ಕುಂದಾಪ್ರ ಡಾಟ್ ಕಾಂ ಸುದ್ದಿ.
ಗಂಗೊಳ್ಳಿ: ವಿಶ್ವ ಕೊಂಕಣಿ ಕೇಂದ್ರ ಮಂಗಳೂರು ಹಾಗೂ ಲಿಶಿಯಸ್ ಸಂಸ್ಥೆಯ ಸಹಯೋಗದಲ್ಲಿ ಅಖಿಲ ಭಾರತ ಕೊಂಕಣಿ ಖಾರ್ವಿ ಮಹಾಜನ ಸಭಾದ ಮೂಲಕ ಕೊರೋನ ಸಂಕಷ್ಟಗಳಿಗೆ ಸ್ಪಂದಿಸುವ ಆಶಯದೊಂದಿಗೆ ಕರ್ನಾಟಕ ರಾಜ್ಯದ ಕೊಂಕಣಿ ಖಾರ್ವಿ ಸಮಾಜದ ಅರ್ಹ ಬಡ ಕುಟುಂಬಗಳಿಗೆ ಕೊಡಮಾಡಿದ ಅಕ್ಕಿಯ ಮೂಟೆಗಳನ್ನು ಗಂಗೊಳ್ಳಿ ವಲಯದಲ್ಲಿ ವಿತರಿಸಲಾಯಿತು.
ಈ ಸಂದರ್ಭದಲ್ಲಿ ಖಾರ್ವಿ ಸಮಾಜದ ಹಿರಿಯ ಮುಖಂಡರಾದ ಜಿ.ಪುರುಷೋತ್ತಮ ಆರ್ಕಾಟಿ, ಗಂಗೊಳ್ಳಿ ಘಟಕದ ಅಧ್ಯಕ್ಷರಾದ ಸುರೇಂದ್ರ ಖಾರ್ವಿ, ಕಾರ್ಯದರ್ಶಿ ಜಿ. ಎನ್. ಸತೀಶ್ ಖಾರ್ವಿ ಉಪಸ್ಥಿತರಿದ್ದರು. ಗಂಗೊಳ್ಳಿ ಟೌನ್ ಸೌಹಾರ್ದ ಕೋ- ಆಪರೇಟಿವ್ ಲಿಮಿಟೆಡ್ನ ಉಪಾಧ್ಯಕ್ಷರಾದ ಎನ್. ವಿಶ್ವನಾಥ್ ಆಚಾರ್ಯ ಮತ್ತು ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜಿನ ಉಪನ್ಯಾಸಕರಾದ ನರೇಂದ್ರ ಎಸ್ ಗಂಗೊಳ್ಳಿ ಫಲಾನುಭವಿಗಳಿಗೆ ದಾನ್ಯ ತುಂಬಿದ ಚೀಲಗಳನ್ನು ವಿತರಿಸಿದರು.