ಕುಂದಾಪ್ರ ಡಾಟ್ ಕಾಂ ಸುದ್ದಿ.
ಉಡುಪಿ: ಜಿಲ್ಲೆಯಲ್ಲಿ ಮಂಗಳವಾರ 1084 ಕೋವಿಡ್ ಪಾಸಿಟಿವ್ ಪ್ರಕರಣ ವರದಿಯಾಗಿದ್ದು, 3 ಮಂದಿ ಕೋವಿಡ್ ಸೊಂಕಿನಿಂದ ಮೃತಪಟ್ಟಿದ್ದಾರೆ. ಪಾಸಿಟಿವ್ ಪ್ರಕರಣಗಳಲ್ಲಿ ಉಡುಪಿ, ಬ್ರಹ್ಮಾವರ, ಕಾಪು ತಾಲೂಕಿನ 519, ಕುಂದಾಪುರ, ಬೈಂದೂರು ತಾಲೂಕಿನ 388, ಕಾರ್ಕಳ, ಹೆಬ್ರಿ ತಾಲೂಕಿನ 169 ಮಂದಿಗೆ ಹಾಗೂ ಹೊರ ಜಿಲ್ಲೆಯ 8 ಮಂದಿಗೆ ಕೋವಿಡ್ ಪಾಸಿಟಿವ್ ಕಾಣಿಸಿಕೊಂಡಿದೆ.
ಒಟ್ಟು 1084 ಪ್ರಕರಣಗಳಲ್ಲಿ 229 ಸಿಂಟಮಿಕ್ ಹಾಗೂ 855 ಅಸಿಂಟಮಿಕ್ ಪ್ರಕರಣಗಳಾಗಿವೆ. ಈ ಪೈಕಿ 18 ಮಂದಿ ಕೋವಿಡ್ ಕೇರ್ ಸೆಂಟರ್, ಕೋವಿಡ್ ಆಸ್ಪತ್ರೆ ಹಾಗೂ ಕೋವಿಡ್ ಹೆಲ್ತ್ ಆಸ್ಪತ್ರೆಗೆ ದಾಖಲಾಗಿದ್ದರೆ, 1066 ಮಂದಿಯನ್ನು ಹೋಮ್ ಐಸೊಲೇಷನ್ ಮಾಡಲಾಗಿದೆ.
ಇಂದು ಉಡುಪಿಯ 48 ವರ್ಷದ ಮಹಿಳೆ ಹಾಗೂ ಕುಂದಾಪುರದ 72 ವರ್ಷದ ವೃದ್ಧ ಹಾಗೂ 67 ವರ್ಷದ ವೃದ್ಧ ಕೋವಿಡ್ನಿಂದ ಮೃತಪಟ್ಟಿದ್ದಾರೆ. ಜಿಲ್ಲೆಯಲ್ಲಿ ಇಂದು 787 ಮಂದಿಯನ್ನು ಡಿಸ್ಚಾರ್ಜ್ ಮಾಡಲಾಗಿದ್ದು, 6876 ಕೋವಿಡ್ ಸಕ್ರಿಯ ಪ್ರಕರಣಗಳಿವೆ. ಇಂದು ಒಟ್ಟು 3094 ಮಂದಿಗೆ ಕೋವಿಡ್ ಪರೀಕ್ಷೆ ನಡೆಸಲಾಗಿದೆ.
ಜಿಲ್ಲೆಯಲ್ಲಿ ಇಂದು 522 ಮಂದಿಗೆ ಮೊದಲನೇ ಡೋಸ್, 1682 ಮಂದಿಗೆ ಎರಡನೇ ಡೋಸ್ ವಾಕ್ಸಿನೇಷನ್ ಮಾಡಲಾಗಿದೆ. ಇಲ್ಲಿಯ ತನಕ ಒಟ್ಟು 1,95,719 ಮಂದಿಗೆ ಮೊದಲ ಡೋಸ್ ಹಾಗೂ 60,457 ಮಂದಿಗೆ ಎರಡನೇ ಡೋಸ್ ವಾಕ್ಸಿನ್ ನೀಡಲಾಗಿದೆ.