Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಇಂದು ರಾತ್ರಿ 7ರಿಂದ ಸೋಮವಾರ ಬೆಳಿಗ್ಗೆ 5ರ ತನಕ ವಾರಾಂತ್ಯದ ಕರ್ಪ್ಯೂ
    ಉಡುಪಿ ಜಿಲ್ಲೆ

    ಇಂದು ರಾತ್ರಿ 7ರಿಂದ ಸೋಮವಾರ ಬೆಳಿಗ್ಗೆ 5ರ ತನಕ ವಾರಾಂತ್ಯದ ಕರ್ಪ್ಯೂ

    Updated:18/06/2021No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಉಡುಪಿ ಜೂ.18: ಜಿಲ್ಲೆಯಲ್ಲಿ ಕೋವಿಡ್ ಪ್ರಕರಣಗಳನ್ನು ಇನ್ನಷ್ಟು ಪರಿಣಾಮಕಾರಿಯಾಗಿ ನಿಯಂತ್ರಿಸುವ ಸಲುವಾಗಿ ವಾರಾಂತ್ಯ ಲಾಕ್ ಡೌನ್ ಜಾರಿ ಮಾಡಿ ಜೂ.12 ರಂದು ಜಿಲ್ಲಾಧಿಕಾರಿ ಜಿ. ಜಗದೀಶ್ ಅವರು ಆದೇಶ ಹೊರಡಿಸಿದ್ದಾರೆ.

    Click Here

    Call us

    Click Here

    ಅದರಂತೆ ಶುಕ್ರವಾರ (ಜೂ.18) ರಾತ್ರಿ 7.00 ಗಂಟೆಯಿಂದ ಪ್ರತಿ ಸೋಮವಾರ ಬೆಳಿಗ್ಗೆ 5.00 ಗಂಟೆಯವರೆಗೆ ಜಿಲ್ಲೆಯಲ್ಲಿ ವಾರಾಂತ್ಯದ ಕರ್ಪ್ಯೂ ಜಾರಿಯಲ್ಲಿರುತ್ತದೆ. ಈ ಅವಧಿಯಲ್ಲಿ ಜಿಲ್ಲೆಯಲ್ಲಿ ಆಹಾರ, ದಿನಸಿ, ಹಣ್ಣುಗಳು ಮತ್ತು ತರಕಾರಿಗಳು, ಮಾಂಸ ಮತ್ತು ಮೀನು, ಡೈರಿ ಮತ್ತು ಹಾಲಿನ ಕೇಂದ್ರಗಳು, ಮತ್ತು ಪ್ರಾಣಿಗಳ ಮೇವನ್ನು ವ್ಯಾಪಾರ ಮಾಡುವ ಅಂಗಡಿಗಳಿಗೆ ಬೆಳಿಗೆ 6 ರಿಂದ ಮಧ್ಯಾಹ್ನ 2.00 ಗಂಟೆಯವರೆಗೆ ಕಾರ್ಯನಿರ್ವಹಿಸಲು ಅವಕಾಶವಿರುತ್ತದೆ. ಬೀದಿಬದಿ ವ್ಯಾಪಾರಸ್ಥರು ಬೆಳಿಗ್ಗೆ 6.00 ರಿಂದ ಮಧ್ಯಾಹ್ನ 2.00 ಗಂಟೆಯವರೆಗೆ ಕಾರ್ಯನಿರ್ವಹಿಸಲು ಅವಕಾಶ ನೀಡಲಾಗಿದೆ ಆದರೆ ಯಾವುದೇ ತಯಾರಿಸಲಾದ ಆಹಾರ, ಪಾನಿಪುರಿ, ಚಾಟ್ಸ್ ಮುಂತಾದವುಗಳ ಮಾರಾಟಕ್ಕೆ ಅವಕಾಶವಿಲ್ಲ ಎಂದು ಆದೇಶದಲ್ಲಿ ತಿಳಿಸಲಾಗಿದೆ.

    ಆರೋಗ್ಯ ತುರ್ತು ಸಂದರ್ಭದಲ್ಲಿ ರೋಗಿಗಳು ಮತ್ತು ಅವರ ಪರಿಚಾರಕರು/ತುರ್ತು ಅಗತ್ಯವಿರುವ ವ್ಯಕ್ತಿಗಳು, ವ್ಯಾಕ್ಸಿನೇಷನ್ ತೆಗೆದುಕೊಳ್ಳಲು ಉದ್ದೇಶಿಸಿರುವ ಆರ್ಹರು ಕನಿಷ್ಠ ದಾಖಲೆಗಳೊಂದಿಗೆ ಸಂಚರಿಸಲು ಅನುಮತಿಸಲಾಗಿದೆ. ಸಾರ್ವಜನಿಕ ವಿತರಣಾ ವ್ಯವಸ್ಥೆ(PDS)ಯ ಅಂಗಡಿಗಳಿಗೆ ಕಾರ್ಯನಿರ್ವಹಿಸಲು ಅವಕಾಶವಿದ್ದು, ಬೆಳಿಗ್ಗೆ 6 ರಿಂದ ಮಧ್ಯಾಹ್ನ 2.00 ಗಂಟೆಯವರೆಗೆ ಕಾರ್ಯನಿರ್ವಹಿಸಲು ಅವಕಾಶವಿರುತ್ತದೆ. ಸ್ವತಂತ್ರ ಮಧ್ಯದಂಗಡಿಗಳು ಮತ್ತು ಮಳಿಗೆಗಳಲ್ಲಿ ಬೆಳಿಗ್ಗೆ 6.00 ರಿಂದ ಮಧ್ಯಾಹ್ನ 2ರ ರವರೆಗೆ ಪಾರ್ಸೆಲ್ ಕೊಂಡುಹೋಗಲು ಮಾತ್ರ ಅನುಮತಿಸಲಾಗಿದೆ.

    ರೆಸ್ಟೋರೆಂಟ್ ಗಳಲ್ಲಿ ಮತ್ತು ತಿನಿಸುಕೇಂದ್ರಗಳಲ್ಲಿ, ಆಹಾರಗಳನ್ನು ತೆಗೆದುಕೊಂಡು ಹೋಗಲು ಮತ್ತು ಹೋಮ್ ಡೆಲಿವರಿಗಳನ್ನು ಮಾತ್ರ ಅನುಮತಿಸಲಾಗಿದೆ. ಇದರೊಂದಿಗೆ ದೂರದ ಪ್ರಯಾಣದ ರೈಲುಗಳು ಮತ್ತು ವಿಮಾನ ಪ್ರಯಾಣಗಳಿಗೆ ಅನುಮತಿಸಲಾಗಿದ್ದು. ವಿಮಾನ ನಿಲ್ದಾಣ, ರೈಲ್ವೆ ನಿಲ್ದಾಣಕ್ಕೆ , ಬಸ್ ನಿಲ್ದಾಣಕ್ಕೆ ಹಾಗೂ ವಿಮಾನ ನಿಲ್ದಾಣಗಳಿಂದ, ರೈಲ್ವೆ ನಿಲ್ದಾಣಗಳಿಂದ ಬಸ್ ನಿಲ್ದಾಣಗಳಿಂದ ಹೊರಡುವ ಸಾರ್ವಜನಿಕ ಸಾರಿಗೆ ವಾಹನಗಳು, ಖಾಸಗಿ ವಾಹನಗಳು ಮತ್ತು ಟ್ಯಾಕ್ಸಿಗಳ ಓಡಾಟವನ್ನು ಅನುಮತಿಸಲಾಗಿದೆ.ಪ್ರಯಾಣ ಮಾಡುವ ಸಂದರ್ಭದಲ್ಲಿ ಪ್ರಯಾಣಿಕರು ಸೂಕ್ತ ಪ್ರಯಾಣದ ದಾಖಲೆಗಳು, ಟಿಕೆಟುಗಳನ್ನು ಸಲ್ಲಿಸುವುದು ಕಡ್ಡಾಯವಾಗಿದೆ.

    Click here

    Click here

    Click here

    Click Here

    Call us

    Call us

    ಹಾಗೂ ಕೋವಿಡ್ ಮಾರ್ಗ ಸೂಚಿಗಳನ್ನು ಕಡ್ಡಾಯವಾಗಿ ಪಾಲಿಸಿಕೊಂಡು ಈಗಾಗಲೇ ನಿಗದಿಯಾಗಿರುವ ಮದುವೆ ಯನ್ನು ಸರಳವಾಗಿ ಆಯಾ ಮನೆಗಳಲ್ಲಿ ಕುಟುಂಬದ ಸದಸ್ಯರು ಸಂಬಂಧಿಕರು ಸೇರಿದಂತೆ 40 ಜನರನ್ನು ಒಳಗೊಂಡು ನಡೆಸಲು ಅನುಮತಿಸಲಾಗಿದೆ ಹಾಗೂ ಶವಸಂಸ್ಕಾರ ಅಂತ್ಯಕ್ರಿಯೆಗಳನ್ನು ಗರಿಷ್ಠ 5 ಜನರೊಂದಿಗೆ ಕೋವಿಡ್ ನಿಯಮಗಳನ್ನು ಪಾಲಿಸಿಕೊಂಡು ನಡೆಸಲು ಅನುಮತಿಸಲಾಗಿದೆ.

    ಇನ್ನು ಉಳಿದಂತೆ ವಾರಾಂತ್ಯ ಕರ್ಫ್ಯೂ ಅವಧಿಯಲ್ಲಿ ಎಲ್ಲಾ ರಾಜ್ಯ, ಮತ್ತು ಕೇಂದ್ರ ಸರ್ಕಾರದ ಕಚೇರಿಗಳು ಮತ್ತು ಅವುಗಳ ಸ್ವಾಯತ್ತ ಸಂಸ್ಥೆಗಳು, ನಿಗಮಗಳು, ಇತ್ಯಾದಿ, ತುರ್ತು, ಅಗತ್ಯ ಸೇವೆಗಳು ಮತ್ತು COVID-19 ಕಂಟೈನ್ಮೆಂಟ್ ಮತ್ತು ಮ್ಯಾನೇಜ ಮೆಂಟ್ ಕರ್ತವ್ಯಗಳು ಸಂಪೂರ್ಣವಾಗಿ ಕಾರ್ಯನಿರ್ವಹಿಸುತ್ತದೆ ಮತ್ತು ಇಂತಹ ಸಂಸ್ಥೆಗಳಲ್ಲಿ ಕಾರ್ಯ ನಿರ್ವಹಿಸುವ ಅಧಿಕಾರಿಗಳು / ಸಿಬ್ಬಂದಿಗಳಿಗೆ ಮುಕ್ತ ಸಂಚಾರಕ್ಕೆ ಅವಕಾಶವಿರುತ್ತದೆ.

    24/7 ಸಮಯಾವಧಿಯಲ್ಲಿ ಕಾರ್ಯಚರಿಸುವ ತುರ್ತು ಮತ್ತು ಅಗತ್ಯ ಸೇವೆಗಳನ್ನು ಪೂರೈಸುವ ಎಲ್ಲಾ ಕೈಗಾರಿಕೆಗಳು , ಕಂಪನಿಗಳು , ಸಂಸ್ಥೆಗಳು ಕಾರ್ಯಾನಿರ್ವಹಿಸಲು ಅನುಮತಿ ನೀಡಲಾಗಿದೆ. ಅಂತಹ ಸಂಸ್ಥೆಗಳ ನೌಕರರು ಆಯಾ ಸಂಘ ಸಂಸ್ಥೆ ನೀಡುವ ಗುರುತಿನ ಚೀಟಿಯೊಂದಿಗೆ ಸಂಚರಿಸಬಹುದಾಗಿದೆ. ಸಾಧ್ಯವಾದಷ್ಟು ಮಟ್ಟಿಗೆ, ನೌಕರರನ್ನು ಮನೆಯಿಂದ ಕೆಲಸ ಮಾಡಲು ಪ್ರೋತ್ಸಾಹಿಸಬೇಕು ಎಂದು ತಿಳಿಸಲಾಗಿದೆ. ಹಾಗೂ ದೂರವಾಣಿ ಹಾಗೂ ಅಂತರ್ಜಾಲ ಸೇವೆಯನ್ನು ಪೂರೈಸುವ ನೌಕರರು ಹಾಗೂ ವಾಹನಗಳನ್ನು ಸಂಬಂಧಿಸಿದ ಸಂಸ್ಥೆಯಿಂದ ಪಡೆದಿರುವ ಸೂಕ್ತ ಗುರುತಿನ ಚೀಟಿ ಯೊಂದಿಗೆ ಸಂಚರಿಸಬಹುದಾಗಿದೆ.

    ಮಾಹಿತಿ ತಂತ್ರಜ್ಞಾನ ಮತ್ತು ಮಾಹಿತಿ ತಂತ್ರಜ್ಞಾನ ಆಧಾರಿತ ಕಂಪನಿ / ಸಂಸ್ಥೆ (IT and ITeS companies organization) ಗಳಲ್ಲಿ ಕಾರ್ಯ ನಿರ್ವಹಿಸುವ ಅವಶ್ಯಕ ಸಿಬ್ಬಂದಿ ಹಾಗೂ ಕಾರ್ಮಿಕರನ್ನು ಮಾತ್ರ ಬಳಸಿಕೊಂಡು ಕಾರ್ಯನಿರ್ವಹಿ ಸುವುದು ಅವರನ್ನು ಹೊರತು ಪಡಿಸಿ ಇತರೆ ಸಿಬ್ಬಂದಿ ಹಾಗೂ ಕೆಲಸಗಾರರು ಮನೆಗಳಲ್ಲಿಯೇ ಕೆಲಸ ನಿರ್ವಹಿಸುವಂತೆ ಸೂಚನೆ ನೀಡಲಾಗಿದೆ. ಇದರೊಂದಿಗೆ ಜನರು ಮನೆಯಿಂದ ಹೊರಕ್ಕೆ ಸಂಚರಿಸುವುದನ್ನು ಕಡಿಮೆ ಮಾಡಲು COVID 19 ನಿರ್ವಹಣೆಗಾಗಿರುವ ರಾಷ್ಟ್ರೀಯ ನಿರ್ದೇಶನಗಳಿಗೆ ಬದ್ಧರಾಗಿ ಹೋಮ್ ಡೆಲಿವರಿ ಸೇವೆಗಳನ್ನು ನೀಡಲು ಪ್ರೋತ್ಸಾಹಿಸಬೇಕು ಎಂದು ಆದೇಶದಲ್ಲಿ ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ʼಸಾಮಾಜಿಕ ನ್ಯಾಯ ಮತ್ತು ಭದ್ರತೆʼ ವಿಷಯದ ಕುರಿತು ಉಪನ್ಯಾಸ

    22/05/2026

    ಜಲಮಾಲಿನ್ಯ ಉಂಟುಮಾಡುವ ವಸತಿ ಸಮುಚ್ಚಯಗಳ ಮಾಲೀಕರ ಮೇಲೆ ಕಾನೂನು ಕ್ರಮ: ಜಿಲ್ಲಾಧಿಕಾರಿ ಸೂಚನೆ

    22/05/2026

    ಸಣ್ಣ ಉದ್ದಿಮೆಗೆ ಸಹಾಯಧನ: ಅರ್ಜಿ ಆಹ್ವಾನ

    22/05/2026
    Leave A Reply Cancel Reply

    one × 1 =

    Call us

    Click Here

    Call us

    Call us

    Call us
    Highest Viewed Recently
    • ಸಿದ್ಧಾಪುರ: ಚಿರತೆಯನ್ನು ಗುಂಡಿಟ್ಟು ಕೊಂದು ಪ್ರಕರಣದಲ್ಲಿ ನಾಲ್ವರ ಬಂಧನ
    • ಕಾಳಾವರ ವರದರಾಜ ಎಂ. ಶೆಟ್ಟಿ ಸ.ಪ್ರ.ದ ಕಾಲೇಜಿನಲ್ಲಿ ಪ್ರತಿಭಾ ದಿನಾಚರಣೆ
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ʼಸಾಮಾಜಿಕ ನ್ಯಾಯ ಮತ್ತು ಭದ್ರತೆʼ ವಿಷಯದ ಕುರಿತು ಉಪನ್ಯಾಸ
    • ಜಲಮಾಲಿನ್ಯ ಉಂಟುಮಾಡುವ ವಸತಿ ಸಮುಚ್ಚಯಗಳ ಮಾಲೀಕರ ಮೇಲೆ ಕಾನೂನು ಕ್ರಮ: ಜಿಲ್ಲಾಧಿಕಾರಿ ಸೂಚನೆ
    • ಸಣ್ಣ ಉದ್ದಿಮೆಗೆ ಸಹಾಯಧನ: ಅರ್ಜಿ ಆಹ್ವಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.