ವಿದ್ಯಾರ್ಥಿ ನಾಯಕರ ಬಂಧನ ಖಂಡಿಸಿ ಸಿಎಫ್ಐನಿಂದ ಜಿಲ್ಲಾದ್ಯಂತ ಪ್ರತಿಭಟನೆ

Call us

Call us

Call us

Call us

Click here

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಉತ್ತರಪ್ರದೇಶದಲ್ಲಿ ನಡೆದ ಮನಿಷಾ ಎಂಬ ದಲಿತ ಬಾಲಕಿಯ ಅತ್ಯಾಚಾರ ಹಾಗೂ ಕೊಲೆ ಪ್ರಕರಣವು ದೇಶಾದ್ಯಂತ ಸುದ್ದಿಯಾಗಿತ್ತು, ಬಾಲಕಿಯ ಮನೆಗೆ ಭೇಟಿ ನೀಡಲು ತೆರಳಿದ ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ರಾಷ್ಟ್ರೀಯ ನಾಯಕರಾದ ಆತಿಕುರ್ರಹ್ಮಾನ್,ಮಸೂದ್ ಹಾಗೂ ಪತ್ರಕರ್ತ ಸಿದ್ದೀಕ್ ಕಪ್ಪನ್ , ಕ್ಯಾಂಪಸ್ ಫ್ರಂಟ್ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ರವೂಫ್ ಶರೀಫ್ ನ್ನು ಕೂಡ ಅನ್ಯಾಯವಾಗಿ ಬಂಧಿಸಿ ಇಂದಿಗೆ 250 ದಿನಗಳಾಗಿದ್ದು, ಇದನ್ನು ಖಂಡಿಸಿ ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ರಾಷ್ಟ್ರಾದ್ಯಂತ ಕರೆ ನೀಡಿದ ಪ್ರತಿಭಟನೆಯ ಭಾಗವಾಗಿ ಕ್ಯಾಂಪಸ್ ಫ್ರಂಟ್ ಕುಂದಾಪುರ ಜಿಲ್ಲಾ ಸಮಿತಿ ವತಿಯಿಂದ ಜಿಲ್ಲೆಯ ಬಸ್ರೂರ್, ಕಂಡ್ಲೂರ್, ಗಂಗೊಳ್ಳಿ, ಶಿರೂರಿನಲ್ಲಿ, ಪ್ರತಿಭಟನೆ ನಡೆಯಿತು.

Call us

Click Here

Click here

ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ಕುಂದಾಪುರ ಜಿಲ್ಲಾಧ್ಯಕ್ಷರಾದ ಫಯೀಜ್ ಬಸ್ರೂರ್ ಮಾತನಾಡಿ, ಮೋದಿಯ ಸರ್ವಾಧಿಕಾರದ ದೇಶದಲ್ಲಿ ಇವರ ವಿರುಧ್ದ ಯಾರೆಲ್ಲಾ ಧ್ವನಿಯೆತ್ತುತ್ತಾರೋ ಅವರನ್ನು ಇಂದು ಭೇಟೆಯಾಡುತ್ತಿದ್ದಾರೆ , ಅತ್ಯಾಚಾರಕ್ಕೊಳಪಟ್ಟು ಕೊಲೆಗೈಯಲ್ಪಟ್ಟ ಬಾಲಕಿಯ ಮನೆಗೆ ಭೇಟಿ ನೀಡುವುದು ಕೂಡ ಈ ದೇಶದಲ್ಲಿ ದೇಶದ್ರೋಹವಾಗುತ್ತಿದೆ , ಈ ಸರ್ವಾಧಿಕಾರಿ ಧೋರಣೆಯನ್ನು ಪ್ರತಿಯೊಂದು ಜಾತ್ಯಾತೀತ ಮೌಲ್ಯದ ಮೇಲೆ ನಂಬಿಕೆಯಿರಿಸಿದ ವ್ಯಕ್ತಿಯು ಖಂಡಿಸಬೇಕಾಗಿದೆ ಎಂದು ಹೇಳಿದರು.

ಈ ಅಕ್ರಮ ಬಂಧನದಿಂದ ವಿದ್ಯಾರ್ಥಿ ನಾಯಕರನ್ನು,ಪತ್ರಕರ್ತರನ್ನು ಬಿಡುಗಡೆಗೊಳಿಸಿ ಎಂದು ಪ್ರತಿಭಟನಾಕಾರರು ಆಗ್ರಹಿಸಿದರು. ಈ ಸಂದರ್ಭದಲ್ಲಿ ಸಾಹಾದ್ ಬಸ್ರೂರ್ ,ಮುಜಾಹಿದ್ ,ಜವಾದ್ , ಜೀಶಾನ್ ,ಸಿಹಾನ್ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

2 × five =