ಉಡುಪಿ ಜಿಲ್ಲೆಯಲ್ಲಿ ಶನಿವಾರ 430 ಕೋವಿಡ್ ಪಾಸಿಟಿವ್. 3 ಸಾವು, 380 ಮಂದಿ ಗುಣಮುಖ

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಉಡುಪಿ: ಜಿಲ್ಲೆಯಲ್ಲಿ ಶನಿವಾರ 430 ಕೋವಿಡ್ ಪಾಸಿಟಿವ್ ಪ್ರಕರಣ ವರದಿಯಾಗಿದೆ. ಈ ಪೈಕಿ ಉಡುಪಿ, ಬ್ರಹ್ಮಾವರ, ಕಾಪು ತಾಲೂಕಿನ 226, ಕುಂದಾಪುರ, ಬೈಂದೂರು ತಾಲೂಕಿನ 162, ಕಾರ್ಕಳ, ಹೆಬ್ರಿ ತಾಲೂಕಿನ 39 ಮಂದಿಗೆ ಹಾಗೂ ಹೊರ ಜಿಲ್ಲೆಯಿಂದ ಬಂದ 3 ಮಂದಿಗೆ ಕೋವಿಡ್ ಪಾಸಿಟಿವ್ ಕಾಣಿಸಿಕೊಂಡಿದೆ. ಕೋವಿಡ್ ಪಾಸಿಟಿವ್ ಆಗಿದ್ದ 3 ಮಂದಿ ಇಂದು ಮೃತಪಟ್ಟಿದ್ದಾರೆ.

Call us

Click Here

ಒಟ್ಟು 430 ಪ್ರಕರಣಗಳಲ್ಲಿ 276 ಸಿಂಟಮಿಕ್ ಹಾಗೂ 154 ಅಸಿಂಟಮಿಕ್ ಪ್ರಕರಣಗಳಾಗಿವೆ. ಈ ಪೈಕಿ 39 ಮಂದಿ ಕೋವಿಡ್ ಕೇರ್ ಸೆಂಟರ್, ಕೋವಿಡ್ ಆಸ್ಪತ್ರೆ ಹಾಗೂ ಕೋವಿಡ್ ಹೆಲ್ತ್ ಆಸ್ಪತ್ರೆಗೆ ದಾಖಲಾಗಿದ್ದರೆ 391 ಮಂದಿ ಹೋಮ್ ಐಸೊಲೇಷನ್ ಆಗಿದ್ದಾರೆ. ಜಿಲ್ಲೆಯಲ್ಲಿ ಒಟ್ಟು 2643 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, 380 ಮಂದಿಯನ್ನು ಇಂದು ಡಿಸ್ಚಾರ್ಜ್ ಮಾಡಲಾಗಿದೆ. ಇಂದು ಕೋವಿಡ್ ಪಾಸಿಟಿವ್ ಆಗಿದ್ದ ಕುಂದಾಪುರದ 94 ವರ್ಷದ ಪುರುಷ, ಉಡುಪಿಯ 64 ವರ್ಷದ ಪುರುಷ ಹಾಗೂ 73 ವರ್ಷದ ಮಹಿಳೆ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ. ಇಂದು ಒಟ್ಟು 2565 ಮಂದಿಗೆ ಕೋವಿಡ್ ಪರೀಕ್ಷೆ ನಡೆಸಲಾಗಿದೆ.

 

Leave a Reply