ಕುಂದಾಪ್ರ ಡಾಟ್ ಕಾಂ ಸುದ್ದಿ.
ಗಂಗೊಳ್ಳಿ: ಶ್ರೀ ವರಮಹಾಲಕ್ಷ್ಮೀ ಚಾರಿಟೇಬಲ್ ಟ್ರಸ್ಟ್ ವತಿಯಿಂದ ತ್ರಾಸಿ, ಹೊಸಾಡು ಹಾಗೂ ಗುಜ್ಜಾಡಿ ಗ್ರಾಮದ ಆಶಾ ಕಾರ್ಯಕರ್ತೆಯರು ಸೇರಿದಂತೆ ಸುಮಾರು 400ಕ್ಕೂ ಮಿಕ್ಕಿ ಬಡ ಕುಟುಂಬಗಳಿಗೆ ಟ್ರಸ್ಟ್‌ನ ಮುಖ್ಯಸ್ಥ ಗೋವಿಂದ ಬಾಬು ಪೂಜಾರಿ ಆಹಾರ ಸಾಮಾಗ್ರಿಗಳ ಕಿಟ್ ವಿತರಿಸಿದರು.
ಬಳಿಕ ಮಾತನಾಡಿದ ಅವರು, ಕರೋನಾದಿಂದ ನೂರಾರು ಬಡ ಕುಟುಂಬಗಳು ಸಂಕಷ್ಟದಲ್ಲಿವೆ. ಮೀನುಗಾರರು, ಕೂಲಿ ಕಾರ್ಮಿಕರು ಸೇರಿದಂತೆ ಅನೇಕರು ಕೆಲಸವಿಲ್ಲದೆ ಜೀವನ ನಡೆಸುವುದು ಕಷ್ಟವಾಗುತ್ತಿದೆ. ಹೀಗಾಗಿ ಇಂತಹ ಕುಟುಂಬಗಳ ಸಂಕಷ್ಟಗಳಿಗೆ ಸ್ಪಂದಿಸುವ ಉದ್ದೇಶದಿಂದ ಅನೇಕ ಗ್ರಾಮಗಳಲ್ಲಿನ ಬಡ ಕುಟುಂಬಗಳಿಗೆ ಹಾಗೂ ಕರೋನಾ ನಿಯಂತ್ರಣಕ್ಕೆ ಮುಂಚೂಣಿಯಲ್ಲಿರುವ ಆಶಾ ಕಾರ್ಯಕರ್ತೆಯರಿಗೆ ಆಹಾರ ಸಾಮಾಗ್ರಿಗಳ ಕಿಟ್ ವಿತರಣೆ ಮಾಡಲಾಗುತ್ತಿದೆ ಎಂದರು.
ಈ ಸಂದರ್ಭ ಗುರುರಾಜ ಪೂಜಾರಿ, ಗಂಗೊಳ್ಳಿ ಪ್ರಾಥಮಿಕ ಮೀನುಗಾರರ ಸಹಕಾರಿ ಸಂಘದ ಅಧ್ಯಕ್ಷ ಸದಾಶಿವ ಖಾರ್ವಿ, ಉಪಾಧ್ಯಕ್ಷ ಸೂರಜ್ ಖಾರ್ವಿ, ಗುಜ್ಜಾಡಿ ಗ್ರಾಪಂ ಸದಸ್ಯ ಹರೀಶ ಮೇಸ್ತ, ಮಿಥುನ್ ದೇವಾಡಿಗ ತ್ರಾಸಿ, ರವೀಂದ್ರ ಖಾರ್ವಿ, ರವಿ ಶೆಟ್ಟಿಗಾರ್ ತ್ರಾಸಿ, ಗುಜ್ಜಾಡಿ ಗ್ರಾಪಂ ಉಪಾಧ್ಯಕ್ಷ ರಾಜು ಪೂಜಾರಿ, ಪ್ರಸಾದ್ ಬೈಂದೂರು ಮತ್ತಿತರರು ಉಪಸ್ಥಿತರಿದ್ದರು.