ಮುಂದಿನ ವರ್ಷ ಮಾರ್ಚ್ 8 ರಂದು ನಡೆಯಲಿರುವ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯ ಸಂದರ್ಭದಲ್ಲಿ 2015-16 ನೇ ಸಾಲಿನಲ್ಲಿ ಕೇಂದ್ರ ಸರ್ಕಾರವು ಪ್ರದಾನ ಮಾಡುವ ‘ನಾರಿ ಶಕ್ತಿ’ ಪುರಸ್ಕಾರ ಪ್ರಶಸ್ತಿಗಳಿಗಾಗಿ ಅರ್ಹ ವ್ಯಕ್ತಿ ಮತ್ತು ಸಂಸ್ಥೆಗಳಿಂದ ಪ್ರಸ್ತಾವನೆಗಳನ್ನು ಆಹ್ವಾನಿಸಲಾಗಿದೆ.
ಕೇಂದ್ರ ಸರ್ಕಾರದ ಮಾರ್ಗಸೂಚಿಯಂತೆ ಮಹಿಳಾ ಅಭಿವೃದ್ಧಿ ಕ್ಷೇತ್ರದಲ್ಲಿ ವಿಶೇಷವಾಗಿ ಬೇಟಿ ಬಚಾವೋ, ಬೇಟಿ ಬಡಾವೋ ಕ್ಷೇತ್ರದಲ್ಲಿ ಕೆಲಸ ಮಾಡಿರುವ ವ್ಯಕ್ತಿಗಳು ಜಿಲ್ಲಾಪಂಚಾಯತ್, ಗ್ರಾಮ ಪಂಚಾಯತ್‌ಗಳಿಗೆ ರಾಣಿ ರುದ್ರಮ್ಮ ದೇವಿ ಪ್ರಶಸ್ತಿ, ಮಹಿಳೆಯರಿಗೆ ಉತ್ತಮ ಸೌಕರ್ಯ, ಸೇವೆಯನ್ನು ಒದಗಿಸುವಲ್ಲಿ ಶ್ರಮಿಸಿದ ವ್ಯಕ್ತಿ ಹಾಗೂ ಅತ್ಯುತ್ತಮ ಸ್ಥಳೀಯ ಸಂಸ್ಥೆಗಳಿಗೆ ಮಾತಾ ಜೀಜಾ ಬಾಯಿ ಪ್ರಶಸ್ತಿ, ಲಿಂಗಾನುಪಾತವನ್ನು ಉತ್ತಮಪಡಿಸಲು ಶ್ರಮಿಸಿದ ವ್ಯಕ್ತಿ ಹಾಗೂ ಸಂಘ ಸಂಸ್ಥೆಗಳಿಗೆ ಕನ್ನಗಿ ದೇವಿ ಪ್ರಶಸ್ತಿ, ಮಹಿಳಾ ಉದ್ಯೋಗ ಕ್ಷೇತ್ರದಲ್ಲಿ ಶ್ರಮಿಸಿದ ವ್ಯಕ್ತಿ ಹಾಗೂ ಖಾಸಗಿ ಸಂಘ ಸಂಸ್ಥೆಗಳಿಗೆ/ಸಾರ್ವಜನಿಕ ಸಂಸ್ಥೆಗಳಿಗೆ ದೇವಿ ಅಹಲ್ಯಾಬಾಯಿ ಹೋಳ್ಕರ್ ಪ್ರಶಸ್ತಿಗಳನ್ನು ಪ್ರದಾನ ಮಾಡಲಾಗುವುದು.
ಪ್ರಶಸ್ತಿ ಪ್ರಸ್ತಾವನೆಗಳನ್ನು ಕೇಂದ್ರ ಸರ್ಕಾರದ ಮಾರ್ಗ ಸೂಚಿಯಲ್ಲಿ ತಿಳಿಸಿರುವಂತೆ ರಾಣಿ ರುದ್ರಮ್ಮ ದೇವಿ ಪ್ರಶಸ್ತಿಯನ್ನು ಪಂಚಾಯತ್ ರಾಜ್ ಮತ್ತು ಗ್ರಾಮೀಣಾಭಿವೃದ್ಧಿ ಇಲಾಖೆಯ ಮೂಲಕ, ಮಾತಾ ಜೀಜಾಬಾಯಿ ಪ್ರಶಸ್ತಿಯನ್ನು ನಗರಾಭಿವೃದ್ಧಿ ಇಲಾಖೆಯ ಮೂಲಕ ಕನ್ನಗಿದೇವಿ ಪ್ರಶಸ್ತಿಯನ್ನು ಹಾಗೂ ದೇವಿ ಅಹಲ್ಯಾಬಾಯಿ ಹೋಳ್ಕರ್ ಪ್ರಶಸ್ತಿಯನ್ನು ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆಗಳ ಮೂಲಕ ಸೂಕ್ತ ಶಿಫಾರಸ್ಸಿನೊಂದಿಗೆ ಜಿಲ್ಲಾ ಉಪನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಇವರಿಗೆ ಸೆಪ್ಟೆಂಬರ್ 8 ರೊಳಗೆ ಸಲ್ಲಿಸಬೇಕು. ತಡವಾಗಿ ಬಂದ ಪ್ರಸ್ತಾವನೆಗಳನ್ನು ಪರಿಗಣಿಸಲಾಗುವುದಿಲ್ಲ.
ಅರ್ಜಿ ನಮೂನೆಗಳಿಗಾಗಿ ಹಾಗೂ ಹೆಚ್ಚಿನ ಮಾಹಿತಿಗಳಿಗಾಗಿ ಜಿಲ್ಲಾ ಉಪ ನಿರ್ದೇಶಕರ ಕಛೇರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಕೊಠಡಿ ಸಂಖ್ಯೆ-2014, ಮೊದಲನೇ ಮಹಡಿ, ರಜತಾದ್ರಿ, ಬಿ ಬ್ಲಾಕ್ ಮಣಿಪಾಲ, ದೂರವಾಣಿ ಸಂಖ್ಯೆ: 0820-2574978ನ್ನು ಕಛೇರಿ ವೇಳೆಯಲ್ಲಿ ಸಂಪರ್ಕಿಸ ಬಹುದು ಎಂದು ಪ್ರಕಟಣೆ ತಿಳಿಸಿದೆ.