Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಕೋವಿಡ್ ಮಾರ್ಗಸೂಚಿ ಕಾಟಾಚಾರಕ್ಕೆ ಅನುಷ್ಠಾನ ಮಾಡಿದರೆ ಅಧಿಕಾರಿಗಳ ವಿರುದ್ದ ಕ್ರಮ: ಉಡುಪಿ ಡಿಸಿ
    ಉಡುಪಿ ಜಿಲ್ಲೆ

    ಕೋವಿಡ್ ಮಾರ್ಗಸೂಚಿ ಕಾಟಾಚಾರಕ್ಕೆ ಅನುಷ್ಠಾನ ಮಾಡಿದರೆ ಅಧಿಕಾರಿಗಳ ವಿರುದ್ದ ಕ್ರಮ: ಉಡುಪಿ ಡಿಸಿ

    Updated:28/04/2021No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಉಡುಪಿ: ಕೋವಿಡ್ 2 ನೇ ಅಲೆ ನಿಯಂತ್ರಣಕ್ಕೆ ಸಂಬಂಧಿಸಿದಂತೆ, ಏಪ್ರಿಲ್ 27 ರಿಂದ ಮೇ 12 ರ ವರೆಗೆ ಸರ್ಕಾರ ಹೊರಡಿಸಿರುವ ಮಾರ್ಗಸೂಚಿಗಳನ್ನು ಎಲ್ಲಾ ಅಧಿಕಾರಿಗಳು ಕಟ್ಟುನಿಟ್ಟಾಗಿ ಅನುಷ್ಠಾನ ಮಾಡಬೇಕು. ಮಾರ್ಗಸೂಚಿಗಳನ್ನು ಕಾಟಾಚಾರಕ್ಕೆ ಅನುಷ್ಠಾನ ಮಾಡುವ ಅಧಿಕಾರಿಗಳ ವಿರುದ್ಧ ಎಪಿಡಮಿಕ್ ಕಾಯಿದೆ ಅನುಸಾರ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಜಿ. ಜಗದೀಶ್ ಎಚ್ಚರಿಕೆ ನೀಡಿದರು.

    Click Here

    Call us

    Click Here

    ಅವರು ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ, ಕೋವಿಡ್ ಮಾರ್ಗಸೂಚಿ ಅನುಷ್ಠಾನ ಕುರಿತ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

    ಸರ್ಕಾರ ಸೂಚಿಸಿರುವ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಅನುಷ್ಠಾನ ಮಾಡಿ, ಜಿಲ್ಲೆಯಲ್ಲಿ ಕೋವಿಡ್ ಉಲ್ಬಣವಾಗುವುದನ್ನು ನಿಯಂತ್ರಿಸಬೇಕು. ರೈಲು ಮತ್ತು ವಿಮಾನ ಪ್ರಯಾಣ ಮಾಡುವವರನ್ನು ಅವರು ಹೊಂದಿರುವ ಅಧಿಕೃತ ಟಿಕೆಟ್ ಆಧಾರದಲ್ಲಿ ಸಂಚಾರಕ್ಕೆ ಅನುಮತಿ ನೀಡಿ, ತುರ್ತು
    ಆರೋಗ್ಯ ಸಮಸ್ಯೆಯಿರುವ ರೋಗಿಗಳು ಆಟೋ, ಟ್ಯಾಕ್ಸಿ ಮತ್ತು ಖಾಸಗಿ ವಾಹನಗಳಲ್ಲಿ ಸಂಚರಿಸಲು ಅನುಮತಿ ಇದೆ. ಹೋಟೆಲ್ ಮತ್ತು ರೆಸ್ಟೋರೆಂಟ್ಗಳಲ್ಲಿ ಹೋಂ ಡೆಲಿವರಿಗೆ ಮಾತ್ರ ಅವಕಾಶ ನೀಡಿ ಎಂದರು.

    ಅವಶ್ಯಕ ಮತ್ತು ತುರ್ತು ಸೇವೆ ಒದಗಿಸುವ ಸಿಬ್ಬಂದಿಗಳಿಗೆ ಅವರ ಗುರುತಿನ ಚೀಟಿ ಆಧಾರದಲ್ಲಿ ಸಂಚರಿಸಲು ಅವಕಾಶ ಇದೆ ಹಾಗೂ ಗಾರ್ಮೆಂಟ್ಸ್ ಹೊರತುಪಡಿಸಿ ಎಲ್ಲಾ ಕೈಗಾರಿಕೆಗಳಲ್ಲಿ ಹಾಗೂ ರಾತ್ರಿ ಪಾಳಿಯಲ್ಲಿ ಕರ್ತವ್ಯ ನಿರ್ವಹಿಸುವ ನೌಕರರು ಸೂಕ್ತ ಗುರುತಿನ ಚೀಟಿ ಹೊಂದಿ ಸಂಚರಿಸಲು
    ಅವಕಾಶ ಇದೆ. ಮುದ್ರಣ ಮತ್ತು ಎಲೆಕ್ಟಾçನಿಕ್ ಮಾಧ್ಯಮದವರು ತಮ್ಮ ಗುರುತಿನ ಚೀಟಿಯೊಂದಿಗೆ ಸಂಚರಿಸಬಹುದು. ಸರಕು ಸಾಗಾಣಿಕೆ ವಾಹನಗಳು ಲೋಡ್ ಮತ್ತು ಅನ್ಲೋಡ್ ಮಾಡಿ ಸಂಚರಿಸಲು ಯಾವುದೇ ನಿರ್ಭಂಧಗಳಿಲ್ಲ. ಅಂತಹ ವಾಹನಗಳನ್ನು ತಡೆಯಬಾರದು ಎಂದು ಡಿಸಿ ಹೆಳಿದರು.

    ದಿನಬಳಕೆಯ ಅಗತ್ಯ ವಸ್ತುಗಳನ್ನು ಖರೀದಿಸಲು ಬೆಳಗ್ಗೆ 6 ರಿಂದ 10 ರ ವರೆಗೆ ಅವಕಾಶವಿದ್ದು, ಸಾರ್ವಜನಿಕರು ತಮ್ಮ ಮನೆಯ ಸಮೀಪದ ಅಂಗಡಿಗಳಲ್ಲಿ ವಸ್ತುಗಳನ್ನು ಖರೀದಿಸಬೇಕು. ಅನಾವಶ್ಯಕವಾಗಿ ಸಂಚರಿಸಬಾರದು. ಕೋವಿಡ್ ಲಸಿಕೆ ಪಡೆಯುವವರು ತಮ್ಮ ಸಮೀಪದ ಆಸ್ಪತ್ರೆಗಳಿಗೆ ಮಾತ್ರ
    ತೆರಳಿ, ಲಸಿಕೆ ಪಡೆಯಲು ಅವಕಾಶವಿದೆ. ಲಸಿಕೆ ಪಡೆಯುವ ಉದ್ದೇಶದಿಂದ ಅನಗತ್ಯ ಸಂಚಾರ ಮಾಡುವಂತಿಲ್ಲ. ಲಸಿಕೆ ನೀಡುವ ಕೇಂದ್ರಗಳಲ್ಲಿ ಸೂಕ್ತ ಸಾಮಾಜಿಕ ಅಂತರ ಕಾಯ್ದುಕೊಂಡು ಲಸಿಕೆ ನೀಡಲು ವ್ಯವಸ್ಥೆ ಮಾಡುವಂತೆ ಡಿಸಿ ಸೂಚನೆ ನೀಡಿದರು.

    Click here

    Click here

    Click here

    Call us

    Call us

    ಕಟ್ಟಡ ನಿರ್ಮಾಣ ಚಟುವಟಿಕೆಗೆ ಅವಕಾಶವಿದ್ದು, ಕಾರ್ಮಿಕರಿಗೆ ಸಂಬಂಧಪಟ್ಟ ನಿರ್ಮಾಣ ಸಂಸ್ಥೆ ಅಥವಾ ಮಾಲೀಕರು ಸೂಕ್ತ ಗುರುತಿನ ಚೀಟಿ ಒದಗಿಸಬೇಕು. ಮೀನುಗಾರಿಕೆಯನ್ನು ನಿಗಧಿತ ಅವಧಿಯೊಳಗೆ ಮಾಡಲು ಕ್ರಮ ಕೈಗೊಳ್ಳಿ. ಕೃಷಿ ಚಟುವಟಿಕೆ ನಡೆಸಲು ನಿರ್ಬಂದಗಳಿಲ್ಲ.

    ಮದುವೆ ಕಾರ್ಯಕ್ರಮಕ್ಕೆ 50 ಮಂದಿ, ಶವ ಸಂಸ್ಕಾರಕ್ಕೆ 5 ಮಂದಿ ಮಾತ್ರ ಭಾಗವಹಿಸಲು ಅವಕಾಶವಿದೆ. ಮೊನ್ನೆ ನಡೆದ ವಿವಾಹ ಕಾರ್ಯಕ್ರಮಗಳ ಬಗ್ಗೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿ, ಕೋವಿಡ್ ನಿಯಮ ಉಲ್ಲಂಘನೆಯಾಗದಂತೆ ನೋಡಿಕೊಂಡಿದ್ದಾರೆ. ಅತ್ಯುತ್ತಮವಾಗಿ ಕಾರ್ಯ ನಿರ್ವಹಿಸಿದ್ದಾರೆ ಇದೇ ರೀತಿಯಲ್ಲಿ ಕಾರ್ಯನಿರ್ವಹಿಸುವಂತೆ ಜಿ.ಜಗದೀಶ್ ಹೇಳಿದರು.

    ಸಭೆಯಲ್ಲಿ ಜಿಲ್ಲಾ ಪಂಚಾಯತ್ ಸಿಇಓ ಡಾ. ನವೀನ್ ಭಟ್, ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು, ಕುಂದಾಪುರ ಉಪವಿಬಾಗಾಧಿಕಾರಿ ರಾಜು, ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಕಿರಣ್ ಫಡ್ನೇಕರ್, ಮುಖ್ಯ ಯೋಜನಾಧಿಕಾರಿ ಶ್ರೀನಿವಾಸ ರಾವ್ ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಕರಡು ಮತದಾರರ ಪಟ್ಟಿ ಆಗಸ್ಟ್ 24ರಂದು ಪ್ರಕಟ: ಜಿಲ್ಲಾಧಿಕಾರಿ

    20/08/2026

    ಮೈ ಭಾರತ್ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿ: ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ

    20/08/2026

    ಡಾ. ಶಿವರಾಮ ಕಾರಂತ ಜನ್ಮದಿನಾಚರಣೆ: ರಾಜ್ಯ ಮಟ್ಟದ ಪ್ರಬಂಧ ಸ್ಪರ್ಧೆ

    19/08/2026
    Leave A Reply Cancel Reply

    twenty + 4 =

    Call us

    Click Here

    Call us

    Call us

    Call us
    Highest Viewed Recently
    • 56ನೇ ರೈತ ಪುರಸ್ಕಾರಕ್ಕೆ ಶೇಖರ್ ಪೂಜಾರಿ ಗುಂಡ್ಮಿ ಆಯ್ಕೆ
    • ನಮ್ಮಗೆ ಸರಕಾರದ ಪ್ರೋತ್ಸಾಹಧನ ಬೇಡ ಕನಿಷ್ಟ ದಿನಗೂಲಿ ನೀಡಿ: ಹೈನುಗಾರರ ಬೇಡಿಕೆ
    • ಅಗಸ್ಟ್ 23ರಂದು ಬೈಂದೂರಿನಲ್ಲಿ ʼಗಮ್ಮತ್ತ್ʼ ಕಾರ್ಯಕ್ರಮ. ದಿನವಿಡಿ ಹತ್ತಾರು ವಿಶೇಷತೆಗಳು
    • ಸಾಸ್ತಾನದಿಂದ ಶ್ರೀ ಕ್ಷೇತ್ರ ತಿರುಪತಿಗೆ 16ನೇ ವರ್ಷದ ಬೃಹತ್ ಪಾದಯಾತ್ರೆ
    • ಮರವಂತೆ: ಅರಬ್ಬಿ ಸಮುದ್ರದಲ್ಲಿ ದೋಣಿ ಆಯತಪ್ಪಿ ಬಿದ್ದು ಮೀನುಗಾರ ಸಾವು

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.