ಉಡುಪಿ ಜಿಲ್ಲೆಯಲ್ಲಿ ಗುರುವಾರ 1526 ಕೋವಿಡ್ ಪಾಸಿಟಿವ್, 6 ಮಂದಿ ಸಾವು

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಉಡುಪಿ: ಜಿಲ್ಲೆಯಲ್ಲಿ ಗುರುವಾರ 1526 ಕೋವಿಡ್ ಪಾಸಿಟಿವ್ ಪ್ರಕರಣ ವರದಿಯಾಗಿದ್ದು, 6 ಮಂದಿ ಕೋವಿಡ್ ಸೊಂಕಿನಿಂದ ಮೃತಪಟ್ಟಿದ್ದಾರೆ. ಈ ಪೈಕಿ ಉಡುಪಿ, ಬ್ರಹ್ಮಾವರ, ಕಾಪು ತಾಲೂಕಿನ 682, ಕುಂದಾಪುರ, ಬೈಂದೂರು ತಾಲೂಕಿನ 595, ಕಾರ್ಕಳ, ಹೆಬ್ರಿ ತಾಲೂಕಿನ 242 ಮಂದಿಗೆ ಹಾಗೂ ಹೊರ ಜಿಲ್ಲೆಯಿಂದ ಬಂದ 7 ಮಂದಿಗೆ ಕೋವಿಡ್ ಪಾಸಿಟಿವ್ ಕಾಣಿಸಿಕೊಂಡಿದೆ. 6 ಮಂದಿ ಕೋವಿಡ್ ಸೊಂಕಿನಿಂದ ಮೃತಪಟ್ಟಿದ್ದಾರೆ.

Call us

Click Here

ಒಟ್ಟು 1526 ಪ್ರಕರಣಗಳಲ್ಲಿ 342 ಸಿಂಟಮಿಕ್ ಹಾಗೂ 1184 ಅಸಿಂಟಮಿಕ್ ಪ್ರಕರಣಗಳಾಗಿವೆ. ಈ ಪೈಕಿ 33 ಮಂದಿ ಕೋವಿಡ್ ಕೇರ್ ಸೆಂಟರ್, ಕೋವಿಡ್ ಆಸ್ಪತ್ರೆ ಹಾಗೂ ಕೋವಿಡ್ ಹೆಲ್ತ್ ಆಸ್ಪತ್ರೆಗೆ ದಾಖಲಾಗಿದ್ದರೆ 1493 ಮಂದಿ ಹೋಮ್ ಐಸೊಲೇಷನ್ ಆಗಿದ್ದಾರೆ. ಇಂದು ಉಡುಪಿಯ 87 ವರ್ಷದ ವೃದ್ದ, 69 ವರ್ಷದ ವೃದ್ದ, 72 ವರ್ಷದ ವೃದ್ದ, ಕಾರ್ಕಳದ 62 ವರ್ಷದ ವೃದ್ಧೆ, ಕುಂದಾಪುರದ 64 ವರ್ಷದ ವೃದ್ದ ಹಾಗೂ ಉಡುಪಿಯ 47 ವರ್ಷದ ಮಹಿಳೆ ಕೋವಿಡ್ನಿಂದ ಮೃತಪಟ್ಟಿದ್ದಾರೆ. ಜಿಲ್ಲೆಯಲ್ಲಿ ಇಂದು 384 ಮಂದಿಯನ್ನು ಡಿಸ್ಚಾರ್ಜ್ ಮಾಡಲಾಗಿದ್ದು, 5061 ಕೋವಿಡ್ ಸಕ್ರಿಯ ಪ್ರಕರಣಗಳಿವೆ. ಇಂದು ಒಟ್ಟು 3095 ಮಂದಿಗೆ ಕೋವಿಡ್ ಪರೀಕ್ಷೆ ನಡೆಸಲಾಗಿದೆ.

ಜಿಲ್ಲೆಯಲ್ಲಿ ಇಂದು 75 ಮಂದಿಗೆ ಮೊದಲ ಡೋಸ್, 265 ಮಂದಿಗೆ ಎರಡನೇ ಡೋಸ್ ವಾಕ್ಸಿನೇಷನ್ ಮಾಡಲಾಗಿದೆ. ಇಲ್ಲಿಯತನಕ ಒಟ್ಟು 1,94,770 ಮಂದಿಗೆ ಮೊದಲ ಡೋಸ್ ಹಾಗೂ 56,365 ಮಂದಿಗೆ ಎರಡನೇ ಡೋಸ್ ವಾಕ್ಸಿನ್ ನೀಡಲಾಗಿದೆ.

Click here

Click here

Click here

Click Here

Call us

Call us

Leave a Reply