ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು: ಯುವಮೋರ್ಚಾ ಭಾರತೀಯ ಜನತಾಪಾರ್ಟಿ ಬೈಂದೂರು ಮಂಡಲ ವತಿಯಿಂದ ಇಂದು ಪಕ್ಷದ ಕಛೇರಿಯಲ್ಲಿ ಸ್ವಯಂ ಪ್ರೇರಿತ ರಕ್ತದಾನ ಶಿಬಿರವನ್ನು ಆಯೋಜಿಸಲಾಯಿತು. ಜಿಲ್ಲಾ ವೈದ್ಯಾಧಿಕಾರಿಗಳಾದ ಡಾ.ವೀಣಾ ಕಾರ್ಯಕ್ರಮವನ್ನು ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಮಂಡಲ ಅಧ್ಯಕ್ಷರಾದ ದೀಪಕ್ ಕುಮಾರ್ ಶೆಟ್ಟಿ, ಜಿಲ್ಲಾ ಯುವಮೋರ್ಚಾ ಪ್ರಧಾನ ಕಾರ್ಯದರ್ಶಿ ಶರತ್ ಕುಮಾರ್ ಶೆಟ್ಟಿ, ರಾಜ್ಯ ಯುವಮೋರ್ಚಾ ಕಾರ್ಯಕಾರಣಿ ಸದಸ್ಯರಾದ ಪ್ರಜ್ವಲ್ ಶೆಟ್ಟಿ , ಮಂಡಲ ಪ್ರಧಾನ ಕಾರ್ಯದರ್ಶಿ ಪ್ರಕಾಶ್ ಪೂಜಾರಿ ಹಾಗೂ ಪಕ್ಷದ ಎಲ್ಲಾ ಪದಾಧಿಕಾರಿಗಳು, ಕಾರ್ಯಕರ್ತರು ಉಪಸ್ಥಿತರಿದ್ದರು
ಯುವಮೋರ್ಚಾ ಪ್ರಧಾನಕಾರ್ಯದರ್ಶಿ ಆಕಾಶ್ ಪೂಜಾರಿ ಸ್ವಾಗತಿಸಿದರು, ಯುವಮೋರ್ಚಾ ಅಧ್ಯಕ್ಷ ಸಂತೋಶ್ ಧನ್ಯವಾದಗೈದರು.