ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಪತ್ರಕರ್ತರು ಮತ್ತು ಟಿವಿ ಮಾಧ್ಯಮದವರನ್ನು ರಾಜ್ಯ ಸರಕಾರ ಕೊರೋನಾ ಫ್ರಂಟ್ ಲೈನ್ ವಾರಿಯರ್ಸ್ ಎಂಬುದಾಗಿ ಘೋಷಿಸಿದ್ದು ಈ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಆಶ್ರಯದಲ್ಲಿ ಕುಂದಾಪುರ ತಾಲೂಕು ಸಂಘದ ಸಹಯೋಗದೊಂದಿಗೆ ಉಡುಪಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ವತಿಯಿಂದ ಎರಡನೇ ಹಂತದಲ್ಲಿ ಜಿಲ್ಲೆಯ ಪತ್ರಕರ್ತರು ಮತ್ತು ಟಿವಿ ಮಾಧ್ಯಮದವರಿಗೆ ಕೋವಿಶೀಲ್ಡ್ ಮೊದಲ ಡೋಸನ್ನು ನೀಡುವ ಕಾರ್ಯಕ್ರಮ ಕುಂದಾಪುರದ ಅಂಬೇಡ್ಕರ್ ಭವನದಲ್ಲಿ ನಡೆಯಿತು.
ಈ ಸಂದರ್ಭದಲ್ಲಿ ಕುಂದಾಪುರ ತಾಲೂಕು ಆರೋಗ್ಯಾಧಿಕಾರಿ ಡಾ. ನಾಗಭೂಷಣ ಉಡುಪ ಮಾತನಾಡಿ, ಕೋವಿಡ್ ನಿಯಂತ್ರಣದ ವಿಚಾರದಲ್ಲಿ ಜಾಗೃತಿ ಮೂಡಿಸುವಲ್ಲಿ ಪತ್ರಕರ್ತರ ಪಾತ್ರವೂ ಮಹತ್ತರವಾಗಿದೆ. ಸರ್ಕಾರ ಪತ್ರಕರ್ತರನ್ನು ದೃಶ್ಯ ಮಾಧ್ಯಮದ ಪ್ರತಿನಿಧಿಗಳನ್ನು ಕೊರೋನಾ ಫ್ರಂಟ್ ಲೈನ್ ವಾರಿಯರ್ಸ್ ಎಂದು ಘೋಷಿಸಿದೆ. ಪತ್ರಕರ್ತರ ಆರೋಗ್ಯದ ದೃಷ್ಟಿಯಿಂದ ಲಸಿಕೆಯನ್ನು ನೀಡಲಾಗುತ್ತಿದೆ ಎಂದರು.
ಕುಂದಾಪುರ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಕಾರ್ಯದರ್ಶಿ ನಾಗರಾಜ ರಾಯಪ್ಪನಮಠ, ಸಂಘದ ಪದಾಧಿಕಾರಿಗಳು, ಆರೋಗ್ಯ ಇಲಾಖೆಯ ಸಿಬ್ಬಂದಿಗಳು ಉಪಸ್ಥಿತರಿದ್ದರು.