ಉಡುಪಿ ಜಿಲ್ಲೆಯಲ್ಲಿ ಮಂಗಳವಾರ 640 ಕೋವಿಡ್ ಪಾಸಿಟಿವ್, 4 ಸಾವು, 695 ಮಂದಿ ಗುಣಮುಖ

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಉಡುಪಿ: ಜಿಲ್ಲೆಯಲ್ಲಿ ಮಂಗಳವಾರ 640 ಕೋವಿಡ್ ಪಾಸಿಟಿವ್ ಪ್ರಕರಣ ವರದಿಯಾಗಿದ್ದು, 4 ಮಂದಿ ಕೋವಿಡ್ ಸೊಂಕಿನಿಂದ ಮೃತಪಟ್ಟಿದ್ದಾರೆ. ಪಾಸಿಟಿವ್ ಪ್ರಕರಣಗಳಲ್ಲಿ ಉಡುಪಿ, ಬ್ರಹ್ಮಾವರ, ಕಾಪು ತಾಲೂಕಿನ 368, ಕುಂದಾಪುರ, ಬೈಂದೂರು ತಾಲೂಕಿನ 155, ಕಾರ್ಕಳ, ಹೆಬ್ರಿ ತಾಲೂಕಿನ 115 ಮಂದಿಗೆ ಹಾಗೂ ಹೊರ ಜಿಲ್ಲೆಯ 2 ಮಂದಿಗೆ ಕೋವಿಡ್ ಪಾಸಿಟಿವ್ ಕಾಣಿಸಿಕೊಂಡಿದೆ.

Call us

Click Here

ಒಟ್ಟು 640 ಪ್ರಕರಣಗಳಲ್ಲಿ 18 ಮಂದಿ ಕೋವಿಡ್ ಕೇರ್ ಸೆಂಟರ್, ಕೋವಿಡ್ ಆಸ್ಪತ್ರೆ ಹಾಗೂ ಕೋವಿಡ್ ಹೆಲ್ತ್ ಆಸ್ಪತ್ರೆಗೆ ದಾಖಲಾಗಿದ್ದರೆ, 622 ಮಂದಿಯನ್ನು ಹೋಮ್ ಐಸೊಲೇಷನ್ ಮಾಡಲಾಗಿದೆ.

ಇಂದು ಉಡುಪಿಯ 33 ವರ್ಷದ ಪುರುಷ, 67 ವರ್ಷದ ವೃದ್ಧೆ, 65 ವರ್ಷದ ವೃದ್ಧ, ಕಾರ್ಕಳದ 54 ವರ್ಷದ ಪುರಷ ಕೋವಿಡ್ನಿಂದ ಮೃತಪಟ್ಟಿದ್ದಾರೆ. ಜಿಲ್ಲೆಯಲ್ಲಿ ಇಂದು 695 ಮಂದಿಯನ್ನು ಡಿಸ್ಚಾರ್ಜ್ ಮಾಡಲಾಗಿದ್ದು, 5792 ಕೋವಿಡ್ ಸಕ್ರಿಯ ಪ್ರಕರಣಗಳಿವೆ. ಇಂದು ಒಟ್ಟು 2864 ಮಂದಿಗೆ ಕೋವಿಡ್ ಪರೀಕ್ಷೆ ನಡೆಸಲಾಗಿದೆ.

ಜಿಲ್ಲೆಯಲ್ಲಿ ಇಂದು 6648 ಮಂದಿಗೆ ಮೊದಲನೇ ಡೋಸ್, 207 ಮಂದಿಗೆ ಎರಡನೇ ಡೋಸ್ ವಾಕ್ಸಿನೇಷನ್ ಮಾಡಲಾಗಿದೆ. ಇಲ್ಲಿಯ ತನಕ ಒಟ್ಟು 2,15,094 ಮಂದಿಗೆ ಮೊದಲ ಡೋಸ್ ಹಾಗೂ 74,474 ಮಂದಿಗೆ ಎರಡನೇ ಡೋಸ್ ವಾಕ್ಸಿನ್ ನೀಡಲಾಗಿದೆ.

ಸೂಚನೆ: ಕುಂದಾಪುರ & ಬೈಂದೂರು ತಾಲೂಕನ್ನು ಸೇರಿಸಿ ಕುಂದಾಪುರ ಎಂದೂ, ಉಡುಪಿ, ಬ್ರಹ್ಮಾವರ, ಕಾಪು ಸೇರಿಸಿ ಉಡುಪಿ ಎಂದೂ, ಕಾರ್ಕಳ & ಹೆಬ್ರಿ ತಾಲೂಕನ್ನು ಸೇರಿಸಿ ಕಾರ್ಕಳ ಎಂದು ಆರೋಗ್ಯ ಇಲಾಖೆ ಪರಿಗಣಿಸಿದೆ.

Click here

Click here

Click here

Click Here

Call us

Call us

Leave a Reply