ಉಡುಪಿ ಜಿಲ್ಲೆಯಲ್ಲಿ ಗುರುವಾರ 580 ಕೋವಿಡ್ ಪಾಸಿಟಿವ್, 923 ಮಂದಿ ಗುಣಮುಖ

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಉಡುಪಿ: ಜಿಲ್ಲೆಯಲ್ಲಿ ಗುರುವಾರ 580 ಕೋವಿಡ್ ಪಾಸಿಟಿವ್ ಪ್ರಕರಣ ವರದಿಯಾಗಿದೆ. ಪಾಸಿಟಿವ್ ಪ್ರಕರಣಗಳಲ್ಲಿ ಉಡುಪಿ, ಬ್ರಹ್ಮಾವರ, ಕಾಪು ತಾಲೂಕಿನ 324, ಕುಂದಾಪುರ, ಬೈಂದೂರು ತಾಲೂಕಿನ 129, ಕಾರ್ಕಳ, ಹೆಬ್ರಿ ತಾಲೂಕಿನ 129 ಮಂದಿಗೆ ಹಾಗೂ ಹೊರ ಜಿಲ್ಲೆಯ 4 ಮಂದಿಗೆ ಕೋವಿಡ್ ಪಾಸಿಟಿವ್ ಕಾಣಿಸಿಕೊಂಡಿದೆ.

Call us

Click Here

ಒಟ್ಟು 580 ಪ್ರಕರಣಗಳಲ್ಲಿ 14 ಮಂದಿ ಕೋವಿಡ್ ಕೇರ್ ಸೆಂಟರ್, ಕೋವಿಡ್ ಆಸ್ಪತ್ರೆ ಹಾಗೂ ಕೋವಿಡ್ ಹೆಲ್ತ್ ಆಸ್ಪತ್ರೆಗೆ ದಾಖಲಾಗಿದ್ದರೆ, 566 ಮಂದಿಯನ್ನು ಹೋಮ್ ಐಸೊಲೇಷನ್ ಮಾಡಲಾಗಿದೆ. ಜಿಲ್ಲೆಯಲ್ಲಿ ಇಂದು 923 ಮಂದಿಯನ್ನು ಡಿಸ್ಚಾರ್ಜ್ ಮಾಡಲಾಗಿದ್ದು, 4533 ಕೋವಿಡ್ ಸಕ್ರಿಯ ಪ್ರಕರಣಗಳಿವೆ. ಇಂದು ಒಟ್ಟು 3161 ಮಂದಿಗೆ ಕೋವಿಡ್ ಪರೀಕ್ಷೆ ನಡೆಸಲಾಗಿದೆ.

ಜಿಲ್ಲೆಯಲ್ಲಿ ಇಂದು 6919 ಮಂದಿಗೆ ಮೊದಲನೇ ಡೋಸ್, 3302 ಮಂದಿಗೆ ಎರಡನೇ ಡೋಸ್ ವಾಕ್ಸಿನೇಷನ್ ಮಾಡಲಾಗಿದೆ. ಇಲ್ಲಿಯ ತನಕ ಒಟ್ಟು 2,58,351 ಮಂದಿಗೆ ಮೊದಲ ಡೋಸ್ ಹಾಗೂ 84,485 ಮಂದಿಗೆ ಎರಡನೇ ಡೋಸ್ ವಾಕ್ಸಿನ್ ನೀಡಲಾಗಿದೆ.

ಸೂಚನೆ: ಕುಂದಾಪುರ & ಬೈಂದೂರು ತಾಲೂಕನ್ನು ಸೇರಿಸಿ ಕುಂದಾಪುರ ಎಂದೂ, ಉಡುಪಿ, ಬ್ರಹ್ಮಾವರ, ಕಾಪು ಸೇರಿಸಿ ಉಡುಪಿ ಎಂದೂ, ಕಾರ್ಕಳ & ಹೆಬ್ರಿ ತಾಲೂಕನ್ನು ಸೇರಿಸಿ ಕಾರ್ಕಳ ಎಂದು ಆರೋಗ್ಯ ಇಲಾಖೆ ಪರಿಗಣಿಸಿದೆ.

Click here

Click here

Click here

Click Here

Call us

Call us

Leave a Reply