ನಾಟ್ಯಾಲಯದ ನೃತ್ಯ ಗುರುಗಳಾದ ವಿದುಷಿ ಪ್ರವೀತಾ ಅಶೋಕ ಅವರಿಂದ ಭರತನಾಟ್ಯ ಕಲಿಯಲು ಪ್ರಾರಂಭಿಸಿ, ಜ್ಯೂನಿಯರ್, ಸಿನಿಯರ್, ವಿದ್ವತ್ ಪೂರ್ವ, ಹಾಗೂ ವಿದ್ವತ್ ಅಂತಿಮ ಪರೀಕ್ಷೆಯಲ್ಲಿ ವಿಶಿಷ್ಟ ಶ್ರೇಣಿಯಲ್ಲೆ ತೇರ್ಗಡೆ ಹೊಂದಿರುತ್ತಾರೆ. ರಾಜ್ಯ ಹಾಗೂ ರಾಷ್ಟ್ರ ಮಟ್ಟದ ಭರತನಾಟ್ಯ ಸ್ಪರ್ಧೆಯಲ್ಲಿ ಭಾಗವಹಿಸಿ ಹಾಲವಾರು ಪ್ರಥಮ ಬಹುಮಾನ ಪಡೆದ ಇವನು ‘ಶ್ರೀ ದುರ್ಗಾ ನಾಟ್ಯ ವಿಶಾರದ’ ಬಿರುದನ್ನು ಪಡೆದಿರುತ್ತಾನೆ. ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿಯವರ ಶಿಷ್ಯ ವೇತನಕ್ಕೆ ಆಯ್ಕೆಯಾಗಿದ್ದಾರೆ.