ಕುಂದಾಪ್ರ ಡಾಟ್ ಕಾಂ ಸುದ್ದಿ.
ಕೊಲ್ಲೂರು: ಇಲ್ಲಿನ ವಂಡ್ಸೆ ಸಮೀಪದ ರಸ್ತೆಯಲ್ಲಿ ನಡೆದ ಟಿಪ್ಪರ್ ಹಾಗೂ ಸ್ಕೂಟರ್ ನಡುವಿನ ಅಪಘಾತದಲ್ಲಿ ದ್ವಿಚಕ್ರ ವಾಹನ ಸವಾರ ಗಂಭೀರ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟ ಘಟನೆ ಶುಕ್ರವಾರ ನಡೆದಿದೆ. ಸ್ಕೂಟರ್ ಸವಾರ ರಾಜು ಮೊಗವೀರ ಮೃತ ದುರ್ದೈವಿ.
ವಂಡ್ಸೆ ಕಡೆಯಿಂದ ಬೆಳ್ಳಾಲ ಕಡೆಗೆ ತೆರಳುತ್ತಿದ್ದ ಟಿಪ್ಪರ್, ವಂಡ್ಸೆ ಕಡೆಗೆ ತೆರಳುತ್ತಿದ್ದ ರಾಜು ಮೊಗವೀರ ಎಂಬುವವರ ಸ್ಕೂಟರಿಗೆ ಎದುರಿನಿಂದ ಡಿಕ್ಕಿ ಹೊಡೆದ ಪರಿಣಾಮ ಸ್ಕೂಟರ್ ಸವಾರ ರಸ್ತೆಗೆ ಬಿದ್ದಿದ್ದು, ಟಿಪ್ಪರ್ ಚಕ್ರ ತಲೆಯ ಮೇಲೆ ಹರಿದು ತೀವ್ರ ಸ್ವರೂಪದ ಗಾಯಗೊಂಡು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಘಟನಾ ಸ್ಥಳಕ್ಕೆ ಕೊಲ್ಲೂರು ಪಿಎಸ್ಐ ನಾಸೀರ್ ಹುಸೇನ್, ಸಿಬ್ಬಂದಿಗಳು ಭೇಟಿ ನೀಡಿದ್ದು ಪ್ರಕರಣ ದಾಖಲಿಸಿಕೊಂಡಿದ್ದಾರೆ.