ಉಡುಪಿ ಜಿಲ್ಲೆಯಲ್ಲಿ ಶುಕ್ರವಾರ 660 ಕೋವಿಡ್ ಪಾಸಿಟಿವ್. 2 ಸಾವು, 419 ಮಂದಿ ಗುಣಮುಖ

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಉಡುಪಿ: ಜಿಲ್ಲೆಯಲ್ಲಿ ಶುಕ್ರವಾರ 600 ಕೋವಿಡ್ ಪಾಸಿಟಿವ್ ಪ್ರಕರಣ ವರದಿಯಾಗಿದೆ. ಈ ಪೈಕಿ ಉಡುಪಿ, ಬ್ರಹ್ಮಾವರ, ಕಾಪು ತಾಲೂಕಿನ 346, ಕುಂದಾಪುರ, ಬೈಂದೂರು ತಾಲೂಕಿನ 217, ಕಾರ್ಕಳ, ಹೆಬ್ರಿ ತಾಲೂಕಿನ 93 ಮಂದಿಗೆ ಹಾಗೂ ಹೊರ ಜಿಲ್ಲೆಯಿಂದ ಬಂದ 4 ಮಂದಿಗೆ ಕೋವಿಡ್ ಪಾಸಿಟಿವ್ ಕಾಣಿಸಿಕೊಂಡಿದೆ.

Call us

Click Here

ಒಟ್ಟು 660 ಪ್ರಕರಣಗಳಲ್ಲಿ 407 ಸಿಂಟಮಿಕ್ ಹಾಗೂ 253 ಅಸಿಂಟಮಿಕ್ ಪ್ರಕರಣಗಳಾಗಿವೆ. ಈ ಪೈಕಿ 57 ಮಂದಿ ಕೋವಿಡ್ ಕೇರ್ ಸೆಂಟರ್, ಕೋವಿಡ್ ಆಸ್ಪತ್ರೆ ಹಾಗೂ ಕೋವಿಡ್ ಹೆಲ್ತ್ ಆಸ್ಪತ್ರೆಗೆ ದಾಖಲಾಗಿದ್ದರೆ 603 ಮಂದಿ ಹೋಮ್ ಐಸೊಲೇಷನ್ ಆಗಿದ್ದಾರೆ. ಜಿಲ್ಲೆಯಲ್ಲಿ ಇಂದು ಒಟ್ಟು 2763 ಮಂದಿಯನ್ನು ಪರೀಕ್ಷಿಸಲಾಗಿದೆ. ಒಟ್ಟು 2596 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, 419 ಮಂದಿಯನ್ನು ಇಂದು ಡಿಸ್ಚಾರ್ಜ್ ಮಾಡಲಾಗಿದೆ. ಇಂದು ಕೋವಿಡ್ ಪಾಸಿಟಿವ್ ಆಗಿದ್ದ ಉಡುಪಿಯ 73 ವರ್ಷದ ಪುರುಷ ಹಾಗೂ 50 ವರ್ಷದ ಮಹಿಳೆ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ.

Leave a Reply