Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಕೋವಿಡ್ ಲಸಿಕೆ ನೀಡಿಕೆಯಲ್ಲಿ ಗೊಂದಲಕ್ಕೆ ಆಸ್ಪದ ನೀಡಬೇಡಿ: ಡಾ. ಎಂ.ಟಿ. ರೇಜು
    ಉಡುಪಿ ಜಿಲ್ಲೆ

    ಕೋವಿಡ್ ಲಸಿಕೆ ನೀಡಿಕೆಯಲ್ಲಿ ಗೊಂದಲಕ್ಕೆ ಆಸ್ಪದ ನೀಡಬೇಡಿ: ಡಾ. ಎಂ.ಟಿ. ರೇಜು

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಉಡುಪಿ: ಜಿಲ್ಲೆಯಲ್ಲಿ ಕೋವಿಡ್ ಲಸಿಕೆ ನೀಡುವ ಸಂದರ್ಭದಲ್ಲಿ ಸಾರ್ವಜನಿಕರಲ್ಲಿ ಯಾವುದೇ ಗೊಂದಲಗಳು ಉಂಟಾಗದಂತೆ ಹಾಗೂ ಸಮಸ್ಯೆಗಳಿಗೆ ಆಸ್ಪದ ನೀಡದಂತೆ , ಅರ್ಹ ಸಾರ್ವಜನಿಕರಿಗೆ ಸಮರ್ಪಕವಾಗಿ ಲಸಿಕೆಯನ್ನು ವಿತರಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ. ಎಂ.ಟಿ.ರೇಜು ಸೂಚಿಸಿದ್ದಾರೆ.

    Click Here

    Call us

    Click Here

    ಅವರು ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲೆಯ ಕೋವಿಡ್ ಸ್ಥಿತಿಗತಿ ಕುರಿತ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

    ಕೋವಿಡ್ ಲಸಿಕೆ ನೀಡುವ ಸಂದರ್ಭದಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರ ಗುರುತಿಸಿರುವ ಮುಂಚೂಣಿ ಕಾರ್ಯಕರ್ತರು, ಆದ್ಯತಾ ವಲಯದಲ್ಲಿರುವವರು ಮತ್ತು ದುರ್ಬಲ ವರ್ಗದವರಿಗೆ ಸಮಪರ್ಕವಾಗಿ ಲಸಿಕೆ ನೀಡುವಂತೆ ತಿಳಿಸಿದ ಡಾ.ರೇಜು, ಲಸಿಕೆ ನೀಡುವ ಕುರಿತಂತೆ ಸಾರ್ವಜನಿಕರಿಗೆ ಸಾಕಷ್ಟು ಮುಂಚಿತವಾಗಿ ಮಾಹಿತಿ ನೀಡಿ, ಲಸಿಕಾ ಸ್ಥಳದಲ್ಲಿ ಅನಗತ್ಯವಾಗಿ ಜನದಟ್ಟಣಿ ಉಂಟಾಗದಂತೆ ಹಾಗೂ ಯಾವುದೇ ಗೊಂದಲಗಳಿಗೆ ಆಸ್ಪದ ನೀಡದಂತೆ ಅರ್ಹರಿಗೆ ಲಸಿಕೆ ನೀಡಿ, ಲಸಿಕಾ ಉಸ್ತುವಾರಿಗೆ ನಿಯೋಜಿಸಿರುವ ಅಧಿಕಾರಿಗಳು ಲಸಿಕೆ ನೀಡುವ ಸ್ಥಳದಲ್ಲಿ ಸಮಸ್ಯೆಗಳು ಕಂಡುಬರದAತೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ಸೂಚಿಸಿದರು.

    ಜಿಲ್ಲೆಯಲ್ಲಿ ಕೋವಿಡ್ ನಿಯಂತ್ರಣಕ್ಕೆ ಸಂಬಂದಿಸಿದಂತೆ , ಕೋವಿಡ್ ಸೋಂಕಿತರ ಮನೆಗಳನ್ನು ಸೀಲ್ ಡೌನ್ ಮಾಡಿದ ನಂತರ ಅವರಿಗೆ ದೈನಂದಿನ ಜೀವನಕ್ಕೆ ತೊಂದರೆಯಾಗದಂತೆ ಪರಿಶೀಲಿಸಿ, ಹೆಚ್ಚು ಪ್ರಕರಣಗಳಿರುವ ಕಡೆಗಳಲ್ಲಿ ಮೈಕ್ರೋ ಕಂಟೈನ್ಮೆAಟ್ ಝೋನ್ ಗಳನ್ನು ರಚಿಸಿ , ಸೋಂಕಿತರ ಯಾವುದೇ ಸಂರ್ಪಕವಿಲ್ಲದೇ ಪಾಸಿಟಿವ್ ಬಂದಿರುವವರನ್ನು ಗುರುತಿಸಿ, ಅವರಿಗೆ ಸೋಂಕು ಎಲ್ಲಿಂದ ಹರಡಿದೆ ಎಂಬ ಬಗ್ಗೆ ಪರಿಶೀಲಿಸಿ ಎಂದು ತಿಳಿಸಿದರು.
    ಗ್ರಾಮೀಣ ಪ್ರದೇಶದಲ್ಲಿ ಪಾಸಿಟಿವ್ ಇರುವವವರ ಮನೆಗಳನ್ನು ಸೀಲ್ ಮಾಡಿದ ನಂತರ ಮತ್ತು 50 ಕ್ಕೂ ಹೆಚ್ಚು ಪಾಸಿಟಿವ್ ಪ್ರಕರಣಗಳಿದ್ದ ಪಂಚಾಯತ್ ನ್ನು ಸಂಪೂರ್ಣ ಲಾಕ್ಡೌನ್ ಮಾಡಿದ ನಂತರ ಗ್ರಾಮೀಣ ಪ್ರದೇಶದಲ್ಲಿ ಸೋಂಕು ಹರಡುವುದು ಕಡಿಮೆ ಆಗಿದ್ದು, ಪ್ರಸ್ತುತ ಜಿಲ್ಲೆಯಲ್ಲಿ ಪಾಸಿಟಿವಿಟಿ ಪ್ರಮಾಣ ಸರಾಸರಿ 9 ಇದೆ ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್ ಹೇಳಿದರು.

    ಜಿಲ್ಲೆಯ ಎಲ್ಲಾ ತಾಲೂಕುಗಳಲ್ಲಿನ ಸಕ್ರಿಯ ಕೋವಿಡ್ ಪ್ರಕರಣಗಳ ಕುರಿತಂತೆ ವಿವರವಾಗಿ ಪರಿಶೀಲಿಸಿದ ಡಾ. ಎಂ.ಟಿ.ರೇಜು, ಒಂದು ವಾರದೊಳಗೆ ಜಿಲ್ಲೆಯ ಪಾಸಿಟಿವಿಟ್ ಪ್ರಮಾಣವನ್ನು 5 ಕ್ಕಿಂತ ಕೆಳಗೆ ಇಳಿಸುವಲ್ಲಿ ಎಲ್ಲಾ ಅಧಿಕಾರಿಗಳು ಶ್ರಮಿಸಬೇಕು ಹಾಗೂ ಮಳೆಗಾಲದಲ್ಲಿ ಸಾಂಕ್ರಾಮಿಕ ರೋಗಗಳು ಹರಡದಂತೆ ಅಗತ್ಯ ಮುನ್ನೆಚ್ಚರಿಕೆ ವಹಿಸಿ, ನಗರ ಮತ್ತು ಗ್ರಾಮೀಣ ಪ್ರದೇಶದಲ್ಲಿ ಹೆಚ್ಚು ಅರಿವು ಮೂಡಿಸಿ ಎಂದು ಸೂಚಿಸಿದರು. ಜಿಲ್ಲೆಯಲ್ಲಿನ ಪ್ರಸ್ತುತ ಕೋವಿಡ್ ಸ್ಥಿತಿಗತಿ ಕುರಿತು ಜಿಲ್ಲಾ ಕೋವಿಡ್ ನೋಡೆಲ್ ಆಧಿಕಾರಿ ಡಾ. ಪ್ರಶಾಂತ ಭಟ್ ಮಾಹಿತಿ ನೀಡಿದರು.

    Click here

    Click here

    Click here

    Click Here

    Call us

    Call us

    ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ನವೀನ್ ಭಟ್, ಎಸ್ಪಿ ವಿಷ್ಣುವರ್ಧನ್, ಅಪರ ಜಿಲ್ಲಾಧಿಕಾರಿ ಬಿ.ಸದಾಶಿವ ಪ್ರಭು, ಕುಂದಾಪುರ ಉಪವಿಭಾಗಾಧಿಕಾರಿ ರಾಜು, ಡಿಹೆಚ್ಓ ಡಾ. ನಾಗಭೂಷಣ ಉಡುಪ, ಜಿಲ್ಲಾ ಸರ್ಜನ್ ಡಾ.ಮಧುಸೂದನ್ ನಾಯಕ್ ಮತ್ತಿತರರು ಉಪಸ್ಥಿತರಿದ್ದರು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ʼಸಾಮಾಜಿಕ ನ್ಯಾಯ ಮತ್ತು ಭದ್ರತೆʼ ವಿಷಯದ ಕುರಿತು ಉಪನ್ಯಾಸ

    22/05/2026

    ಜಲಮಾಲಿನ್ಯ ಉಂಟುಮಾಡುವ ವಸತಿ ಸಮುಚ್ಚಯಗಳ ಮಾಲೀಕರ ಮೇಲೆ ಕಾನೂನು ಕ್ರಮ: ಜಿಲ್ಲಾಧಿಕಾರಿ ಸೂಚನೆ

    22/05/2026

    ಸಣ್ಣ ಉದ್ದಿಮೆಗೆ ಸಹಾಯಧನ: ಅರ್ಜಿ ಆಹ್ವಾನ

    22/05/2026
    Leave A Reply Cancel Reply

    seventeen − 1 =

    Call us

    Click Here

    Call us

    Call us

    Call us
    Highest Viewed Recently
    • ಸಿದ್ಧಾಪುರ: ಚಿರತೆಯನ್ನು ಗುಂಡಿಟ್ಟು ಕೊಂದು ಪ್ರಕರಣದಲ್ಲಿ ನಾಲ್ವರ ಬಂಧನ
    • ಕಾಳಾವರ ವರದರಾಜ ಎಂ. ಶೆಟ್ಟಿ ಸ.ಪ್ರ.ದ ಕಾಲೇಜಿನಲ್ಲಿ ಪ್ರತಿಭಾ ದಿನಾಚರಣೆ
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ʼಸಾಮಾಜಿಕ ನ್ಯಾಯ ಮತ್ತು ಭದ್ರತೆʼ ವಿಷಯದ ಕುರಿತು ಉಪನ್ಯಾಸ
    • ಜಲಮಾಲಿನ್ಯ ಉಂಟುಮಾಡುವ ವಸತಿ ಸಮುಚ್ಚಯಗಳ ಮಾಲೀಕರ ಮೇಲೆ ಕಾನೂನು ಕ್ರಮ: ಜಿಲ್ಲಾಧಿಕಾರಿ ಸೂಚನೆ
    • ಸಣ್ಣ ಉದ್ದಿಮೆಗೆ ಸಹಾಯಧನ: ಅರ್ಜಿ ಆಹ್ವಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.