ಗಂಗೊಳ್ಳಿ: ಇತ್ತೀಚಿಗೆ ಹಾಂಗ್‌ಕಾಂಗ್‌ನಲ್ಲಿ ನಡೆದ ಅಂತರಾಷ್ಟ್ರೀಯ ಮಟ್ಟದ ಏಷ್ಯನ್ ಪವರ್ ಲಿಫ್ಟಿಂಗ್ ಸ್ಪರ್ಧೆಯಲ್ಲಿ ಮೂರು ಬೆಳ್ಳಿಪದಕ ವಿಜೇತ ಅಂತರಾಷ್ಟ್ರೀಯ ಮಟ್ಟದ ಕ್ರೀಡಾಪಟು ಗಂಗೊಳ್ಳಿ ಕೆನರಾ ಬ್ಯಾಂಕ್‌ನ ಅಧಿಕಾರಿ ಅಶೋಕ ಜಿ.ವಿ. ಅವರನ್ನು ಗಂಗೊಳ್ಳಿಯಲ್ಲಿ ಇತ್ತೀಚಿಗೆ ಸನ್ಮಾನಿಸಿ ಗೌರವಿಸಲಾಯಿತು.
ಗಂಗೊಳ್ಳಿ ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜಿನ ರೋಟರಿ ಸಭಾಂಗಣದಲ್ಲಿ ಗಂಗೊಳ್ಳಿಯ ಶ್ರೀ ಚೌಡೇಶ್ವರಿ ಯುತ್ ಕ್ಲಬ್ ಆಶ್ರಯದಲ್ಲಿ ನಡೆದ ಸರಳ ಸಮಾರಂಭದಲ್ಲಿ ಇವರನ್ನು ಸನ್ಮಾನಿಸಲಾಯಿತು.
ಉದ್ಯಮಿ ಸದಾನಂದ ಯು.ಕೆ. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಪತ್ರಕರ್ತ ಬಿ.ರಾಘವೇಂದ್ರ ಪೈ, ಕಾಲೇಜಿನ ಪ್ರಾಂಶುಪಾಲ ಆರ್.ಎನ್. ರೇವಣ್‌ಕರ್, ಕುಂದಾಪುರ ರೋಟರಿ ಕ್ಲಬ್ ಮಿಡ್‌ಟೌನ್ ಅಧ್ಯಕ್ಷ ಮಹೇಶ ಬೆಟ್ಟಿನ್, ಕುಂದಾಪುರದ ನ್ಯಾಯವಾದಿ ರಾಘವೇಂದ್ರ ಚರಣ್ ನಾವಡ, ಉಪನ್ಯಾಸಕ ಸುಜಯೀಂದ್ರ ಹಂದೆ, ಸಂಘದ ಗೌರವಾಧ್ಯಕ್ಷ ನಾಗರಾಜ ಖಾರ್ವಿ ಹಾಗೂ ಮಹಮ್ಮದ್ ಹುಸೇನ್ ಮೊದಲಾದವರು ಉಪಸ್ಥಿತರಿದ್ದರು.