ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಬೈಂದೂರು ಶಾಸಕರ ಭೇಟಿ

Click Here

Call us

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ತಾಲೂಕಿನ ವಂಡ್ಸೆ, ಸಿದ್ಧಾಪುರ ಹಾಗೂ ಕಂಡ್ಲೂರು ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಶನಿವಾರ ಬೈಂದೂರು ಶಾಸಕ ಬಿ. ಎಂ. ಸುಕುಮಾರ ಶೆಟ್ಟಿ ಅವರು ಭೇಟಿ ನೀಡಿ ಅಲ್ಲಿನ ಸ್ಥಿತಿಗತಿಗಳ ಬಗ್ಗೆ ಮಾಹಿತಿ ಪಡೆದುಕೊಂಡರು.

Click Here

Call us

Click Here

ಈ ಸಂದರ್ಭ ಹೋಂ ಐಸೊಲೇಶನ್ ಹಾಗೂ ಆಸ್ಪತ್ರೆಗೆ ದಾಖಲಾದ ಕೋವಿಡ್ ರೋಗಿಗಳ ಮಾಹಿತಿ ಪಡೆದುಕೊಂಡ ಬಳಿಕ ಮಾತನಾಡಿ, ವೈದ್ಯರು, ಆರೋಗ್ಯ ಸಿಬ್ಬಂದಿಗಳು, ಆಶಾ ಕಾರ್ಯಕರ್ತರು ಹಾಗೂ ಟಾಸ್ಕ್ ಪೋರ್ಸ್ ಸಮಿತಿ ಕೋವಿಡ್ ಅಪಾಯ ತಡೆಯಲು ಉತ್ತಮವಾಗಿ ಕೆಲಸ ಮಾಡುತ್ತಿದ್ದಾರೆ. ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿನ ಸಮಸ್ಯೆಗಳನ್ನು ಬಗೆಹರಿಸಲು ಉನ್ನತ ಅಧಿಕಾರಿಗಳ ಗಮನ ಸೆಳೆಯಲಾಗುವುದು ಎಂದರು.

ಈ ಸಂದರ್ಭ ತಾಲೂಕು ವೈದ್ಯಾಧಿಕಾರಿ ನಾಗಭೂಷಣ ಉಡುಪ, ವಂಡ್ಸೆ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ ಸನ್ಮಾನ್ ಶೆಟ್ಟಿ, ಸಿದ್ಧಾಪುರ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ ನಿಶಾ, ಕಂಡ್ಲೂರು ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಲತಾ ನಾಯಕ್ ಮೊದಲಾದವರು ಇದ್ದರು.

Leave a Reply