ಕುಂದಾಪ್ರ ಡಾಟ್ ಕಾಂ ಸುದ್ದಿ.
ಉಡುಪಿ: ರಾಜ್ಯದಲ್ಲಿ ಪ್ರಸ್ತುತ ಕೋವಿಡ್-19 ಸಾಂಕ್ರಾಮಿಕ ರೋಗದ ಎರಡನೆ ಅಲೆಯನ್ನು ನಿಯಂತ್ರಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರವು ಏಪ್ರಿಲ್ 27 ರ ರಾತ್ರಿ 9 ಗಂಟೆಯಿದ ಮೇ 12 ರ ಬೆಳಗ್ಗೆ 6 ಘಂಟೆಯವರೆಗೆ ಲಾಕ್ ಡೌನ್ ಅನ್ನು ಘೋಷಿಸಿರುತ್ತದೆ.
ಏ. 26 ರಂದು ಮುಖ್ಯ ಕಾರ್ಯದರ್ಶಿಗಳು ಹೊರಡಿಸಿರುವ ಮಾರ್ಗಸೂಚಿಯಂತೆ ಕೃಷಿ ಮತ್ತು ತೋಟಗಾರಿಕೆಗೆ ಸಂಬಂಧಿಸಿದ ಚಟುವಟಿಕೆಗಳನ್ನು ಕೈಗೊಳ್ಳಲು ಅವಕಾಶ ಕಲ್ಪಿಸಲಾಗಿದ್ದು, ಅಗತ್ಯ ವಸ್ತುಗಳಾದ ಹೂ, ಹಣ್ಣು ಮತ್ತು ತರಕಾರಿಗಳ ಕೊಯ್ಲು, ವಿಂಗಡಣೆ, ಮಾರಾಟ ಹಾಗೂ ಸಾಗಾಣಿಕೆಯನ್ನು ಕೈಗೊಳ್ಳಬಹುದಾಗಿರುತ್ತದೆ.
ಈ ಕುರಿತು ಜಿಲ್ಲೆಯ ತೋಟಗಾರಿಕೆ ಬೆಳೆಗಾರ ರೈತರಿಗೆ ಯಾವುದೇ ತೊಂದರೆಯಾದಲ್ಲಿ ಜಿಲ್ಲೆಯ ರೈತರು ಸಹಾಯವಾಣಿ ಸಂಖ್ಯೆ: 8431610820 ಅನ್ನು ಸಂಪರ್ಕಿಸುವಂತೆ ತೋಟಗಾರಿಕೆ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.