ಉಡುಪಿ: ಜಿಲ್ಲೆಯಲ್ಲಿ ಕೊರೊನಾ ಲಸಿಕೆ ಲಭ್ಯತೆ ಕುರಿತು ಇಲ್ಲಿದೆ ಮಾಹಿತಿ

Call us

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಉಡುಪಿ: ಜಿಲ್ಲೆಯಲ್ಲಿ ಕೋವಿಶೀಲ್ಡ್ ಲಸಿಕೆಯ ದಾಸ್ತಾನು ಸಾಕಷ್ಟು ಇಲ್ಲದಿರುವುದರಿಂದ ಪ್ರಥಮ ಡೋಸ್ ಪಡೆದು 8 ವಾರ ಮೀರಿದವರು ಒಟ್ಟು 947 ಅರ್ಹ ಫಲಾನುಭವಿಗಳಿದ್ದು, ಇವರಿಗೆ ಆದ್ಯತೆ ಮೇರೆಗೆ ಲಸಿಕೆ ನೀಡಬೇಕಾಗಿರುವುದರಿಂದ ಆಶಾಕಾರ್ಯಕರ್ತೆಯರು, ಆರೋಗ್ಯ ಸಿಬ್ಬಂದಿಯವರು ಸದರಿಯವರಿಗೆ ಕರೆ ಮಾಡಿ ಲಸಿಕೆ ಪಡೆಯಲು ಕ್ರಮವಹಿಸುತ್ತಾರೆ. ಪ್ರಥಮ ಡೋಸ್ ಕೋವಿಶೀಲ್ಡ್ ಲಸಿಕೆ ಪಡೆದು 8 ವಾರ ಮೀರಿದವರು ಆಶಾಕಾರ್ಯಕರ್ತೆಯರಿಗೆ ಕರೆ ಮಾಡಿ 2ನೇ ಡೋಸ್ ಲಸಿಕೆ ಪಡೆಯಬಹುದಾಗಿದೆ.

Call us

Click Here

Click here

Click Here

Call us

Visit Now

Click here

ಜಿಲ್ಲೆಯಲ್ಲಿ ಕೋವ್ಯಾಕ್ಸಿನ್ ಲಸಿಕೆ ಲಭ್ಯವಿರುವುದಿಲ್ಲವಾಗಿದ್ದು, ರಾಜ್ಯದಿಂದ ಸರಬರಾಜಾದ ತಕ್ಷಣ ಪ್ರಥಮ ಡೋಸ್ ಪಡೆದು 6 ವಾರ ಮೀರಿದವರಿಗೆ ಆದ್ಯತೆ ಮೇರೆಗೆ ಲಸಿಕೆ ನೀಡುವ ಬಗ್ಗೆ ಆಶಾ ಕಾರ್ಯಕರ್ತೆಯರು, ಆರೋಗ್ಯ ಸಿಬ್ಬಂದಿಯವರು ಸದರಿಯವರಿಗೆ ಕರೆ ಮಾಡಿ ಲಸಿಕೆ ಪಡೆಯಲು ಕ್ರಮವಹಿಸುತ್ತಾರೆ.

ಮುಂದಿನ ದಿನಗಳಲ್ಲಿ ಲಸಿಕೆಯು ಸರಬರಾಜಾದ ತಕ್ಷಣ ಪ್ರಥಮ ಡೋಸ್ ಪಡೆದವರಿಗೆ ಆದ್ಯತೆ ಮೇರೆಗೆ 2ನೇ ಡೋಸ್ ನೀಡಲಾಗುವುದು. ಮತ್ತು ಜಿಲ್ಲೆಗೆ ಸಾಕಷ್ಟು ಲಸಿಕೆ ಬಂದ ತಕ್ಷಣ ಆಶಾಕಾರ್ಯಕರ್ತೆಯರು ಸಾರ್ವಜನಿಕರಿಗೆ ಮಾಹಿತಿ ನೀಡುವುದರ ಮೂಲಕ ಪ್ರಥಮ ಡೋಸ್ ಲಸಿಕೆ ಪಡೆಯಲು ವ್ಯವಸ್ಥೆ ಮಾಡಲಾಗುವುದು. ಅಲ್ಲಿಯವರೆಗೆ ಪ್ರಥಮ ಡೋಸ್ ಲಸಿಕೆ ಪಡೆಯಲು ಬಾಕಿ ಇರುವವರು ಆಸ್ಪತ್ರೆಗೆ ಹೋಗದೆ ಲಸಿಕೆಗಾಗಿ ಕಾಯಬೇಕು.

18 ವರ್ಷ ಮೇಲ್ಪಟ್ಟವರಿಗೆ ಕೋವಿಡ್ ವ್ಯಾಕ್ಸಿನೇಷನ್ ಕಾರ್ಯಕ್ರಮವನ್ನು ರಾಜ್ಯ ಸರ್ಕಾರ ಲಸಿಕೆ ಖರೀದಿಸಿ ಸರಬರಾಜು ಮಾಡಿದ ನಂತರ ಪ್ರಾರಂಭಿಸಲಾಗುವುದು. ಈ ಬಗ್ಗೆ ಮುಂದಿನ ದಿನಗಳಲ್ಲಿ ತಿಳಿಸಲಾಗುವುದು. ಅಲ್ಲಿಯವರೆಗೆ ಆರೋಗ್ಯ ಸೇತು ಆಪ್ ಮೂಲಕ ತಮ್ಮ ಮೊಬೈಲ್ ಸಂಖ್ಯೆಯನ್ನು ಬಳಸಿ ನೋಂದಣಿ ಮಾಡಬಹುದಾಗಿದೆ. ಲಸಿಕೆ ನೀಡಲು ಪ್ರಾರಂಭವಾದಾಗ ಲಸಿಕಾ ಕೇಂದ್ರವನ್ನು ಆನ್ಲೈನ್ ಆಯ್ಕೆ ಮಾಡಿಕೊಳ್ಳಬೇಕು.

Call us

Leave a Reply

Your email address will not be published. Required fields are marked *

fifteen − 1 =