ಕುಂದಾಪ್ರ ಡಾಟ್ ಕಾಂ ಸುದ್ದಿ.
ಗಂಗೊಳ್ಳಿ: ಗಂಗೊಳ್ಳಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಎಲ್ಲಾ ಅಂಗನವಾಡಿ ಕಾರ್ಯಕರ್ತೆಯರಿಗೆ ಗಂಗೊಳ್ಳಿ ಗ್ರಾಮ ಪಂಚಾಯತ್ ವತಿಯಿಂದ ಉಚಿತ ಮಾಸ್ಕ್ ಮತ್ತು ಸ್ಯಾನಿಟೈಸರ್ ಬುಧವಾರ ವಿತರಿಸಲಾಯಿತು.
ಗಂಗೊಳ್ಳಿ ಗ್ರಾಮ ಪಂಚಾಯತ್ ಕಾರ್ಯಾಲಯದಲ್ಲಿ ಪಿಡಿಒ ಉಮಾಶಂಕರ್ ಅಂಗನವಾಡಿ ಕಾರ್ಯಕರ್ತೆಯರಿಗೆ ಮಾಸ್ಕ್ ಮತ್ತು ಸ್ಯಾನಿಟೈಸರ್ ವಿತರಿಸಿದರು. ಗ್ರಾಪಂ ಸದಸ್ಯರು ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.