ನಾಳೆ ರಾತ್ರಿಯಿಂದ 14 ದಿನ ಕರ್ನಾಟಕ ಲಾಕ್. ಬೆಳಗ್ಗೆ 6 ರಿಂದ 10 ಗಂಟೆವರೆಗೆ ಅಗತ್ಯ ವಸ್ತು ಖರೀದಿಗೆ ಅವಕಾಶ

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೆಂಗಳೂರು, ಎ.26: ರಾಜ್ಯದಲ್ಲಿ ಕೊರೊನಾ ಸೊಂಕಿನ ಎರಡನೇ ಅಲೆ ವ್ಯಾಪಕವಾಗಿ ಹಬ್ಬುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಕಠಿಣ ಕ್ರಮ ಕೈಗೊಳ್ಳಲೇಬೇಕಾದ ಅನಿವಾರ್ಯತೆಯಿದ್ದು ಮುಂದಿನ 14 ದಿನಗಳ ಕಾಲ ಕರ್ನಾಟಕವನ್ನು ಲಾಕ್ಡೌನ್ (ಕೋವಿಡ್ ಕರ್ಪ್ಯೂ) ಮಾಡಲು ನಿರ್ಧರಿಸಲಾಗಿದೆ. ನಾಳೆ ಸಂಜೆಯಿಂದ ಲಾಕ್ಡೌನ್ ಜಾರಿಯಾಗಲಿದ್ದು, 15 ದಿನಗಳ ಕಾಲ ಈ ಕಠಿಣ ನಿಯಮ ಮುಂದುವರೆಯಲಿದೆ ಎಂದು ಸರ್ಕಾರ ತಿಳಿಸಿದೆ.

Call us

Click Here

ಬೆಳಗ್ಗೆ 6 ರಿಂದ 10 ಗಂಟೆವರೆಗೆ ಅಗತ್ಯ ವಸ್ತು ಖರೀದಿಗೆ ಅವಕಾಶ ಕಲ್ಪಿಸಲಾಗಿದೆ. ಉತ್ಪಾದನಾ ವಲಯ ಎಂದಿನಂತೆ ಮುಂದುವರಿಯುತ್ತದೆ. ಕೃಷಿ ಚಟುವಟಿಕೆಗಳಿಗೂ ಯಾವುದೇ ತೊಂದರೆ ಇಲ್ಲ. ರಾಜ್ಯದಲ್ಲಿ ಎಂದಿನಂತೆ ಕರ್ಫ್ಯೂ ಮುಂದುವರಿಯುತ್ತದೆ. ರಾಜ್ಯದಲ್ಲಿ ಆಕ್ಸಿಜನ್ ಕೊರತೆಯಾಗದಂತೆ ಕ್ರಮ ಕೈಗೊಳ್ಳಲಾಗಿದೆ. ಇನ್ನುಮುಂದೆ ಆಕ್ಸಿಜನ್ ಕೊರತೆಯಾಗುವುದಿಲ್ಲ. ರಾಜ್ಯಕ್ಕೆ 800 ಮೆಟ್ರಿಕ್ ಟನ್ ಆಕ್ಸಿಜನ್ ಕೊಡಲು ಕೇಂದ್ರ ಸರ್ಕಾರ ಕೊಡಲು ಒಪ್ಪಿಕೊಂಡಿದೆ. ಎಂದು ತಿಳಿಸಿದ್ದಾರೆ. ಅಲ್ಲದೇ ರೆಮ್ಡೆಸಿವಿರ್ ಇಂಜೆಕ್ಷನ್ ಕೊರತೆಯೂ ಆಗುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಎರಡು ವಾರದಲ್ಲಿ ಕೊರೊನಾ ನಿಯಂತ್ರಣಕ್ಕೆ ಬಾರದಿದ್ದರೆ ಮತ್ತೆ ಕಠಿಣ ಕ್ರಮ ಮುಂದುವರೆಸಬೇಕಾದ ಅನಿವಾರ್ಯತೆ ಬರಬಹುದು. ಹಾಗಾಗಿ ಜನರು ಸಹಕಾರ ನೀಡಿ ಕೊರೊನಾ ನಿಯಂತ್ರಿಸಬೇಕು ಎಂದಿದ್ದಾರೆ. ಜನರ ಓಡಾಟಕ್ಕೆ ಸಾರಿಗೆ ಸಂಚಾರ ಇರುವುದಿಲ್ಲ. ಆದರೆ, ಸರಕು ಸಾಗಣೆ ವಾಹನ ಸಂಚಾರಕ್ಕೆ ಯಾವುದೇ ಅಡ್ಡಿಯಾಗುವುದಿಲ್ಲ ಎಂದು ತಿಳಿಸಿದ್ದಾರೆ.

ತಾಲ್ಲೂಕು ತಹಶೀಲ್ದಾರ್ ನೋಡೆಲ್ ಆಫೀಸರ್ ಆಗಿ ಕೆಲಸ ಮಾಡುತ್ತಾರೆ. ಇದನ್ನು ನಾವು ಕೋವಿಡ್ ಕರ್ಫ್ಯೂ ಅಂತೀವಿ. ಬೆಳಿಗ್ಗೆ 6ರಿಂದ 10ರವರೆಗೆ ದಿನಬಳಕೆಯ ವಸ್ತು ಖರೀದಿಗೆ ಅವಕಾಶ ಇರಲಿದೆ. ಬೇರೆ ಯಾವುದಕ್ಕೂ ಅವಕಾಶ ಇರಲ್ಲ ಎಂದು ಮುಖ್ಯಮಂತ್ರಿಗಳು ಸುದ್ದಿಗೋಷ್ಠಿಯಲ್ಲಿ ಹೇಳಿದ್ದಾರೆ.

Click here

Click here

Click here

Click Here

Call us

Call us

Leave a Reply