ಉಡುಪಿ ಜಿಲ್ಲೆಯಲ್ಲಿ ಬುಧವಾರ 919 ಕೋವಿಡ್ ಪಾಸಿಟಿವ್, 6 ಸಾವು, 837 ಮಂದಿ ಗುಣಮುಖ

Click Here

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಉಡುಪಿ: ಜಿಲ್ಲೆಯಲ್ಲಿ ಮಂಗಳವಾರ 919 ಕೋವಿಡ್ ಪಾಸಿಟಿವ್ ಪ್ರಕರಣ ವರದಿಯಾಗಿದ್ದು, 6 ಮಂದಿ ಕೋವಿಡ್ ಸೊಂಕಿನಿಂದ ಮೃತಪಟ್ಟಿದ್ದಾರೆ. ಪಾಸಿಟಿವ್ ಪ್ರಕರಣಗಳಲ್ಲಿ ಉಡುಪಿ, ಬ್ರಹ್ಮಾವರ, ಕಾಪು ತಾಲೂಕಿನ 576, ಕುಂದಾಪುರ, ಬೈಂದೂರು ತಾಲೂಕಿನ 257, ಕಾರ್ಕಳ, ಹೆಬ್ರಿ ತಾಲೂಕಿನ 83 ಮಂದಿಗೆ ಹಾಗೂ ಹೊರ ಜಿಲ್ಲೆಯ 3 ಮಂದಿಗೆ ಕೋವಿಡ್ ಪಾಸಿಟಿವ್ ಕಾಣಿಸಿಕೊಂಡಿದೆ.

Call us

Click Here

ಒಟ್ಟು 919 ಪ್ರಕರಣಗಳಲ್ಲಿ 237 ಸಿಂಟಮಿಕ್ ಹಾಗೂ 682 ಅಸಿಂಟಮಿಕ್ ಪ್ರಕರಣಗಳಾಗಿವೆ. ಈ ಪೈಕಿ 13 ಮಂದಿ ಕೋವಿಡ್ ಕೇರ್ ಸೆಂಟರ್, ಕೋವಿಡ್ ಆಸ್ಪತ್ರೆ ಹಾಗೂ ಕೋವಿಡ್ ಹೆಲ್ತ್ ಆಸ್ಪತ್ರೆಗೆ ದಾಖಲಾಗಿದ್ದರೆ, 906 ಮಂದಿಯನ್ನು ಹೋಮ್ ಐಸೊಲೇಷನ್ ಮಾಡಲಾಗಿದೆ.

ಇಂದು ಉಡುಪಿಯ 80 ವರ್ಷದ ವೃದ್ಧ, 75 ವರ್ಷದ ವೃದ್ಧ 88 ವರ್ಷದ ವೃದ್ಧೆ, ಕುಂದಾಪುರದ 77, ವರ್ಷದ ವೃದ್ಧ 68 ವರ್ಷದ ವೃದ್ಧ ಹಾಗೂ 58 ವರ್ಷದ ಪುರುಷ ಕೋವಿಡ್ನಿಂದ ಮೃತಪಟ್ಟಿದ್ದಾರೆ. ಜಿಲ್ಲೆಯಲ್ಲಿ ಇಂದು 837 ಮಂದಿಯನ್ನು ಡಿಸ್ಚಾರ್ಜ್ ಮಾಡಲಾಗಿದ್ದು, 6952 ಕೋವಿಡ್ ಸಕ್ರಿಯ ಪ್ರಕರಣಗಳಿವೆ. ಇಂದು ಒಟ್ಟು 2957 ಮಂದಿಗೆ ಕೋವಿಡ್ ಪರೀಕ್ಷೆ ನಡೆಸಲಾಗಿದೆ.

ಜಿಲ್ಲೆಯಲ್ಲಿ ಇಂದು 752 ಮಂದಿಗೆ ಮೊದಲನೇ ಡೋಸ್, 308 ಮಂದಿಗೆ ಎರಡನೇ ಡೋಸ್ ವಾಕ್ಸಿನೇಷನ್ ಮಾಡಲಾಗಿದೆ. ಇಲ್ಲಿಯ ತನಕ ಒಟ್ಟು 1,96,471 ಮಂದಿಗೆ ಮೊದಲ ಡೋಸ್ ಹಾಗೂ 60,765 ಮಂದಿಗೆ ಎರಡನೇ ಡೋಸ್ ವಾಕ್ಸಿನ್ ನೀಡಲಾಗಿದೆ.

Click here

Click here

Click here

Click Here

Call us

Call us

Leave a Reply