ಅಕ್ರಮ ಗೋ ಸಾಗಾಟ ಪತ್ತೆಗೆ ವಿಶೇಷ ಪೊಲೀಸ್ ತಂಡ ರಚನೆ

Call us

Call us

Call us

ಕುಂದಾಪುರ: ಕಳೆದ ಮೂರು ವಾರಗಳಿಂದೀಚೆಗೆ ಉಡುಪಿ ಜಿಲ್ಲೆಯಲ್ಲಿ ಅಕ್ರಮ ಗೋ ಸಾಗಾಣಿಕೆ, ಗೋ ಕಳ್ಳತನ ಪ್ರಕರಣಗಳು ಹೆಚ್ಚಾಗಿ ಸಂಭವಿಸುತ್ತಿದ್ದೆ. ಇದನ್ನು ತಡೆಗಟ್ಟುವ ನಿಟ್ಟಿನಲ್ಲಿ ಜಿಲ್ಲೆಯಲ್ಲಿ ವಿಶೇಷ ಪೊಲೀಸ್ ತಂಡಗಳನ್ನು ರಚಿಸಿ ರಾತ್ರಿ ವೇಳೆ ರೌಂಡ್ಸ್‌ ನಡೆಸುವಂತೆ ಸೂಚಿಸಲಾಗಿದೆ. ಅಲ್ಲದೇ ಅಗಸ್ಟ್ 28ರ ಸಂಜೆ 4ಗಂಟೆಗೆ ಎಲ್ಲಾ ಪೊಲೀಸ್ ಠಾಣೆಗಳಲ್ಲಿ ಈ ಹಿಂದೆ ಅಕ್ರಮ ಗೋ ಸಾಗಾಣಿಕೆಗಳಲ್ಲಿ ಭಾಗಿಯಾಗಿದ್ದವರ ಪೆರೇಡನ್ನು ನಡೆಸುತ್ತಿದ್ದು, ಪ್ರಸ್ತುತ ಅವರ ಕಾರ್ಯಚಟುವಟಿಕೆಗಳ ಬಗ್ಗೆ ಪರಿಶೀಲನೆ ನಡೆಸಲಾಗುತ್ತದೆ.

Call us

Click Here

ಅಕ್ರಮ ಗೋ ಸಾಗಾಣಿಕೆ, ಗೋ ಕಳ್ಳತನ ಪ್ರಕರಣಗಳ ಬಗ್ಗೆ ಸಾರ್ವಜನಿಕರಿಗೆ ಏನಾದರೂ ಮಾಹಿತಿ ಇದ್ದಲ್ಲಿ, ಯಾವುದೇ ಸಮಯದಲ್ಲಾದರೂ ಜಿಲ್ಲಾ ನಿಯಂತ್ರಣ ಕೊಠಡಿಯ ದೂರವಾಣಿ  100 ಅಥವಾ 0820-2526444 ಗೆ ಕರೆ ಮಾಡಿ ತಿಳಿಸಿದರೇ, ಮಾಹಿತಿಗೆ ತಕ್ಷಣವೇ ಸ್ಪಂದಿಸಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಪೊಲೀಸ್ ಅಧೀಕ್ಷಕರ ಕಛೇರಿ ಪ್ರಕಟಣೆ ತಿಳಿಸಿದೆ.

Leave a Reply