ಶಂಕರನಾರಾಯಣ ಕಾಲೇಜಿನ ಔಷಧಿ ವನ ಉದ್ಘಾಟನೆ

Click Here

Call us

Call us

Call us

ಕುಂದಾಪುರ: ಮನುಷ್ಯ ಪರಿಸರ ಪ್ರೇಮಿಯಾಗಿ ಬದುಕಿದರೆ ಮಾತ್ರ ಭವಿಷ್ಯವಿದೆ. ಪರಿಸರವನ್ನು ಮನುಷ್ಯ ಅವಲಂಬಿಸಿದ್ದಾನೆಯೇ ಹೊರತು ಪರಿಸರ ಮನುಷ್ಯನನ್ನು ಅವಲಂಬಿಸಿಲ್ಲ. ನಮಗೆ ಜೀವನಾಧಾರವಾಗಿರುವ ಈ ಪರಿಸರವನ್ನು ಉಳಿಸಿ ಬೆಳೆಸುವುದು ನಮ್ಮ ನಿಮ್ಮೆಲ್ಲರ ಜವಾಬ್ಧಾರಿಯಾಗಿದೆ ಎಂದು ವಿಧಾನ ಪರಿಷತ್ ಸದಸ್ಯ ಕೆ. ಪ್ರತಾಪ್ ಚಂದ್ರ ಶೆಟ್ಟಿ ಯವರು ಹೇಳಿದರು.

Call us

Click Here

ಶಂಕರನಾರಾಯಣದ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕ, ಹುಯ್ಯಾರು ಪಟೇಲ್ ಚಾರಿಟೇಬಲ್ ಟ್ರಸ್ಟ್(ರಿ), ಉಡುಪಿ ಜಿಲ್ಲಾ ರೈತ ಸಂಘ(ರಿ) ಅರಣ್ಯ ಇಲಾಖೆ ಶಂಕರನಾರಾಯಣ, ವನ್ಯ ಜೀವಿ ಉಪ ವಿಭಾಗ ಸಿದ್ಧಾಪುರ ಹಾಗೂ ಗ್ರಾಮ ಪಂಚಾಯತ್ ಶಂಕರನಾರಾಯಣ ಇವುಗಳ ಜಂಟಿ ಆಶ್ರಯದಲ್ಲಿ ಜರುಗಿದ ಕಾರ್ಯಕ್ರಮದಲ್ಲಿ ಶಂಕರನಾರಾಯಣ ಸರಕಾರಿ ಪ್ರಥಮ ದರ್ಜೆ ಕಾಲೇಜು ಆವರಣದಲ್ಲಿ ಔಷಧಿ ವನವನ್ನು ಗಿಡ ನೆಡುವುದರ ಮೂಲಕ ಉದ್ಘಾಟಿಸಿ ಅವರು ಮಾತನಾಡಿದರು.

ಇಂದು ನಮಗೆ ಗಿಡಮೂಲಿಕೆಗಳ ಹೆಸರು ಮತ್ತು ಉಪಯೋಗ ತಿಳಿದಿಲ್ಲದಿರುವುದರಿಂದ ಅವುಗಳ ಬಗ್ಗೆ ವಿದ್ಯಾರ್ಥಿಗಳು ಜ್ಞಾನಪಡೆದು ಭವಿಷ್ಯತ್ತಿನಲ್ಲಿ ಅವುಗಳನ್ನು ಬಳಸಿಕೊಂಡು ಆರೋಗ್ಯಕರವಾದ ಜೀವನ ಹೊಂದಬಹುದಾಗಿದೆ ಎಂದು ಅವರು ಹೇಳಿದರು.

ನೀರ್ಕೋಡು ಚಂದ್ರಶೇಖರ ಶೆಟ್ಟಿ ಹಾಗೂ ಕಾಲೇಜು ಅಭಿವೃದ್ಧಿ ಸಮಿತಿ ಸದಸ್ಯರಾದ ಸಂಜೀವ ಶೆಟ್ಟಿ ಸಂಪಿಗೇಡಿ ವೃಕ್ಷ ಸಂಪತ್ತಿನ ಮಹತ್ವ ವಿವರಿಸಿದರು. ವೃಕ್ಷಗಳಲ್ಲಿ ದೈವತ್ವವನ್ನು ಕಂಡುಕೊಳ್ಳಬೇಕೆಂದು ಕರೆ ನೀಡಿದರು.

ಜಿಲ್ಲಾ ಪಂಚಾಯತ್ ಸದಸ್ಯೆ ಮಮತಾ ಆರ್. ಶೆಟ್ಟಿ, ಶಂಕರನಾರಾಯಣ ಗ್ರಾಮ ಪಂಚಾಯತ್ ಅಧ್ಯಕ್ಷ ಸದಾಶಿವ ಶೆಟ್ಟಿ, ಕುಂದಾಪುರ ವಲಯ ಅರಣ್ಯ ಉಪಸಂರಕ್ಷಣಾಧಿಕಾರಿಗಳಾದ ಪ್ರಕಾಶ್ ನೆಟಾಲ್ ಕರ್, ವನ್ಯಜೀವಿ ಉಪವಿಭಾಗ ಸಿದ್ಧಾಪುರದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿಗಳಾದ ಕುಮಾರಿ ನಿರ್ಮಲ, ಶಂಕರನಾರಾಯಣ ವಲಯ ಅರಣ್ಯಾಧಿಕಾರಿಗಳಾದ ಬ್ರಿಜೇಶ್ ವಿನಯ ಕುಮಾರ್, ತಾಲೂಕು ಪಂಚಾಯತ್ ಸದಸ್ಯರಾದ ಪ್ರದೀಪ್ ಕುಮಾರ್ ಶೆಟ್ಟಿ, ಅರಣ್ಯ ಇಲಾಖೆಯ ಸಿಬ್ಬಂದಿ ವರ್ಗ, ಕಾಲೇಜು ಅಭಿವೃದ್ಧಿ ಸಮಿತಿ ಸದಸ್ಯರು, ಗ್ರಾಮಸ್ಥರು, ಕಾಲೇಜಿನ ಬೋಧಕ/ಬೋಧಕೇತರ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಸಮಾರಂಭದಲ್ಲಿ ಭಾಗವಹಿಸಿದ್ದರು.

Click here

Click here

Click here

Click Here

Call us

Call us

ಕಾಲೇಜಿನ ಪ್ರಾಂಶುಪಾಲರಾದ ಬಾಲಕೃಷ್ಣ ಎಸ್. ಹೆಗ್ಡೆ ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದ್ದರು. ತೃತೀಯ ಬಿ.ಕಾಂ ವಿದ್ಯಾರ್ಥಿಗಳಾದ ಶಯನ ಮತ್ತು ಶೈಲ ಪ್ರಾರ್ಥಿಸಿದರು. ವಿದ್ಯಾರ್ಥಿ ಕ್ಷೇಮಾಧಿಕಾರಿ ಡಾ. ಉದಯ ಕುಮಾರ್ ಶೆಟ್ಟಿಯವರು ಪ್ರಾಸ್ತಾವಿಕವಾಗಿ ಮಾತನಾಡಿದರು. ವಾಣಿಜ್ಯಶಾಸ್ತ್ರ ವಿಭಾಗ ಮುಖ್ಯಸ್ಥರಾದ ಡಾ. ಶೇಖರ ಬಿ. ಯವರು ಸ್ವಾಗತಿಸಿದರು. ಕನ್ನಡ ಸಹ ಪ್ರಾಧ್ಯಾಪಕರಾದ ನಾಗರಾಜ ವೈದ್ಯ ಎಂ. ಕಾರ್ಯಕ್ರಮ ನಿರೂಪಿಸಿದರು. ರಾಷ್ಟ್ರೀಯ ಸೇವಾ ಯೋಜನಾ ಘಟಕ 2 ರ ಯೋಜನಾಧಿಕಾರಿ ಜ್ಯೋತಿ ವಂದಿಸಿದರು. ಈ ಸಂದಂರ್ಭದಲ್ಲಿ ಪರಿಸರ ಸಾಕ್ಷ್ಯಚಿತ್ರವನ್ನು ಪ್ರದರ್ಶಿಸಲಾಯಿತು.

Leave a Reply